Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:8 - ಕನ್ನಡ ಸತ್ಯವೇದವು J.V. (BSI)

8 ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರ ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವು ಇಟ್ಟ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರು ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರತಿಯೊಂದು ಪ್ರಾರ್ಥನಾಲಯದಲ್ಲಿಯೂ ಮಲಗುತ್ತಾರೆ. ಬಡವರಿಂದ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆಯೇ ಬಿದ್ದಿರುತ್ತಾರೆ. ವಿಧಿ ಇಲ್ಲದೆ ದಂಡತೆರಬೇಕಾದವರಿಂದ ಹೆಂಡವನ್ನು ತಂದು ದೇವರ ಮಂದಿರದಲ್ಲೇ ಕುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಡಜನರ ಬಟ್ಟೆಗಳನ್ನು ತೆಗೆದುಕೊಂಡು ತಾವು ವೇದಿಕೆಯ ಮೇಲೆ ಯಜ್ಞ ಮಾಡುತ್ತಿರುವಾಗ ಆ ಬಟ್ಟೆಗಳ ಮೇಲೆ ಕುಳಿತುಕೊಳ್ಳುವರು. ಬಡವರಿಗೆ ಸಾಲಕೊಟ್ಟು ಅವರು ಬಟ್ಟೆಗಳನ್ನು ಒತ್ತೆಗೆ ತೆಗೆದುಕೊಳ್ಳುವರು. ಅವರು ಜನರಿಗೆ ದಂಡ ವಿಧಿಸಿ, ಆ ಹಣದಿಂದ ದ್ರಾಕ್ಷಾರಸವನ್ನು ಕೊಂಡುಕೊಂಡು ದೇವರ ಆಲಯದಲ್ಲಿ ಕುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಅಡವು ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ. ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:8
17 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ, ಉತ್ತಮೋತ್ತಮ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫಿನ ಗಾಯಕ್ಕೆ ಮರುಗರು.


ನೀವು ಕರ್ತನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾರಿರಿ; ಕರ್ತನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟಮಾಡಲಾರಿರಿ.


ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು; ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು, ಕುಣಿದಾಡುವದಕ್ಕೆ ಎದ್ದರು ಎಂದು ಬರೆದದೆಯಲ್ಲಾ; ನೀವು ವಿಗ್ರಹಾರಾಧಕರಾಗಬೇಡಿರಿ.


ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲವಾದ ಮನಸ್ಸುಳ್ಳ ಸಹೋದರನು ಕಂಡರೆ ಅವನೂ ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೆ ಧೈರ್ಯತಂದುಕೊಂಡಾನಲ್ಲವೇ.


ದಂತದ ಮಂಚಗಳ ಮೇಲೆ ಮಲಗುತ್ತಾರೆ, ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ; ಹಿಂಡಿನ ಮರಿಗಳನ್ನೂ ಕೊಟ್ಟಿಗೆಯ ಕರುಗಳನ್ನೂ ತಿನ್ನುತ್ತಾರೆ;


ಸಮಾರ್ಯಬೆಟ್ಟದಲ್ಲಿನ ಬಾಷಾನಿನ ಆಕಳುಗಳೇ, ಬಡವರನ್ನು ಹಿಂಸಿಸಿ ದಿಕ್ಕಿಲ್ಲದವರನ್ನು ಜಜ್ಜಿ ನಿಮ್ಮ ಪತಿಗಳಿಗೆ - ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ.


ನಿನ್ನನ್ನು ಆಭರಣಗಳಿಂದ ಸಿಂಗರಿಸಿಕೊಂಡು ವೈಭವದ ಮಂಚದ ಮೇಲೆ ಕೂತಿದ್ದಿ; ಅದರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿದ್ದಿ.


ದೀನದರಿದ್ರರನ್ನು ಹಿಂಸಿಸಿ ಜನರ ಸೊತ್ತನ್ನು ಅಪಹರಿಸಿ ಸಾಲಗಾರನ ಒತ್ತೆಯನ್ನು ಬಿಗಿಹಿಡಿದು ವಿಗ್ರಹಗಳ ಕಡೆಗೆ ಕಣ್ಣೆತ್ತಿ ಅಸಹ್ಯಕಾರ್ಯವನ್ನು ಮಾಡಿ


ಮುಟ್ಟಿನ ಹೆಂಗಸನ್ನು ಸೇರದೆ ಯಾರನ್ನೂ ಹಿಂಸಿಸದೆ ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ ಯಾರ ಸೊತ್ತನ್ನೂ ಅಪಹರಿಸದೆ ಹಸಿದವನಿಗೆ ಅನ್ನವಿಕ್ಕಿ ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ


ಆ ಊರಿನವರು ಒಂದಾನೊಂದು ದಿವಸ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು ಆಲೆಗಳಲ್ಲಿ ರಸತೆಗೆದು ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.


ಮಹೋನ್ನತಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದೀ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದೀ.


ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.


ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅದಕ್ಕೆ ಮುಯ್ಯಿತೀರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು; ಯಜ್ಞವೇದಿಯ ಕೊಂಬುಗಳು ಕತ್ತರಿಸಲ್ಪಟ್ಟು ನೆಲದ ಪಾಲಾಗುವವು.


ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಸಾಲಕೊಟ್ಟರೆ ಅವನನ್ನು ಸಾಲಗಾರನಂತೆ ನಡಿಸಬಾರದು; ಅವನಿಂದ ಬಡ್ಡಿಯನ್ನು ಕೇಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು