Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:15 - ಕನ್ನಡ ಸತ್ಯವೇದವು J.V. (BSI)

15 ಆಗ ನಾನು ನಿಮ್ಮನ್ನೂ ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಪ್ರತಿಜ್ಞೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಪ್ರಾಣಿಗಳನ್ನು ಹಾಳುಮಾಡುವ ಪ್ರಳಯವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ನಿಮ್ಮನ್ನೂ ಎಲ್ಲ ಜೀವರಾಶಿಗಳನ್ನೂ ಕುರಿತು ನಾನು ಮಾಡಿದ ಪ್ರತಿಜ್ಞೆಯನ್ನು ನೆನೆಸಿಕೊಳ್ಳುತ್ತೇನೆ. ಇನ್ನು ಮುಂದೆ ಜಲ ಹೆಚ್ಚಿ ಭೂಪ್ರಾಣಿಗಳನ್ನೆಲ್ಲಾ ಹಾಳುಮಾಡುವ ಪ್ರಳಯ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ಈ ಮುಗಿಲುಬಿಲ್ಲನ್ನು ನೋಡುವಾಗ, ನನಗೂ ನಿಮಗೂ ಮತ್ತು ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಆಗಿರುವ ಒಡಂಬಡಿಕೆಯನ್ನು ನೆನಪುಮಾಡಿಕೊಳ್ಳುವೆನು. ಜಲಪ್ರಳಯವು ಇನ್ನೆಂದಿಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ನಾಶಗೊಳಿಸುವುದಿಲ್ಲ ಎಂಬುದೇ ಈ ಒಡಂಬಡಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ನಾನು ನನಗೂ ನಿಮಗೂ ಪ್ರತಿಯೊಂದು ಜೀವಿಗಳಿಗೂ ಮಧ್ಯೆಯಿರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಎಲ್ಲಾ ಜೀವಿಗಳನ್ನು ನಾಶಮಾಡುವ ಪ್ರಳಯವಾಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:15
14 ತಿಳಿವುಗಳ ಹೋಲಿಕೆ  

ಆದದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ


ಹೀಗಾದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಸಂಗಡ ಎಂದಿಗೂ ತಪ್ಪದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ಇಸ್ರಾಯೇಲ್‍ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವನು.


ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಕವಚದ ಪಟ್ಟಿಗಳಲ್ಲಿ ಬಿಗಿಸಬೇಕು. ಅವು ಇಸ್ರಾಯೇಲ್ಯರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗೆಲ್ಲಾ ಇಸ್ರಾಯೇಲ್ಯರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವದಕ್ಕಾಗಿ ತನ್ನ ಎರಡು ಭುಜಗಳ ಮೇಲೆ ಧರಿಸಿಕೊಂಡು ಹೋಗುವನು.


ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ, ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.


ನಮ್ಮ ದೇವರೇ, ಮಹೋನ್ನತನೂ ಪರಾಕ್ರವಿುಯೂ ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೆ ನಮ್ಮ ಅರಸರಿಗೂ ಪ್ರಭುಗಳಿಗೂ ಯಾಜಕರಿಗೂ ಪ್ರವಾದಿಗಳಿಗೂ ಹಿರಿಯರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದೆಣಿಸಬೇಡ.


ಅದರ ಸುವಾಸನೆಯು ಯೆಹೋವನಿಗೆ ಗಮಗವಿುಸಲು ಆತನು ಹೃದಯದೊಳಗೆ - ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿವಿುತ್ತವಾಗಿ ಭೂವಿುಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ.


ಆ ಪ್ರತಿಜ್ಞೆ ಯಾವದೆಂದರೆ - ಇನ್ನು ಮೇಲೆ ಎಲ್ಲಾ ಪ್ರಾಣಿಗಳು ಪ್ರಳಯದಿಂದ ನಾಶವಾಗುವದಿಲ್ಲ; ಇನ್ನು ಮುಂದೆ ಭೂವಿುಯನ್ನು ಹಾಳು ಮಾಡುವ ಪ್ರಳಯವು ಬರುವದೇ ಇಲ್ಲ ಎಂದು ಹೇಳಿದನು.


ನಾನು ಭೂಲೋಕದ ಮೇಲೆ ಮೇಘಗಳನ್ನು ಕವಿಸುವಾಗ ಆ ಬಿಲ್ಲು ಮೇಘಗಳಲ್ಲಿ ಕಂಡು ಬರುವದು.


ನಿಮ್ಮ ಕೂಡ ನಾವೆಯಿಂದ ಹೊರಟುಬಂದ ಪಶುಪಕ್ಷಿಮೃಗಾದಿ ಸಕಲ ಭೂಜಂತುಗಳನ್ನೂ ಕುರಿತು ಸ್ಥಿರಪ್ರತಿಜ್ಞೆ ಮಾಡುತ್ತೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು