ಆಮೋಸ 5:19 - ಕನ್ನಡ ಸತ್ಯವೇದವು J.V. (BSI)19 ಸಿಂಹದ ಕಡೆಯಿಂದ ಓಡಿದವನಿಗೆ ಕರಡಿಯು ಎದುರುಬಿದ್ದಂತಾಗುವದು; ಅವನು ಮನೆಗೆ ಓಡಿಬಂದು ಕೈಯನ್ನು ಗೋಡೆಯ ಮೇಲೆ ಊರಲು ಹಾವು ಕಚ್ಚಿದ ಹಾಗಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದು ಹೇಗೆಂದರೆ: “ಸಿಂಹದ ಬಾಯಿಯಿಂದ ತಪ್ಪಿಸಿಕೊಂಡು ಓಡುತ್ತಿರುವವನು ಕರಡಿಯನ್ನು ಎದುರುಗೊಳ್ಳುವಂತೆ ಆಗುವುದು ಅಥವಾ ಅವನು ಅಲ್ಲಿಂದ ಮನೆಗೆ ಓಡಿಬಂದು ಗೋಡೆಯ ಮೇಲೆ ಕೈಯೂರಲು ಅವನಿಗೆ ಹಾವು ಕಚ್ಚಿದಂತೆ ಆಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಗ ನೀವು ಸಿಂಹದ ಬಾಯಿಂದ ತಪ್ಪಿಸಿಕೊಂಡು ಕರಡಿಯ ಬಾಯಿಗೆ ಬೀಳುವ ಮನುಷ್ಯನಂತಿರುವಿರಿ. ಆಗ ನೀವು ನಿಮ್ಮ ಮನೆಯ ಆಶ್ರಯಕ್ಕೆ ಓಡಿಹೋಗಿ ಗೋಡೆಗೆ ಒರಗಿ ನಿಂತಾಗ ಒಂದು ಹಾವಿನಿಂದ ಕಚ್ಚಿಸಿಕೊಂಡವರಂತೆ ಇರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದು ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ, ಕರಡಿಯನ್ನು ಎದುರುಗೊಂಡ ಹಾಗೆಯೂ, ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈಯನ್ನು ಒರಗಿಸಿದಾಗ, ಸರ್ಪವು ಕಚ್ಚಿದ ಹಾಗೆಯೂ ಇರುವುದು. ಅಧ್ಯಾಯವನ್ನು ನೋಡಿ |