Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:12 - ಕನ್ನಡ ಸತ್ಯವೇದವು J.V. (BSI)

12 ಆದಕಾರಣ, ಇಸ್ರಾಯೇಲೇ, ನಾನು ನಿನಗೆ ಮಾಡುತ್ತೇನೆ; ನಾನು ಮಾಡಬೇಕೆಂದಿರುವದರಿಂದ, ಇಸ್ರಾಯೇಲೇ, ನಿನ್ನ ದೇವರ ಬರುವಿಕೆಗೆ ನಿನ್ನನ್ನು ಸಿದ್ಧಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಆದಕಾರಣ ಇಸ್ರಾಯೇಲೇ, ನಾನು ನಿನಗೆ ಮಾಡುತ್ತೇನೆ; ನಾನು ಮಾಡಬೇಕೆಂದಿರುವುದರಿಂದ, ಇಸ್ರಾಯೇಲೇ, ನಿನ್ನ ದೇವರ ಬರುವಿಕೆಗೆ ನಿನ್ನನ್ನು ಸಿದ್ಧಮಾಡಿಕೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದುದರಿಂದ ಇಸ್ರಯೇಲಿನ ಜನರೇ, ನಿಮ್ಮನ್ನು ದಂಡಿಸಿಯೇ ತೀರುವೆನು. ಓ ಇಸ್ರಯೇಲರೇ, ನ್ಯಾಯತೀರ್ಪನ್ನು ಕೊಡಲು ಬರಲಿರುವ ನಿಮ್ಮ ದೇವರನ್ನು ಎದುರಗೊಳ್ಳಲು ಸಿದ್ಧಮಾಡಿಕೊಳ್ಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಆದ್ದರಿಂದ ಇಸ್ರೇಲೇ, ನಿನಗೆ ವಿರುದ್ಧವಾಗಿ ಈ ಸಂಗತಿಗಳನ್ನು ಮಾಡುತ್ತೇನೆ. ಇಸ್ರೇಲೇ, ನಿನ್ನ ದೇವರನ್ನು ಸಂಧಿಸಲು ನಿನ್ನನ್ನು ತಯಾರು ಮಾಡಿಕೊ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇಸ್ರಾಯೇಲೇ, ನಾನು ನಿನಗೆ ಹೀಗೆ ಮಾಡುತ್ತೇನೆ. ನಾನು ನಿನಗೆ ಹೀಗೆ ಮಾಡುವುದರಿಂದ, ನೀನು ನಿನ್ನ ದೇವರನ್ನು ಎದುರುಗೊಳ್ಳಲು ಸಿದ್ಧಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:12
20 ತಿಳಿವುಗಳ ಹೋಲಿಕೆ  

ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್‍ವಂಶದ ರಕ್ಷಣೆಗಾಗಿ ಗೋಡೆಯನ್ನು ಗಟ್ಟಿಮಾಡಲೂ ಇಲ್ಲ.


ನಿನ್ನ ಮಾನವು ಬೈಲಿಗೆ ಬಿದ್ದು ನೀನು ನಾಚಿಕೆಗೀಡಾಗುವಿ, ನಾನು ಯಾರನ್ನೂ ಕರುಣಿಸದೆ ಮುಯ್ಯಿ ತೀರಿಸುವೆನು.


ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.


ನಿನ್ನ ವಾದಿಯ ಸಂಗಡ ಇನ್ನೂ ದಾರಿಯಲ್ಲಿರುವಾಗಲೇ ಅವನ ಕೂಡ ಬೇಗ ಸಮಾಧಾನ ಮಾಡಿಕೋ; ಇಲ್ಲದಿದ್ದರೆ ಆ ವಾದಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು; ನ್ಯಾಯಾಧಿಪತಿಯು ನಿನ್ನನ್ನು ಓಲೇಕಾರನ ಕೈಗೆ ಒಪ್ಪಿಸಿಕೊಟ್ಟಾನು; ಆಗ ನೀನು ಸೆರೆಯಲ್ಲಿ ಬಿದ್ದೀಯೆ.


ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಬಗಿದುಹಾಕುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಸೀಳಿಬಿಡುವವು.


ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶರಕ್ಷಣೆಗಾಗಿ ಪೌಳಿಯ ಒಡಕಿನಲ್ಲಿ ನಿಲ್ಲುವದಕ್ಕೂ ಗೋಡೆಯನ್ನು ಗಟ್ಟಿಮಾಡುವದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.


ಆದದರಿಂದ ನೀನು ಹೊಂದಿದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೊಂಡು ಅದನ್ನು ಕಾಪಾಡಿಕೋ ಮತ್ತು ದೇವರ ಕಡೆಗೆ ತಿರುಗಿಕೋ. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯುವದೇ ಇಲ್ಲ.


ವೇಗಿಗೂ ಓಡಿಹೋಗುವದಕ್ಕೆ ಶಕ್ತಿಯಿರದು, ಬಲಿಷ್ಟನು ತನ್ನ ಬಲವನ್ನು ಸ್ಥಿರಪಡಿಸಿಕೊಳ್ಳನು, ಪರಾಕ್ರವಿುಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು,


ನಿಶ್ಚಿಂತೆಯವರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ ಬೆತ್ತಲೆಯಾಗಿ ಸೊಂಟಕ್ಕೆ [ಗೋಣಿತಟ್ಟನ್ನು] ಸುತ್ತಿಕೊಳ್ಳಿರಿ.


ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರವೂ ನೀರನ್ನು ಕುದಿಸುವ ಉರಿಯೋಪಾದಿಯಲ್ಲಿಯೂ [ನೀನು ಪ್ರತ್ಯಕ್ಷನಾಗಿ]


ನೀವು ನನಗೆ ಅಂಜುವದಿಲ್ಲವೋ, ನನ್ನೆದುರಿಗೆ ನಡುಗುವದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇವಿುಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು