Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:10 - ಕನ್ನಡ ಸತ್ಯವೇದವು J.V. (BSI)

10 ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು; ಅದು ಅದರ ಅರಮನೆಗಳನ್ನು ನುಂಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಅದರ ಅರಮನೆಗಳನ್ನು ನುಂಗಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದಕಾರಣ ನಾನು ಟೈರಿನ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಹಾಕುವೆನು. ಆ ಬೆಂಕಿಯು ತೂರಿನ ಎತ್ತರವಾದ ಬುರುಜುಗಳನ್ನು ನಾಶಮಾಡುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ನಾನು ಟೈರ್ ಪಟ್ಟಣದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅಲ್ಲಿಯ ಕೋಟೆಗಳನ್ನು ದಹಿಸಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:10
8 ತಿಳಿವುಗಳ ಹೋಲಿಕೆ  

ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರವಿುಸಿ ಪೌಳಿಗೋಡೆಯನ್ನು ಸಮುದ್ರದೊಳಕ್ಕೆ ಹೊಡೆದು ಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವದು.


ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಅರಮನೆಗಳನ್ನು ನುಂಗಿಬಿಡುವದು;


ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.


ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು ನಿನ್ನ ಸರಕುಗಳನ್ನು ಕೊಳ್ಳೆಹೊಡೆದು ನಿನ್ನ ಗೋಡೆಗಳನ್ನು ಉರುಳಿಸಿ ನಿನ್ನ ವಿನೋದಭವನಗಳನ್ನು ಕಿತ್ತುಹಾಕಿ ನಿನ್ನ ಕಲ್ಲುಮರಮಣ್ಣುಗಳನ್ನು ಸಮುದ್ರದ ಪಾಲುಮಾಡುವರು.


ಏಕಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಕಳೆದುಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.


ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ ಅದರ ಕೊತ್ತಲಗಳನ್ನು ಕೆಡವಿಹಾಕುವವು; ನಾನು ಅದರ ಮಣ್ಣನ್ನು ಕೆರೆದು ಅದನ್ನು ಗುಡಿಸಿ ಗಂಡಾಂತರಮಾಡುವೆನು;


ನಿನ್ನ ಅಪಾರವಾದ ಅಪರಾಧಗಳಿಂದಲೂ ಅನ್ಯಾಯವಾದ ವ್ಯಾಪಾರದಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸುಮಾಡಿದಿ; ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿತು, ನೋಡುವವರೆಲ್ಲರ ಕಣ್ಣೆದುರಿಗೆ ನಿನ್ನನ್ನು ಬೂದಿಮಾಡಿಬಿಟ್ಟೆನು;


ತೂರೇ, ಚೀದೋನೇ, ಫಿಲಿಷ್ಟಿಯ ರಾಷ್ಟ್ರಗಳೇ, ನನ್ನ ಗೊಡವೆ ನಿಮಗೇಕೆ? ನನಗೆ ಪ್ರತೀಕಾರಮಾಡುವಿರೋ? ಸುಮ್ಮನೆ ತಂಟೆಮಾಡುವಿರೋ? ನೀವು ಮಾಡುವ ಕೇಡನ್ನು ತ್ವರೆಯಾಗಿ, ಶೀಘ್ರವಾಗಿ ನಿಮ್ಮ ತಲೆಗೇ ತರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು