Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:2 - ಕನ್ನಡ ಸತ್ಯವೇದವು J.V. (BSI)

2 ನಾನು ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡುವದು; ಭಟರು ಘೋಷಿಸಿ ಕೊಂಬೂದುವ ಯುದ್ಧ ಕೋಲಾಹಲದಲ್ಲಿ ಮೋವಾಬು ಸಾಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡುವುದು. ಭಟರು ಘೋಷಿಸಿ ಕೊಂಬೂದುವ ಯುದ್ಧದ ಕೋಲಾಹಲದಲ್ಲಿ, ಮೋವಾಬು ಸಾಯುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದಕಾರಣ ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಕೆರಿಯೋತಿನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು. ಸೈನಿಕರ ಆರ್ಭಟ, ರಣಕಹಳೆಗಳ ಗರ್ಜನೆ, ಯುದ್ಧದ ಕೋಲಾಹಲ - ಇವುಗಳ ಮಧ್ಯೆ ಮೋವಾಬಿನ ಜನರು ಮಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ಮೋವಾಬಿನಲ್ಲಿ ನಾನು ಬೆಂಕಿಯನ್ನು ಹಾಕುವೆನು. ಅದು ಕೆರಿಯೋತಿನ ಉನ್ನತ ಗೋಪುರಗಳನ್ನು ನಾಶಮಾಡುವದು. ಅಲ್ಲಿ ಭಯಂಕರವಾದ ಕೂಗಾಟವೂ ತುತ್ತೂರಿಯ ಧ್ವನಿಯೂ ಇರುತ್ತದೆ. ಆಗ ಮೋವಾಬು ಸಾಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಕೆರೀಯೋತಿನ ಕೋಟೆಗಳನ್ನು ದಹಿಸಿಬಿಡುವುದು. ಮೋವಾಬು ಆರ್ಭಟದ ಮತ್ತು ತುತೂರಿಯ ಧ್ವನಿಯ ಸಂಗಡ ಗಲಿಬಿಲಿಯಲ್ಲಿ ಸಾಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:2
8 ತಿಳಿವುಗಳ ಹೋಲಿಕೆ  

ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರವಿುಸಿದ್ದಾನೆ; ಆ ದಿನದಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವದು.


ಕೆರೀಯೋತ್, ಬೊಚ್ರ, ಅಂತು ದೂರದ ಹತ್ತಿರದ ಮೋವಾಬಿನ ಎಲ್ಲಾ ಪಟ್ಟಣಗಳಿಗೂ ದಂಡನೆಯಾಗದೆ ಇಲ್ಲ.


ನಾನು ರಬ್ಬದ ಕೋಟೆಯಲ್ಲಿ ಬೆಂಕಿಯನ್ನು ಉರಿಸುವೆನು, ಅದು ಅವರ ಅರಮನೆಗಳನ್ನು ನುಂಗಿಬಿಡುವದು; ಆ ಯುದ್ಧದಿನದಲ್ಲಿ ಆರ್ಭಟವಾಗುವದು. ಆ ಸುಂಟರಗಾಳಿಯ ದಿವಸದಲ್ಲಿ ರೋಷಮಾರುತವು ಬೀಸುವದು;


ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಅರಿಚಿಕೊಳ್ಳುತ್ತಾರೆ. ಚೋಯರಿನಿಂದ ಹೊರೊನಯಿವಿುನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.


[ಯುದ್ಧದ] ಗದ್ದಲದಲ್ಲಿ ತುಳಿದಾಡಿದವರೆಲ್ಲರ ಮೆಟ್ಟುಗಳೂ ರಕ್ತದಲ್ಲಿ ಹೊರಳಾಡಿಸಿದ ಉಡುಪುಗಳೂ ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.


ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ; ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಕೆನ್ನೆಯನ್ನೂ ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯೆಹೂದವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, [ವಿಶೇಷವೇನು] ಎಂದು ಮೋವಾಬೂ ಸೇಯೀರೂ ಅಂದುಕೊಂಡದರಿಂದ


ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು