ಆಮೋಸ 1:13 - ಕನ್ನಡ ಸತ್ಯವೇದವು J.V. (BSI)13 ಯೆಹೋವನು ಇಂತೆನ್ನುತ್ತಾನೆ - ಅಮ್ಮೋನ್ಯರು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅವರಿಗಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನು ಇಂತೆನ್ನುತ್ತಾನೆ, “ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರ ಇಂತೆನ್ನುತ್ತಾರೆ: “ಅಮ್ಮೋನ್ಯರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ನಾಡಿನ (ಗಡಿ) ವಿಸ್ತರಣೆಗಾಗಿ ಗರ್ಭಿಣಿಯರ ಹೊಟ್ಟೆಯನ್ನೇ ತಿವಿದು ಸೀಳಿಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನು ಹೇಳುವುದೇನೆಂದರೆ, “ಅನೇಕಾನೇಕ ಅಪರಾಧಗಳನ್ನು ಮಾಡಿದ ಅಮ್ಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಆ ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅಮ್ಮೋನಿನ ಮಕ್ಕಳು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ತಮ್ಮ ಮೇರೆಯನ್ನು ವಿಸ್ತಾರ ಮಾಡುವುದಕ್ಕಾಗಿ, ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |