Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:2 - ಕನ್ನಡ ಸತ್ಯವೇದವು J.V. (BSI)

2 ಆಮೋಸನು ಹೀಗೆ ಪ್ರಕಟಿಸಿದನು - ಯೆಹೋವನು ಚೀಯೋನಿನಿಂದ ಗರ್ಜಿಸಿ ಯೆರೂಸಲೇವಿುನಿಂದ ದನಿಗೈಯುವನು; ಆಗ ಕುರುಬರ ಕಾವಲುಗಳು ಗೋಳಿಡುವವು, ಕರ್ಮೆಲ್ ಬೆಟ್ಟದ ತುದಿಯು ಒಣಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಮೋಸನು ಹೀಗೆ ಪ್ರಕಟಿಸಿದನು, “ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಮೋಸನ ಪ್ರಕಟನೆ: ಗರ್ಜಿಸುತಿಹನು ಸರ್ವೇಶ್ವರ ಸಿಯೋನಿನಿಂದ ಧ್ವನಿಗೈಯುತಿಹನು ಜೆರುಸಲೇಮಿನಿಂದ; ಬಾಡಿಹೋಗುತ್ತಿವೆ ಕುರುಬರಾ ಹುಲ್ಲುಗಾವಲುಗಳು ಒಣಗಿಹೋಗುತ್ತಿವೆ ಕಾರ್ಮೆಲ್ ಗುಡ್ಡದ ನೆತ್ತಿಯ ಗಿಡಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಮೋಸನು ಹೇಳಿದ್ದೇನೆಂದರೆ, “ಚೀಯೋನಿನಲ್ಲಿ ಯೆಹೋವನು ಸಿಂಹದಂತೆ ಗರ್ಜಿಸುವನು. ಜೆರುಸಲೇಮಿನಿಂದ ಆರ್ಭಟಿಸುತ್ತಾನೆ. ಆಗ ಕುರುಬರ ಹಸಿರು ಹುಲ್ಲುಗಾವಲು ಕಂದುಬಣ್ಣವಾಗಿ ಸಾಯುವುದು. ಕರ್ಮೆಲ್ ಬೆಟ್ಟವು ಒಣಗಿ ಬರಡಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಮೋಸನು ಹೇಳಿದ್ದೇನೆಂದರೆ: “ಯೆಹೋವ ದೇವರು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ತಮ್ಮ ಧ್ವನಿ ಗೈಯುವರು. ಕುರುಬರ ಹುಲ್ಲುಗಾವಲುಗಳು ಬಾಡಿ ಹೋಗುತ್ತಿವೆ, ಕರ್ಮೆಲಿನ ತುದಿಯ ಗಿಡಗಳು ಒಣಗಿ ಹೋಗುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:2
23 ತಿಳಿವುಗಳ ಹೋಲಿಕೆ  

ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇವಿುನಿಂದ ದನಿಗೈಯುತ್ತಾನೆ; ಭೂಮ್ಯಾಕಾಶಗಳು ನಡುಗುತ್ತವೆ. ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ ಇಸ್ರಾಯೇಲ್ಯರಿಗೆ ರಕ್ಷಣದುರ್ಗವೂ ಆಗುವನು.


ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು - ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ದನಿಗೈಯುವನು; ಆತನು ಗಟ್ಟಿಯಾಗಿ ಗರ್ಜಿಸಿ ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು; ದ್ರಾಕ್ಷೆಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.


ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವುತುಕೊಳ್ಳಲಿ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು; ನನ್ನ ಕಣ್ಣಿಗೆ ಮರೆಯಾಗಿ ಸಮುದ್ರತಳದಲ್ಲಿ ಅಡಗಿಕೊಂಡರೇನು, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವದು;


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವದರಿಂದ ಮೃಗಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವದೇ ಇಲ್ಲ ಎಂದು ಹೇಳಿದ್ದಾರಷ್ಟೆ.


ಯೆಹೋವನು ಶೂರನಂತೆ ಹೊರಟು ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು; ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.


ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಕರ್ಮೆಲೂ ಕಂದುತ್ತವೆ, ಲೆಬನೋನಿನ ಚಿಗುರು ಬಾಡುತ್ತದೆ.


ಯೆಹೋವನು ತನ್ನ ಸೈನ್ಯದ ಮುಂದೆ ದನಿಗೈಯುತ್ತಾನೆ; ಆತನ ದಂಡು ಬಹು ದೊಡ್ಡದು; ತನ್ನ ಮಾತನ್ನು ನೆರವೇರಿಸಿಕೊಳ್ಳುವಾತನು ಬಲಿಷ್ಟನಾಗಿದ್ದಾನೆ; ಯೆಹೋವನ ದಿನವು ಮಹತ್ತರವೂ ಅತಿ ಭಯಂಕರವೂ ಆಗಿದೆ; ಅದನ್ನು ತಾಳಿಕೊಳ್ಳುವವರು ಯಾರು?


ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಬಗಿದುಹಾಕುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಸೀಳಿಬಿಡುವವು.


ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ ಬಾಷಾನಿನಲ್ಲಿಯೂ ಮೇಯುವದು; ಎಫ್ರಾಯೀವಿುನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವದು.


ಯೆಹೂದವು ದುಃಖಿಸುತ್ತದೆ, ಅದರ ಊರುಗಳವರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇವಿುನವರ ಗೋಳಾಟವು ಕೇಳಿಸುತ್ತದೆ.


ಅದು ಸಮೃದ್ಧಿಯಾಗಿ ಹೂಬಿಟ್ಟು ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವದು; ಲೆಬನೋನಿನ ಮಹಿಮೆಯೂ ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ ನಮ್ಮ ದೇವರ ವೈಭವವನ್ನೂ ಕಾಣುವವು.


ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ. ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ [ತಳಿರುಗಳನ್ನು] ಉದುರಿಸಿಬಿಟ್ಟಿವೆ.


ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.


ಕರ್ಮೆಲಿನಲ್ಲಿ ಸ್ವಾಸ್ತ್ಯವಿದ್ದಂಥ ಒಬ್ಬ ಮನುಷ್ಯನು ಮಾವೋನಿನಲ್ಲಿ ವಾಸಿಸುತ್ತಿದ್ದನು; ಅವನ ಹೆಸರು ನಾಬಾಲ;


ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿಹೋಯಿತು.


ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.


ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಡುವಲಿಂದ ನಡುಗುತ್ತಾ ಬರುವರು;


ಯೆಹೋವಾ, ನಿನಗೆ ಮೊರೆಯಿಡುತ್ತೇನೆ; ಕಾಡಿನ ಹುಲ್ಗಾವಲನ್ನು ಕಿಚ್ಚು ನುಂಗಿಬಿಟ್ಟಿದೆಯಲ್ಲಾ; ವನವೃಕ್ಷಗಳನ್ನೆಲ್ಲಾ ಬೇಗೆಯು ಸುಟ್ಟುಹಾಕಿದೆ.


ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು