ಆಮೋಸ 1:11 - ಕನ್ನಡ ಸತ್ಯವೇದವು J.V. (BSI)11 ಯೆಹೋವನು ಇಂತೆನ್ನುತ್ತಾನೆ - ಎದೋಮು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಕತ್ತಿಹಿಡಿದು ತನ್ನ ಸಹೋದರನನ್ನು ಹಿಂದಟ್ಟಿ ಕರುಣೆಯನ್ನು ತೊರೆದು ಸಿಟ್ಟಿನಿಂದ ಸದಾ ಸಿಗಿದುಬಿಡುತ್ತಾ ತನ್ನ ಕೋಪವನ್ನು ಶಾಶ್ವತಮಾಡಿಕೊಂಡಿತಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರ ಇಂತೆನ್ನುತ್ತಾರೆ: ಎದೋಮ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ಸೋದರ ನಾಡಿನವರಾದ ಇಸ್ರಯೇಲರನ್ನು ಓಡಿಸಿದರು. ಅವರಿಗೆ ಕರುಣೆತೋರದೆ, ಕೊನೆಯವರೆವಿಗೂ ರೋಷವನ್ನೇ ಸಾಧಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಎದೋಮ್ಯರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಎದೋಮ್ ತನ್ನ ಸಹೋದರನಾದ ಇಸ್ರೇಲನ್ನು ಕತ್ತಿಯಿಂದ ಹತಿಸಿತು. ಎದೋಮ್ ಯಾವ ಕರುಣೆಯನ್ನೂ ತೋರಲಿಲ್ಲ. ಅದರ ಕೋಪವು ನಿರಂತರವಾಗಿ ಮುಂದುವರಿಯಿತು; ಕ್ರೂರಪ್ರಾಣಿಯಂತೆ ಇಸ್ರೇಲನ್ನು ಹರಿದುಹರಿದು ಹಾಕಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎದೋಮಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ತನ್ನ ಸಹೋದರನನ್ನು ಖಡ್ಗವನ್ನು ಹಿಂಬಾಲಿಸಿದನು. ಮತ್ತು ದೇಶದ ಸ್ತ್ರೀಯರನ್ನು ಕೊಂದುಹಾಕಿದನು. ಏಕೆಂದರೆ ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು. ಆತನು ರೌದ್ರವನ್ನು ನಿತ್ಯವಾಗಿ ಇಟ್ಟುಕೊಂಡನು. ಅಧ್ಯಾಯವನ್ನು ನೋಡಿ |