ಆಮೋಸ 2:10 - ಕನ್ನಡ ಸತ್ಯವೇದವು J.V. (BSI)10 [ಇಸ್ರಾಯೇಲ್ಯರೇ,] ಅಮೋರಿಯರ ದೇಶವನ್ನು ನಿಮಗೆ ದೊರಕಿಸಬೇಕೆಂದು ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿಕೊಂಡು ಬಂದೆನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇಸ್ರಾಯೇಲ್ಯರೇ, ನೀವು ಅಮ್ಮೋನಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು, ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡಿ, ನಲ್ವತ್ತು ವರ್ಷ ಅರಣ್ಯದಲ್ಲಿ ನಿಮ್ಮನ್ನು ನಡೆಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈಜಿಪ್ಟಿನಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ಕಾಲ ಅರಣ್ಯದ ಮಾರ್ಗವಾಗಿ ನಿಮ್ಮನ್ನು ನಡೆಸಿ ಕರೆತಂದು, ಅಮೋರ್ಯದವರ ನಾಡನ್ನು ನಿಮಗೆ ದೊರಕಿಸಿಕೊಟ್ಟವನು ನಾನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ತನಕ ನಾನು ಅಡವಿಯಲ್ಲಿ ನಿಮ್ಮನ್ನು ನಡಿಸಿದೆನು. ನಾನು ಅಮೋರಿಯರ ದೇಶವನ್ನು ಸ್ವಾಧೀನಪಡಿಸಲು ಅವರಿಗೆ ಸಹಾಯ ಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನೇ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆತಂದೆನು. ಅಮೋರಿಯರ ದೇಶವನ್ನು ನಿಮಗೆ ಸೊತ್ತಾಗಿ ಕೊಡಲು, ನಿಮ್ಮನ್ನು ನಾಲ್ವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದೆನು. ಅಧ್ಯಾಯವನ್ನು ನೋಡಿ |