ಆಮೋಸ 5:15 - ಕನ್ನಡ ಸತ್ಯವೇದವು J.V. (BSI)15 ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೇದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೇನಾಧೀಶ್ವರದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದಾನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದುಷ್ಟತನವನ್ನು ದ್ವೇಷಿಸಿ ಒಳ್ಳೆಯತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು. ಅಧ್ಯಾಯವನ್ನು ನೋಡಿ |
ಜೀವಸ್ವರೂಪನಾದ ದೇವರನ್ನು ದೂಷಿಸುವದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿನ್ನ ದೇವರಾದ ಯೆಹೋವನು ಕೇಳಿರುವನು; ನಿನ್ನ ದೇವರಾದ ಯೆಹೋವನು ತಾನು ಹೇಳಿದ ವಾಕ್ಯಗಳ ನಿವಿುತ್ತ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿರಿ ಎಂಬದೇ.