ಆಮೋಸ 2:1 - ಕನ್ನಡ ಸತ್ಯವೇದವು J.V. (BSI)1 ಯೆಹೋವನು ಇಂತೆನ್ನುತ್ತಾನೆ - ಮೋವಾಬು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಎದೋವಿುನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣಮಾಡಿತಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಇಂತೆನ್ನುತ್ತಾನೆ, “ಮೋವಾಬಿನವರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಅದು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಬೂದಿಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಇಂತೆನ್ನುತ್ತಾರೆ: “ಮೋವಾಬಿನ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣಮಾಡಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಹೇಳುವುದೇನೆಂದರೆ, “ಮೋವಾಬ್ಯರು ಅನೇಕ ಅಪರಾಧಗಳನ್ನು ಮಾಡಿದ್ದರಿಂದ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಎದೋಮ್ಯರ ಅರಸನ ಎಲುಬುಗಳನ್ನು ಮೋವಾಬ್ಯರು ಸುಟ್ಟು ಸುಣ್ಣವಾಗಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಹೀಗೆ ಹೇಳುತ್ತಾನೆ: “ಮೋವಾಬಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಎದೋಮಿನ ಅರಸನ ಎಲುಬುಗಳನ್ನು, ಸುಟ್ಟು ಸುಣ್ಣ ಮಾಡಿದ್ದಾನೆ. ಅಧ್ಯಾಯವನ್ನು ನೋಡಿ |