Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:7 - ಕನ್ನಡ ಸತ್ಯವೇದವು J.V. (BSI)

7 ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಅರಮನೆಗಳನ್ನು ನುಂಗಿಬಿಡುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದಕಾರಣ ನಾನು ಗಾಜದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದಕ್ಕಾಗಿ ನಾನು ಗಾಜದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಈ ಬೆಂಕಿಯು ಗಾಜದ ಎತ್ತರವಾದ ಗೋಪುರಗಳನ್ನು ನಾಶಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ಗಾಜದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:7
17 ತಿಳಿವುಗಳ ಹೋಲಿಕೆ  

ಗಾಜ ನಿರ್ಜನವಾಗುವದು, ಅಷ್ಕೆಲೋನ್ ಹಾಳಾಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಓಡಿಸಿಬಿಡುವರು, ಎಕ್ರೋನ್ ನಿರ್ಮೂಲವಾಗುವದು.


ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.


ಗಾಜಪ್ರಾಂತದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ ಕಾವಲುಗಾರರ ಬುರುಜಿರುವ ಚಿಕ್ಕ ಹಳ್ಳಿ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ಹಾಳುಮಾಡಿದನು.


ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆಂಬದಾಗಿ ಬರೆದದೆ.


ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.


ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ಪ್ರತೀಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ; ಅವರು ಜಾರಿಬೀಳುವ ಸಮಯ ಬರುವದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವದು.


ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶನಹೊಂದಿದೆ ಫಿಲಿಷ್ಟಿಯದ ಬೈಲುಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿ?


ನಾನು ಐಗುಪ್ತಕ್ಕೆ ಬೆಂಕಿಹಚ್ಚಿ ಅದರ ಸಹಾಯಕರನ್ನೆಲ್ಲಾ ನಾಶಮಾಡಿದ ಮೇಲೆ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ನಾನು ಮಾಗೋಗ್ ದೇಶದ ಮೇಲೂ ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ನಿಶ್ಚಿತವಾಗುವದು.


ಯೆಹೋವನು ಇಂತೆನ್ನುತ್ತಾನೆ - ಗಾಜವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋವಿುಗೆ ವಶಮಾಡಿಬಿಟ್ಟಿತಷ್ಟೆ.


ನಾನು ಅಷ್ಡೋದಿನೊಳಗಿಂದ ಸಿಂಹಾಸನಾಸೀನನನ್ನೂ ಅಷ್ಕೆಲೋನಿನೊಳಗಿಂದ ರಾಜದಂಡಧಾರಿಯನ್ನೂ ನಿರ್ಮೂಲ ಮಾಡಿ ಎಕ್ರೋನಿನ ಮೇಲೆ ಕೈಯೆತ್ತುವೆನು; ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು