ಆಮೋಸ 1:6 - ಕನ್ನಡ ಸತ್ಯವೇದವು J.V. (BSI)6 ಯೆಹೋವನು ಇಂತೆನ್ನುತ್ತಾನೆ - ಗಾಜವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋವಿುಗೆ ವಶಮಾಡಿಬಿಟ್ಟಿತಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರ ಇಂತೆನ್ನುತ್ತಾರೆ: “ಗಾಜದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಇಡೀ ಜನಾಂಗವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನು ಹೇಳುವುದೇನೆಂದರೆ, “ಗಾಜದ ಜನರನ್ನು ಅವರು ಮಾಡಿದ ಅಪರಾಧಗಳ ನಿಮಿತ್ತ ಖಂಡಿತವಾಗಿಯೂ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಇಡೀ ಜನಾಂಗವನ್ನೇ ಎದೋಮಿಗೆ ಗುಲಾಮರನ್ನಾಗಿ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಗಾಜದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಎಲ್ಲಾ ಸಮುದಾಯಗಳನ್ನು ಸೆರೆಹಿಡಿದು ಎದೋಮಿಗೆ ಮಾರಿಬಿಟ್ಟರು. ಅಧ್ಯಾಯವನ್ನು ನೋಡಿ |