Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:18 - ಕನ್ನಡ ಸತ್ಯವೇದವು J.V. (BSI)

18 ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡಿರುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ, ಕತ್ತಲೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ ಕತ್ತಲೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸ್ವಾಮಿಯ ಆ ದಿನಕ್ಕಾಗಿ ಕಾತುರದಿಂದ ಕಾದಿರುವರೇ, ಅಯ್ಯೋ ನಿಮಗೆ ಕೇಡು; ಆ ದಿನ ಏನಾಗುತ್ತದೆಂದು ನಿಮಗೆ ಗೊತ್ತೆ? ಸ್ವಾಮಿಯ ಆ ದಿನ ನಿಮಗೆ ಬೆಳಕಾಗಿರದು, ಕತ್ತಲೆಯ ದಿನವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಿಮ್ಮಲ್ಲಿ ಕೆಲವರಿಗೆ ಯೆಹೋವನ ನ್ಯಾಯತೀರ್ಪಿನ ದಿನವನ್ನು ನೋಡುವ ಮನಸ್ಸಿದೆ. ಆ ದಿವಸವನ್ನು ಯಾಕೆ ನೀವು ನೋಡಬೇಕು? ಯೆಹೋವನ ನ್ಯಾಯಾತೀರ್ಪಿನ ದಿನವು ಬೆಳಕನ್ನಲ್ಲ, ಕತ್ತಲನ್ನು ತರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರ ದಿನವನ್ನು ಅಪೇಕ್ಷಿಸುವವರೇ, ಅಯ್ಯೋ ನಿಮಗೆ ಕಷ್ಟ! ಆ ದಿನವನ್ನು ನೀವು ಅಪೇಕ್ಷಿಸುವುದೇಕೆ? ಯೆಹೋವ ದೇವರ ದಿವಸವು ನಿಮಗೆ ಬೆಳಕಲ್ಲ, ಕತ್ತಲೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:18
26 ತಿಳಿವುಗಳ ಹೋಲಿಕೆ  

ಯೆಹೋವನ ದಿನವು ಸಮೀಪಿಸಿತು; ಅಯ್ಯೋ, ದಿನವೇ! ಅದು ಸರ್ವಶಕ್ತನಿಂದ ನಾಶನದಿನವಾಗಿಯೇ ಬರುವದು.


ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಅಯ್ಯೋ, ಆ ದಿನವು ಘೋರವಾದದ್ದು, ಅದಕ್ಕೆ ಎಣೆಯಿಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅದರಿಂದ ಪಾರಾಗುವರು.


ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟುಹೋಗಿದೆ; ಪ್ರಜೆಯು ಅಗ್ನಿಗೆ ಆಹುತಿಯಾಗಿದೆ; ಅಣ್ಣನು ತಮ್ಮನನ್ನು ಕರುಣಿಸನು.


ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರ ಮೇಲೆ ಗುರುಗುಟ್ಟುವರು; ದೇಶದಲ್ಲಿಯೋ, ಆಹಾ, ಅಂಧಕಾರವೂ ವ್ಯಾಕುಲವೂ ತುಂಬಿರುವವು, ಮೋಡ ಕವಿದು ಬೆಳಕು ಕತ್ತಲಾಗುವದು.


ನಾವು ಆತನ ಕೆಲಸವನ್ನು ನೋಡಬೇಕು, ಅದನ್ನು ಬೇಗನೆ ನಡಿಸಲಿ, ಇಸ್ರಾಯೇಲ್ಯರ ಸದಮಲಸ್ವಾವಿುಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಸಮೀಪಿಸಿ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!


ಅವುಗಳ ಆಗಮನದಿಂದ ಭೂವಿುಯು ಕಂಪಿಸುತ್ತದೆ, ಆಕಾಶಮಂಡಲವು ನಡುಗುತ್ತದೆ, ಸೂರ್ಯಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಯನ್ನು ಅಡಗಿಸಿಕೊಳ್ಳುತ್ತವೆ;


ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ನಿದ್ರೆ ಹೊಂದಿದ ದಿನ ಮೊದಲುಗೊಂಡು ಸಮಸ್ತವೂ ಲೋಕಾದಿಯಿಂದಿದ್ದ ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳಬೇಕು.


ನರಪುತ್ರನೇ, ಇಗೋ ಇಸ್ರಾಯೇಲ್‍ವಂಶದವರು - ಇವನಿಗಾದ ದಿವ್ಯದರ್ಶನವು ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕದ್ದನ್ನು ಮುಂತಿಳಿಸುತ್ತಾನೆ ಎಂದು ಹೇಳುತ್ತಾರೆ.


ನರಪುತ್ರನೇ, ಕ್ಲುಪ್ತಕಾಲವು ದೂರದೂರ ಹೋಗುತ್ತಲಿದೆ, ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಏನು?


ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವದು, ಸೂರ್ಯಚಂದ್ರ ನಕ್ಷತ್ರಗಳು ಉರಿದು ಲಯವಾಗಿ ಹೋಗುವವು, ಭೂವಿುಯೂ ಅದರಲ್ಲಿರುವ ಕೆಲಸಗಳೂ ಸುಟ್ಟುಹೋಗುವವು.


ಆಹಾ, ಜನರು ನನಗೆ - ಯೆಹೋವನ ಮಾತೆಲ್ಲಿ? ಅದು ಈಗಲೇ ನೆರವೇರಲಿ ಎಂದು ಹೇಳುತ್ತಾರೆ.


ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟಮೃಗಗಳನ್ನೂ ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.


ಮೇಲಕ್ಕೆ ಕಣ್ಣೆತ್ತಿದರೂ ಭೂವಿುಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವವು; ಕಾರ್ಗತ್ತಲೆಗೆ ತಳ್ಳಲ್ಪಡುವರು.


ಅರಚಿಕೊಳ್ಳಿರಿ, ಯೆಹೋವನ ದಿನವು ಸಮೀಪವಾಯಿತು; ಅದು ಸರ್ವಶಕ್ತನಿಂದ ನಾಶರೂಪವಾಗಿ ಬರುವದು.


ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು, ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


ಯೆಹೋವನು ತನ್ನ ಸೈನ್ಯದ ಮುಂದೆ ದನಿಗೈಯುತ್ತಾನೆ; ಆತನ ದಂಡು ಬಹು ದೊಡ್ಡದು; ತನ್ನ ಮಾತನ್ನು ನೆರವೇರಿಸಿಕೊಳ್ಳುವಾತನು ಬಲಿಷ್ಟನಾಗಿದ್ದಾನೆ; ಯೆಹೋವನ ದಿನವು ಮಹತ್ತರವೂ ಅತಿ ಭಯಂಕರವೂ ಆಗಿದೆ; ಅದನ್ನು ತಾಳಿಕೊಳ್ಳುವವರು ಯಾರು?


ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ; ನೀನು ಮಾಡಿದ್ದೇ ನಿನಗಾಗುವದು; ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವದು.


ಭಯದ ಸಪ್ಪಳದಿಂದ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂವಿುಯ ಅಸ್ತಿವಾರಗಳು ಕಂಪಿಸುತ್ತಿವೆ.


ಅವರಂತು ದಿನ ದಿನವೂ ನನ್ನ ದರ್ಶನಕ್ಕಾಗಿ ಬಂದು ನನ್ನ ಮಾರ್ಗವನ್ನು ತಿಳಿದುಕೊಳ್ಳುವದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು