Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:13 - ಕನ್ನಡ ಸತ್ಯವೇದವು J.V. (BSI)

13 ಇಗೋ, ಪರ್ವತಗಳನ್ನು ರೂಪಿಸಿ ವಾಯುವನ್ನು ಸೃಷ್ಟಿಸಿ ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂವಿುಯ ಉನ್ನತಪ್ರದೇಶಗಳಲ್ಲಿ ನಡೆಯುವಾತನಿಗೆ ಸೇನಾಧೀಶ್ವರದೇವರಾದ ಯೆಹೋವನೆಂಬದೇ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಯಾರು? ನಾನೇ ಪರ್ವತಗಳನ್ನು ನಿರ್ಮಿಸಿದಾತನು. ನಿಮ್ಮಲ್ಲಿ ಮನಸ್ಸನ್ನು ಉಂಟುಮಾಡಿದಾತನು ನಾನೇ. ನಾನು ಜನರಿಗೆ ಮಾತನಾಡಲು ಕಲಿಸಿದೆನು. ಕತ್ತಲೆಯನ್ನು ಬೆಳಕು ಮಾಡಿದೆನು. ಭೂಮಿಯ ಮೇಲಿರುವ ಪರ್ವತಗಳ ಮೇಲೆ ನಾನು ನಡಿಯುತ್ತೇನೆ. ನಾನು ಯಾರು? ನನ್ನ ಹೆಸರು ಸೈನ್ಯಗಳ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬೆಟ್ಟಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ, ಭೂಮಿಯ ಉನ್ನತ ಸ್ಥಳಗಳನ್ನು ತುಳಿದುಬಿಡುವಾತನು, ಸರ್ವಶಕ್ತರಾದ ಯೆಹೋವ ದೇವರು ಇದೇ ಅವರ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:13
38 ತಿಳಿವುಗಳ ಹೋಲಿಕೆ  

ಕೃತ್ತಿಕೆಯನ್ನೂ ಮೃಗಶಿರವನ್ನೂ ಸೃಷ್ಟಿಸಿ ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ ಹಗಲನ್ನು ಇರುಳಿಗೆ ಮಾರ್ಪಡಿಸಿ ಸಾಗರದ ಜಲವನ್ನು ಬರಮಾಡಿಕೊಂಡು ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ; ಯೆಹೋವನೆಂಬದೇ ಆತನ ನಾಮಧೇಯ;


ಇಗೋ, ಯೆಹೋವನು ತನ್ನ ಸ್ಥಾನದಿಂದ ಹೊರಟು ಇಳಿದುಬರುತ್ತಿದ್ದಾನೆ, ಭೂವಿುಯ ಉನ್ನತಪ್ರದೇಶಗಳಲ್ಲಿ ನಡೆಯುತ್ತಾನೆ.


ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತಾಗಿ ಕಟ್ಟಿಕೊಂಡು ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ; ಸಮುದ್ರದ ನೀರನ್ನು ಕರೆದು ಭೂಮಂಡಲದ ಮೇಲೆ ಹೊಯ್ಯುತ್ತಾನೆ; ಯೆಹೋವನೆಂಬದೇ ಆತನ ನಾಮಧೇಯ.


ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲ್ಯರ ಸದಮಲಸ್ವಾವಿು!


ಆದರೆ ರಹಸ್ಯಗಳನ್ನು ವ್ಯಕ್ತಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಪರಲೋಕದಲ್ಲಿದ್ದಾನೆ; ಉತ್ತರಕಾಲದಲ್ಲಿ ನಡೆಯತಕ್ಕದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ -


ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು, ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನೂ


ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.


ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶಮಂಡಲವನ್ನು ಹರವಿ ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ ಮನುಷ್ಯನೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ -


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂವಿುಯನ್ನು ಹಗಲಿನಲ್ಲೇ ಮೊಬ್ಬುಮಾಡುವೆನು.


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬದು ಆತನ ನಾಮಧೇಯ.


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬದು ಆತನ ನಾಮಧೇಯ.


ಯಾವನು ಸಾಗರಸಮುದ್ರಗಳನ್ನು ಸೇರೆಯಿಂದ ಅಳತೆಮಾಡಿದನು? ಯಾವನು ಆಕಾಶಮಂಡಲದ ಪರಿಮಾಣವನ್ನು ಗೇಣಿನಿಂದ ನಿರ್ಣಯಿಸಿದನು? ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು?


ಆತನು ಅವರನ್ನು ಭೂವಿುಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯವೃದ್ಧಿಯನ್ನುಂಟುಮಾಡಿ ಬಂಡೆಯಿಂದ ಜೇನೂ ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದ್ದೂ;


ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ ಇಸ್ರಾಯೇಲ್ಯರ ಪಾಳೆಯಕ್ಕೂ ನಡುವೆ ಬಂದು [ಐಗುಪ್ತ್ಯರಿಗೆ] ಕತ್ತಲನ್ನು ಉಂಟುಮಾಡಿದರೂ [ಇಸ್ರಾಯೇಲ್ಯರಿಗೋಸ್ಕರ] ರಾತ್ರಿಯನ್ನು ಬೆಳಕುಮಾಡಿತು; ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಿಲ್ಲ.


ಮೋಶೆ ಆಕಾಶಕ್ಕೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿವಸ ಕಾರ್ಗತ್ತಲು ಮುಚ್ಚಿಕೊಂಡಿತು.


ಗಾಳಿಯು ಮನಸ್ಸು ಬಂದ ಕಡೆ ಬೀಸುತ್ತದೆ; ಅದರ ಸಪ್ಪಳವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು; ಆತ್ಮನಿಂದ ಹುಟ್ಟಿದವರೆಲ್ಲರು ಅದರಂತೆಯೇ ಅಂದನು.


ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕುಮಾಡಿ ನನ್ನ ಉನ್ನತಪ್ರದೇಶಗಳಲ್ಲಿ ನನ್ನನ್ನು ನಡಿಸುತ್ತಾನೆ. ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.


ಸೇನಾಧೀಶ್ವರದೇವರಾದ ಯೆಹೋವನ ನುಡಿಯನ್ನು ಕೇಳಿರಿ - ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗಂದಿದ್ದಾನೆ - ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು ಅದರ ಸೌಧಗಳನ್ನು ಹಗೆಮಾಡುತ್ತೇನೆ; ಆದದರಿಂದ ನಾನು ರಾಜಧಾನಿಯನ್ನೂ ಅದರ ಸಕಲಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು,


ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ತಳ್ಳುವೆನು; ಸೇನಾಧೀಶ್ವರ ದೇವರೆಂಬ ಯೆಹೋವನು ಇದನ್ನು ನುಡಿದಿದ್ದಾನೆ.


ಸೇನಾಧೀಶ್ವರ ದೇವನಾದ ಯೆಹೋವನು ಇಂತೆನ್ನುತ್ತಾನೆ - ಕೇಳಿರಿ, ಯಾಕೋಬ ವಂಶದವರಿಗೆ ಎಚ್ಚರ ಹೇಳಿರಿ;


ಆತನ ಗರ್ಜನೆಗೆ ಆಕಾಶದಲ್ಲಿ ನೀರು ಮೊರೋ ಎನ್ನುತ್ತದೆ; ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.


ಆತನ ಗರ್ಜನೆಗೆ ಆಕಾಶದಲ್ಲಿ ನೀರು ಮೊರೋ ಎನ್ನುತ್ತದೆ; ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.


ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಅಧೀಶ್ವರನಾದ ಯೆಹೋವನೆಂಬದು.


ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರ ಮೇಲೆ ಗುರುಗುಟ್ಟುವರು; ದೇಶದಲ್ಲಿಯೋ, ಆಹಾ, ಅಂಧಕಾರವೂ ವ್ಯಾಕುಲವೂ ತುಂಬಿರುವವು, ಮೋಡ ಕವಿದು ಬೆಳಕು ಕತ್ತಲಾಗುವದು.


ಆತನು ಅಪ್ಪಣೆಕೊಡಲು ಅವು ಕರಗುತ್ತವೆ; ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ.


ನಾನು ಕೂತುಕೊಳ್ಳುವದೂ ಏಳುವದೂ ನಿನಗೆ ಗೊತ್ತದೆ; ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತೀ;


ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸಮಾಡುತ್ತಾನೆ.


ಆತನು ಪ್ರತಿಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾವನೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.


ಯೇಸು ಅವರ ಆಲೋಚನೆಯನ್ನು ತಿಳಿದು - ನೀವು ಯಾಕೆ ನಿಮ್ಮ ಮನಸ್ಸಿನಲ್ಲಿ ಕೆಟ್ಟ ಆಲೋಚನೆಯನ್ನು ಮಾಡುತ್ತೀರಿ?


ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂತಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದುಬರಲಿ ಎಂದು ಈ ರಹಸ್ಯವು ನನಗೆ ವ್ಯಕ್ತವಾಗಿದೆ.


ಅದು ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ ಇಗೋ, ಪ್ರಬಲವಾದ ದೊಡ್ಡ ದಂಡು! ಇಂಥದು ಹಿಂದೆಂದೂ ಬಂದಿಲ್ಲ, ಇನ್ನು ಮುಂದೆ ತಲತಲಾಂತರಗಳ ಬಹು ವರುಷಗಳಲ್ಲಿಯೂ ಬರುವದಿಲ್ಲ.


ಹುಟ್ಟಬೇಡವೆಂದು ಆತನು ಅಪ್ಪಣೆಕೊಟ್ಟರೆ ಸೂರ್ಯನು ಹುಟ್ಟುವದಿಲ್ಲ; ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ.


ಇನ್ನು ಯಾವನೂ ಅಲ್ಲ, ನಾನು ಬೆಳಕಿಗೂ ಕತ್ತಲಿಗೂ ಸೃಷ್ಟಿಕರ್ತನು, ಮೇಲನ್ನೂ ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಯಿಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.


ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದ ಹಾಗೂ ಉನ್ನತನಾದವನೊಬ್ಬನು ಬರುವನು.


[ಇಸ್ರಾಯೇಲೇ,] ನೀನು ನಿನ್ನ ದೇವರ ಸಹಾಯದಿಂದ ತಿರುಗಿಕೋ; ನೀತಿಪ್ರೀತಿಗಳನ್ನನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು