Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:9 - ಕನ್ನಡ ಸತ್ಯವೇದವು J.V. (BSI)

9 ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು; ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ ಅಲ್ಲೋನ್ ಮರದ ಹಾಗೆ ದೃಢವಾಗಿ ಇದ್ದರೂ ಮೇಲೆ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಆದರೂ ನನ್ನ ಜನರೇ, ನಿಮಗೆ ಎದುರಾಗಿ ನಿಂತ ಅಮೋರ್ಯದವರನ್ನು ಧ್ವಂಸಮಾಡಿದೆನು. ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ ನಿಮ್ಮ ಶತ್ರು ಅಮೋರ್ಯದವರನ್ನು ನಾಶಪಡಿಸಿದೆನು. ಮರದ ಮುಡಿಯಿಂದ ಫಲವನ್ನೂ ಅಡಿಯಿಂದ ಬೇರನ್ನೂ ಕಿತ್ತುಹಾಕುವಂತೆ ಅವರನ್ನು ನಿರ್ಮೂಲಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆದರೆ ಅವರ ಎದುರಿನಲ್ಲಿ ಅಮೋರಿಯರನ್ನು ನಾಶಮಾಡಿದವನು ನಾನೇ, ಅಮೋರಿಯರು ದೇವದಾರು ಮರಗಳಂತೆ ಎತ್ತರವೂ, ಅಲ್ಲೊನ್ ಮರಗಳಂತೆ ಬಲಶಾಲಿಗಳೂ ಆಗಿದ್ದರು. ಆದರೆ ನಾನು ಕೆಳಗಿನಿಂದ ಅವರ ಬೇರನ್ನೂ ಮೇಲಿನಿಂದ ಅವರ ಫಲಗಳನ್ನೂ ನಾಶಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆದರೂ ನನ್ನ ಜನರೇ, ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ, ಅಮೋರಿಯರನ್ನು ನಾನು ನಾಶ ಪಡಿಸಿದೆನು. ನಾನು ಮೇಲೆ ಅದರ ಫಲವನ್ನು ಮತ್ತು ಕೆಳಗೆ ಅದರ ಬೇರನ್ನು ಕಿತ್ತು ಹಾಕುವಂತೆ, ಅವರನ್ನು ನಿರ್ಮೂಲ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:9
27 ತಿಳಿವುಗಳ ಹೋಲಿಕೆ  

ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ಅವನ ಬುಡವು ಕೆಳಗೆ ಒಣಗುವದು, ಅವನ ರೆಂಬೆಯು ಮೇಲೆ ಬಾಡುವದು.


(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ; ಅಗಲ ನಾಲ್ಕು ಮೊಳ.)


ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನೂ ಕಾನಾನ್ಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿಮ್ಮ ಮುಂದೆ ಹೊರಡಿಸುವೆನು.


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರದಲ್ಲಿ ಇಲ್ಲಿಗೆ ತಿರಿಗಿಬರುವರು; ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ ಎಂದು ಹೇಳಿದನು.


ಈ ಮಾತನ್ನು ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅದು ಸಮೃದ್ಧವಾಗಿಯೇ ಇರುವದೋ? ಅದನ್ನು ನಾಟಿದ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವವಲ್ಲವೆ; ಅದು ಬೇರುಸಹಿತ ಕೀಳಲ್ಪಡುವದು; ಬಹು ಬಲದಿಂದಲ್ಲ, ಬಹು ಜನರಿಂದಲ್ಲ.


ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಿಗೆ ಒಂದು ವಿಜ್ಞಾಪನೆ ಮಾಡಿದನು. ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನಿಲ್ಲಿರಿ! ಎಂದು ಇಸ್ರಾಯೇಲ್ಯರ ಸಮಕ್ಷದಲ್ಲಿ ಆಜ್ಞಾಪಿಸಲು


ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿರುತ್ತಾನೆಂಬದೂ ಆತನು ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು ಇವರನ್ನೆಲ್ಲಾ ನಿಮ್ಮ ಮುಂದೆ ತಪ್ಪದೆ ಹೊರಡಿಸುವನೆಂಬದೂ


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ - ಆ ದೇಶದ ಜನರು ನಮಗಿಂತ ಹೆಚ್ಚಾಗಿಯೂ ಉದ್ದವಾಗಿಯೂ ಇದ್ದಾರೆ; ಅವರಿರುವ ಪಟ್ಟಣಗಳು ದೊಡ್ಡವೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಳ್ಳವೂ ಆಗಿವೆ; ಅಲ್ಲಿ ಉನ್ನತಪುರುಷರನ್ನು ನೋಡಿದೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ ಅಂದುಕೊಳ್ಳುತ್ತಿದ್ದಿರಿ.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೂಳೆಯನ್ನು ನುಂಗಿಬಿಡುವ ಹಾಗೂ ಒಣಹುಲ್ಲು ಬೆಂಕಿಯಲ್ಲಿ ಕುಗ್ಗುವಂತೆಯೂ ಅವರ ಬೇರು ಕೊಳೆತು ಅವರ ಹೂವು ದೂಳಾಗಿ ತೂರಿಹೋಗುವದು.


ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸಿ ಢಮ್ಮನೆ ಬೀಳಿಸುವನು; ಉನ್ನತ ವೃಕ್ಷಗಳು ಕಡಿದುಹೋಗುವವು,


ಯೆಹೋವನು ಇಸ್ರಾಯೇಲ್ಯರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ, ಅಂದರೆ ನಾಲ್ವತ್ತು ವರುಷಕಾಲ, ಇಸ್ರಾಯೇಲ್ಯರನ್ನು ಅರಣ್ಯದಲ್ಲಿ ತಿರುಗಾಡ ಮಾಡಿದನು.


ಇದಲ್ಲದೆ ಯೆಬೂಸಿಯರೂ ಅಮೋರಿಯರೂ ಗಿರ್ಗಾಷಿಯರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು