Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:3 - ಕನ್ನಡ ಸತ್ಯವೇದವು J.V. (BSI)

3 ನಾನು ಅದರೊಳಗಿಂದ ಅಧಿಪತಿಯನ್ನು ಕಡಿದುಹಾಕಿ ಸಕಲರಾಜ್ಯಾಧಿಕಾರಿಗಳನ್ನೂ ಸಂಹರಿಸುವೆನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಅದರೊಳಗಿಂದ ಅಧಿಪತಿಯನ್ನು ಕಡಿದುಹಾಕಿ, ಸಕಲ ರಾಜ್ಯಾಧಿಕಾರಿಗಳನ್ನೂ ಸಂಹರಿಸುವೆನು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನು ಅವರ ಅಧಿಪತಿಯನ್ನು ಕೊಂದು, ರಾಜ್ಯಾಧಿಕಾರಿಗಳನ್ನು ಸಂಹರಿಸುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹೀಗೆ ನಾನು ಮೋವಾಬಿನ ಅರಸರಿಗೆ ಅಂತ್ಯವನ್ನು ಮಾಡುವೆನು. ಮೋವಾಬಿನ ಎಲ್ಲಾ ನಾಯಕರುಗಳನ್ನು ಸಾಯಿಸುವೆನು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಅದರ ಮಧ್ಯದಿಂದ ನ್ಯಾಯಾಧಿಪತಿಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:3
10 ತಿಳಿವುಗಳ ಹೋಲಿಕೆ  

ನೀನು ನಿನ್ನ ಕೆಲಸಗಳಲ್ಲಿಯೂ ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.


ಒಬ್ಬಾತನನ್ನು ನೋಡುತ್ತಿದ್ದೇನೆ, ಆತನು ಈಗಿನವನಲ್ಲ; ಆತನು ಕಾಣಿಸುತ್ತಾನೆ, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬವಂಶದವರಲ್ಲಿ ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ; ಇಸ್ರಾಯೇಲ್ಯರಲ್ಲಿ ರಾಜದಂಡ ಹಿಡಿದವನು ಕಂಡುಬಂದಿದ್ದಾನೆ. ಅವನು ಮೋವಾಬ್ಯರ ತಲೆಯನ್ನು ಸೀಳಿಹಾಕಿದ್ದಾನೆ; ಯುದ್ಧವೀರರೆಲ್ಲರನ್ನೂ ಕೆಡವಿ ಬಿಟ್ಟಿದ್ದಾನೆ.


ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ.


ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.


ಆದದರಿಂದ ಅರಸುಗಳಿರಾ, ವಿವೇಕಿಗಳಾಗಿರ್ರಿ; ದೇಶಾಧಿಪತಿಗಳಿರಾ, ಬುದ್ಧಿಮಾತುಗಳಿಗೆ ಕಿವಿಗೊಡಿರಿ.


ಪ್ರಭುಗಳಿಗೆ ಅವಮಾನವನ್ನುಂಟುಮಾಡಿ ಬಲಿಷ್ಠರ ನಡುಕಟ್ಟನ್ನು ಸಡಲಿಸುವನು.


ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ ಜನರು ನನ್ನ ಮಾತುಗಳಿಗೆ ಕಿವಿಗೊಡುವರು; ಅವು ಅವರಿಗೆ ಚೆನ್ನಾಗಿರುವವು.


ನ್ಯಾಯವನ್ನು ಕಹಿಮಾಡುವವರೇ, ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರೇ,


ಶಿಷ್ಟಹಿಂಸಕರೇ, ಲಂಚಕೋರರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ, ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ಪ್ರಬಲ, ನನಗೆ ಗೊತ್ತಿದೆ.


ಕುದುರೆಗಳು ಕೋಡುಗಲ್ಲಿನ ಮೇಲೆ ಓಡಾಡುವವೋ; ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷಮಾಡಿ ಧರ್ಮದ ಸುಫಲವನ್ನು ಕಹಿಗೆ ತಂದಿರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು