ಆಮೋಸ 2:6 - ಕನ್ನಡ ಸತ್ಯವೇದವು J.V. (BSI)6 ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಇಸ್ರಾಯೇಲ್ಯರು ನ್ಯಾಯವಂತನನ್ನು ಬೆಳ್ಳಿಗೆ ಮಾರುತ್ತಾರೆ, ಒಂದು ಜೊತೆಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ವಿಕ್ರಯಿಸುತ್ತಾರೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಬೆಳ್ಳಿಬಂಗಾರಕ್ಕಾಗಿ ಸಜ್ಜನರನ್ನು ಮಾರಿಬಿಡುತ್ತಾರೆ. ಒಂದು ಜೊತೆ ಜೋಡುಗಳ ಸಾಲವನ್ನು ಸಹ ತೀರಿಸಲಾಗದ ಬಡಬಗ್ಗರನ್ನೂ ವಿಕ್ರಯಿಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಇಸ್ರೇಲನ್ನು ನಾನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ಸ್ವಲ್ಪ ಬೆಳ್ಳಿಗಾಗಿ ಒಳ್ಳೆಯವರನ್ನೂ ಮತ್ತು ನಿರಪರಾಧಿಗಳನ್ನೂ ಮಾರಿದರು; ಒಂದು ಜೊತೆ ಕೆರಗಳ ಕ್ರಯಕ್ಕೆ ಬಡ ಜನರನ್ನು ಮಾರಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ನಿರಪರಾಧಿಗಳನ್ನು ಬೆಳ್ಳಿಗೆ ಮತ್ತು ಬಡವರನ್ನು ಒಂದು ಜೋಡಿ ಕೆರಗಳಿಗೆ ಮಾರಿದರು. ಅಧ್ಯಾಯವನ್ನು ನೋಡಿ |