Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:15 - ಕನ್ನಡ ಸತ್ಯವೇದವು J.V. (BSI)

15 ಧನುರ್ಧಾರಿಯು ನಿಲ್ಲನು, ಪಾದತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನನ್ನು ರಕ್ಷಿಸಿಕೊಳ್ಳನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲಲಾರನು, ಪಾದತ್ವರಿತನು ತಪ್ಪಿಸಿಕೊಳ್ಳಲಾರನು, ಅಶ್ವಾರೂಢನು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬಿಲ್ಲು ಹಿಡಿದವನೂ ನಿಲ್ಲಲಾರನು. ಓಟಗಾರನೂ ಸಿಕ್ಕಿಬೀಳುವನು. ರಾಹುತನು ರಕ್ಷಣೆ ಪಡೆಯಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಿಲ್ಲುಬಾಣ ಹಿಡಿದಿರುವವರೂ ಉಳಿಯರು. ವೇಗದ ಓಟಗಾರರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕುದುರೆ ಮೇಲಿನ ಸವಾರರು ಜೀವಸಹಿತ ತಪ್ಪಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲನು. ಪಾದತ್ವರಿತನು ತಪ್ಪಿಸಿಕೊಳ್ಳನು. ಅಶ್ವಾರೂಢನು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:15
8 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ ನಿನ್ನ ಎಡಗೈಯೊಳಗಿಂದ ಬಿಲ್ಲನ್ನು ಹೊಡೆದುಹಾಕಿ ನಿನ್ನ ಬಲಗೈಯೊಳಗಿಂದ ಬಾಣಗಳನ್ನು ಉದುರಿಸಿಬಿಡುವೆನು.


ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.


ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಮಾಂಸಮಯವೇ, ಆತ್ಮವಲ್ಲ; ಯೆಹೋವನು ಕೈಚಾಚುವಾಗ ಸಹಾಯ ಮಾಡಿದವನು ಮುಗ್ಗರಿಸುವನು, ಸಹಾಯಪಡೆದವನು ಬಿದ್ದು ಹೋಗುವನು, ಅಂತು ಎಲ್ಲರೂ ಒಟ್ಟಿಗೆ ಲಯವಾಗುವರು.


ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅದರ ಬಿಲ್ಲುಗಳು ಮುರಿದುಹೋಗಿವೆ; ಏಕಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯೆಮಾಡದೆ ಬಿಡನು.


ರಾಜ್ಯಗಳ ಸಿಂಹಾಸನವನ್ನು ಕೆಡವಿ ಜನಾಂಗಗಳ ಸಂಸ್ಥಾನಬಲವನ್ನು ಧ್ವಂಸ ಮಾಡಿ ರಥಗಳನ್ನೂ ರಥಾರೂಢರನ್ನೂ ದೊಬ್ಬಿಬಿಡುವೆನು; ಕುದುರೆಗಳೂ ರಾಹುತರೂ ಬಿದ್ದು ಹೋಗುವರು, ಪ್ರತಿಯೊಬ್ಬನು ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.


ಇವರು ವೀರರಾಗಿ ರಣದೊಳಗೆ [ಶತ್ರುಗಳನ್ನು] ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ತಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.


ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವದನ್ನು ಕಂಡೆನು; ಆತನು ಹೀಗೆ ಅಪ್ಪಣೆಕೊಟ್ಟನು - ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ; ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳಿಸು; ಉಳಿದವರನ್ನು ಖಡ್ಗದಿಂದ ಸಂಹರಿಸುವೆನು; ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು