Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:1 - ಕನ್ನಡ ಸತ್ಯವೇದವು J.V. (BSI)

1 ಸಮಾರ್ಯಬೆಟ್ಟದಲ್ಲಿನ ಬಾಷಾನಿನ ಆಕಳುಗಳೇ, ಬಡವರನ್ನು ಹಿಂಸಿಸಿ ದಿಕ್ಕಿಲ್ಲದವರನ್ನು ಜಜ್ಜಿ ನಿಮ್ಮ ಪತಿಗಳಿಗೆ - ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಮಾರ್ಯದ ಗುಡ್ಡಗಳ ಮೇಲೆ ಮೇದು, ಬಾಷಾನಿನ ಕೊಬ್ಬಿನ ಕಾಮಧೇನುಗಳಂತಿರುವ ಮಹಿಳೆಯರೇ, ಕೇಳಿ: ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಶೋಷಿಸಿ, ನಿಮ್ಮ ಪತಿರಾಯರಿಗೆ, “ಮದ್ಯ ತರಿಸಿರಿ, ಕುಡಿಯೋಣ” ಎಂದು ಹೇಳುವವರೇ, ಇದನ್ನು ಕೇಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಮಾರ್ಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದುಕೊಡು” ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಮಾರ್ಯ ಬೆಟ್ಟದಲ್ಲಿರುವ ಬಾಷಾನಿನ ಹಸುಗಳಂತಿರುವ ಮಹಿಳೆಯರೇ, ನೀವು ಬಡವರನ್ನು ಹಿಂಸಾಚಾರ ಮಾಡಿ, ದರಿದ್ರರನ್ನು ಜಜ್ಜಿ, ನಿಮ್ಮ ಪತಿಗಳಿಗೆ, “ಪಾನವನ್ನು ತರಿಸಿರಿ, ಕುಡಿಯೋಣ,” ಎಂದು ಹೇಳುವವರೇ, ಈ ವಾಕ್ಯವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:1
49 ತಿಳಿವುಗಳ ಹೋಲಿಕೆ  

ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.


ಅಯ್ಯೋ, ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ! ಪ್ರಮುಖಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲ್ಯರ ನ್ಯಾಯ ವಿಚಾರಕರಾಗಿ ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ ಪಾಡನ್ನು ಎಂಥದೆನ್ನಲಿ!


ನೀವು ಬಡವರನ್ನು ತುಳಿದು ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ ವಾಸಿಸದೆ ಇರುವಿರಿ, ಮಾಡಿಕೊಂಡ ಒಳ್ಳೊಳ್ಳೆಯ ತೋಟಗಳ ದ್ರಾಕ್ಷಾರಸವನ್ನು ಕುಡಿಯರಿ.


ಟಗರು ಕುರಿ ಹೋತ ಹೋರಿ ಅಂತು ಬಾಷಾನಿನ ಕೊಬ್ಬಿದ ಪಶುಗಳು ಅಂದರೆ ಬಲಿಷ್ಟರು, ಭೂಪತಿಗಳು ಇವರ ಮಾಂಸವೂ ರಕ್ತವೂ ನಿಮಗೆ ಸಿಕ್ಕುವವು.


ಆಮೇಲೆ ತಿರಿಗಿ ದೃಷ್ಟಿಸಿ ಲೋಕದಲ್ಲಿನ ಹಿಂಸೆಗಳನ್ನೆಲ್ಲಾ ನೋಡಿದೆನು; ಆಹಾ, ಹಿಂಸೆಗೊಂಡವರ ಕಣ್ಣೀರು ಏನೆಂದು ಹೇಳಲಿ! ಸಂತಯಿಸುವವರು ಯಾರೂ ಇರಲಿಲ್ಲ; ಹಿಂಸಕರಿಗೆ ಬಹು ಬಲ; ಸಂತಯಿಸುವವರೋ ಒಬ್ಬರೂ ಇರಲಿಲ್ಲ.


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಹೌದು, ನನ್ನ ಜನರಿಗಾಗಿ ಚೀಟುಹಾಕಿವೆ, ಸೂಳೆಗಾಗಿ ಹುಡುಗನನ್ನು ಬದಲು ಮಾಡಿವೆ, ದ್ರಾಕ್ಷಾರಸಕ್ಕೆ ಹುಡುಗಿಯನ್ನು ಬದಲು ಕೊಟ್ಟು ಪಾನಮಾಡಿವೆ.


ಸಾಧಾರಣರು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ ವಿದೇಶಿಗಳನ್ನು ಅನ್ಯಾಯವಾಗಿ ಅರೆದು ಬಿಟ್ಟಿದ್ದಾರೆ.


ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತಸುರಿಸಿ ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ನಿನ್ನವರು ರಕ್ತಸುರಿಸುವದಕ್ಕೆ ಲಂಚತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ ದೋಚಿಕೊಂಡು ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಕರ್ತನಾದ ಯೆಹೋವನ ನುಡಿ.


ನಿನ್ನವರು ತಾಯಿತಂದೆಗಳನ್ನು ತುಚ್ಫೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


[ಯೆಹೂದವು ಹೀಗೆ ಪ್ರಲಾಪಿಸುತ್ತದೆ] - ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದು ಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರೀಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು [ಗಂಗಾಳದಂತೆ] ತೊಳೆದು ಬಿಟ್ಟಿದ್ದಾನೆ.


ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.


ಪರದೇಶಿಯನ್ನಾಗಲಿ ಅನಾಥನನ್ನಾಗಲಿ ವಿಧವೆಯನ್ನಾಗಲಿ ಹಿಂಸಿಸದೆ ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ ನಿಮಗೆ ಹಾನಿಕರವಾದ ಅನ್ಯದೇವತಾಭಕ್ತಿಯನ್ನು ಮಾಡದೆ ಇದ್ದರೆ


ಸೇನಾಧೀಶ್ವರನಾದ ಯೆಹೋವನು ಹೀಗೆ ಹೇಳಿದ್ದಾನೆ - ಸುತ್ತಣ ಮರಗಳನ್ನು ಕಡಿದುಬಿಡಿರಿ, ಯೆರೂಸಲೇವಿುನೆದುರಿಗೆ ದಿಬ್ಬ ಹಾಕಿರಿ; ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದೋಚಾಟವೇ ತುಂಬಿದೆ.


ನೋಡಿರಿ, ಕೇಡಿನ ಬಂಧಗಳನ್ನು ಬಿಚ್ಚುವದು, ನೊಗದ ಕಣ್ಣಿಗಳನ್ನು ಕಳಚುವದು, ಜಜ್ಜಿಹೋದವರನ್ನು ಬಿಡುಗಡೆಮಾಡುವದು, ನೊಗಗಳನ್ನೆಲ್ಲಾ ಮುರಿಯುವದು,


ಅಯ್ಯೋ, ಮನೆಗೆ ಮನೆಯನ್ನೂ ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ!


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷ್ಯಕ್ಕೆ ತರುವನು; ಆ ಹಿಂಸಕರಿಗಿಂತ ಮಹೋನ್ನತನು ಇದ್ದಾನಲ್ಲಾ.


ಯೆಹೋವನು ದೀನರ ವ್ಯಾಜ್ಯವನ್ನು ನಡಿಸುವನೆಂತಲೂ ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.


ಯೆಹೋವನು - ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸಿ ಅವರನ್ನು ಸುರಕ್ಷಿತವಾಗಿ ಇರಿಸುವೆನು ಎಂದು ಹೇಳುತ್ತಾನೆ.


ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.


ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂವಿುಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯವೆಂಬ ಹೆಸರಿಟ್ಟನು.


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು.


ನನ್ನ ಸ್ವಾಸ್ತ್ಯವನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವದರಿಂದ


ನೀವು ಸ್ವದೇಶದವರಲ್ಲಿಯಾಗಲಿ ನಿಮ್ಮಲ್ಲಿರುವ ಅನ್ಯದೇಶದವರಲ್ಲಿಯಾಗಲಿ ಗತಿಯಿಲ್ಲದ ಬಡಕೂಲಿಯವನಿಗೆ ಏನೂ ಅನ್ಯಾಯಮಾಡದೆ


ದೀನದರಿದ್ರರನ್ನು ಹಿಂಸಿಸಿ ಜನರ ಸೊತ್ತನ್ನು ಅಪಹರಿಸಿ ಸಾಲಗಾರನ ಒತ್ತೆಯನ್ನು ಬಿಗಿಹಿಡಿದು ವಿಗ್ರಹಗಳ ಕಡೆಗೆ ಕಣ್ಣೆತ್ತಿ ಅಸಹ್ಯಕಾರ್ಯವನ್ನು ಮಾಡಿ


ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ, ಉತ್ತಮೋತ್ತಮ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫಿನ ಗಾಯಕ್ಕೆ ಮರುಗರು.


ಇಸ್ರಾಯೇಲ್ಯರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಎದ್ರೈವೂರಿಗೆ ಹೊರಟುಬಂದನು.


ದಿಕ್ಕಿಲ್ಲದವರನ್ನು ದಾರಿತಪ್ಪಿಸುತ್ತಾರೆ, ನಾಡಿನ ಬಡವರು ಒಟ್ಟಾಗಿ ಅಡಗಿಕೊಳ್ಳುತ್ತಾರೆ.


ಬಲ್ಲಿದನು ಬಡವನಿಗೆ ಒಡೆಯ; ಸಾಲಗಾರನು ಸಾಲಕೊಟ್ಟವನಿಗೆ ಸೇವಕ.


ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತುಹೋದವರ ಫಲವತ್ತಾದ ತಗ್ಗಿಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವಿನ ಪಾಡೇ!


ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷದಿನವಾಗಿರುವದು [ಎಂದು ಹರಟಿಕೊಳ್ಳುವರು].


ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.


ಇಸ್ರಾಯೇಲ್ಯರೇ, ಯೆಹೋವನು ನಿಮಗೆ ವಿರುದ್ಧವಾಗಿ, ಅಂದರೆ ತಾನು ಐಗುಪ್ತದೇಶದೊಳಗಿಂದ ಪಾರುಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ -


ಗೊತ್ತುಮಾಡಿಕೊಳ್ಳದೆ ಇಬ್ಬರು ಜೊತೆಯಾಗಿ ನಡೆಯುವರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು