Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:7 - ಕನ್ನಡ ಸತ್ಯವೇದವು J.V. (BSI)

7 ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂವಿುಯ ಮೇಲೆ ನಿಮಗೆ ಬಹು ಸಂತಾನವಾಗಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವು ಹೆಚ್ಚಿ ಅಭಿವೃದ್ಧಿಯಾಗಿರಿ, ನಿಮ್ಮ ಸಂಖ್ಯೆ ಬೆಳೆಯಲಿ ಭೂಮಿಯಲ್ಲಿ."

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನೋಹನೇ, ನಿನಗೂ ನಿನ್ನ ಮಕ್ಕಳಿಗೂ ಅನೇಕ ಮಕ್ಕಳು ಹುಟ್ಟಲಿ. ನೀವು ಅಭಿವೃದ್ಧಿಗೊಂಡು ಭೂಮಿಯಲ್ಲಿ ತುಂಬಿಕೊಳ್ಳಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ನೀವು ಬಹುಸಂತಾನವಾಗಿ ಹೆಚ್ಚಿರಿ. ಸಂಖ್ಯೆಯಲ್ಲಿಯೂ ಅಧಿಕವಾಗಿ ಭೂಮಿಯಲ್ಲಿ ಹೆಚ್ಚಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:7
7 ತಿಳಿವುಗಳ ಹೋಲಿಕೆ  

ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ - ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.


ಈ ಮೂವರು ನೋಹನ ಮಕ್ಕಳು; ಇವರಿಂದಲೇ ಭೂವಿುಯಲ್ಲೆಲ್ಲಾ ಹರಡಿಕೊಂಡಿರುವ ಜನರು ಉತ್ಪತ್ತಿಯಾದರು.


ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿವಿು ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂವಿುಯ ಮೇಲೆ ಬಹುಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ ಎಂದು ಆಜ್ಞಾಪಿಸಲು


ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ - ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂವಿುಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂವಿುಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನಮಾಡಿರಿ ಅಂದನು.


ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ -


ಇದಲ್ಲದೆ ನಾನು ಸರ್ವಶಕ್ತನಾದ ದೇವರು. ನೀನು ಬಹು ಸಂತಾನವುಳ್ಳವನಾಗಿ ಹೆಚ್ಚು. ನಿನ್ನಿಂದ ಜನಾಂಗವುಂಟಾಗುವದು; ಅನೇಕ ಜನಾಂಗಗಳೂ ಅರಸರೂ ನಿನ್ನಿಂದ ಹುಟ್ಟುವರು.


ಸಂಸಾರಿಗಳಾಗಿ ಗಂಡುಹೆಣ್ಣು ಮಕ್ಕಳನ್ನು ಪಡೆಯಿರಿ; ನಿಮ್ಮ ಗಂಡುಗಳಿಗೆ ಹೆಣ್ಣುಗಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಗಳನ್ನು ಗಂಡುಗಳಿಗೆ ಕೊಡಿರಿ; ಅವರೂ ಗಂಡು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕಡಿಮೆಯಾಗದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು