Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:21 - ಕನ್ನಡ ಸತ್ಯವೇದವು J.V. (BSI)

21 ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಫೀಕರಿಸುತ್ತೇನೆ; ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ, ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ನಿಮ್ಮ ಹಬ್ಬಹುಣ್ಣಿಮೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ. ನಿಮ್ಮ ಉತ್ಸವಗಳ ವಾಸನೆಯೂ ನನಗೆ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನಿಮ್ಮ ಆರಾಧನಾ ದಿವಸಗಳನ್ನು ನಾನು ದ್ವೇಷಿಸುತ್ತೇನೆ. ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ನಿಮ್ಮ ಧಾರ್ಮಿಕ ಕೂಟಗಳಲ್ಲಿ ನಾನು ಸಂತೋಷಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿಮ್ಮ ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ. ನಿಮ್ಮ ಸಭೆಗಳು ನನಗೆ ದುರ್ವಾಸನೆ ಇದ್ದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:21
21 ತಿಳಿವುಗಳ ಹೋಲಿಕೆ  

ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿನೋಡುವದಿಲ್ಲ.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ನೀವು ಶೆಬದ ಧೂಪವನ್ನೂ ದೂರದೇಶದ ಒಳ್ಳೆ ಬಜೆಯನ್ನೂ ನನಗೆ ಅರ್ಪಿಸುವದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಲ್ಲ.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳಿಗೆ ಮೆಚ್ಚನು; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವದು.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವದು ಮತ್ತೂ ಅಸಹ್ಯ.


ಅದರ ಸುವಾಸನೆಯು ಯೆಹೋವನಿಗೆ ಗಮಗವಿುಸಲು ಆತನು ಹೃದಯದೊಳಗೆ - ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿವಿುತ್ತವಾಗಿ ಭೂವಿುಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ.


ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ಇವರು ಉಪವಾಸ ಮಾಡುವಾಗ ಇವರ ಮೊರೆಯನ್ನು ಕೇಳೆನು; ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು; ಖಡ್ಗ ಕ್ಷಾಮ ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು ಎಂದು ಹೇಳಿದನು.


ಇವಳು ಮುಚ್ಚುಮರೆಯಿಲ್ಲದೆ ಸೂಳೆತನಮಾಡಿ ತನ್ನ ಮಾನವನ್ನು ಕೆಡಿಸಿಕೊಂಡಾಗ ನನ್ನ ಅನುರಾಗವು ಮೊದಲು ಇವಳ ಅಕ್ಕನಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.


ನಾನು ಅವಳ ಉಲ್ಲಾಸ, ಹಬ್ಬ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.


ಅವು ತಮ್ಮ ದನಕುರಿಗಳ ಸಂಗಡ ಯೆಹೋವನನ್ನು ಶರಣುಹೊಗಲು ಹೊರಡುವವು; ಆತನು ಸಿಕ್ಕನು, ಅವುಗಳ ಕಡೆಯಿಂದ ಮರೆಯಾಗಿದ್ದಾನೆ.


ಬೇತೇಲಿಗೆ ಬಂದು ದ್ರೋಹಮಾಡಿರಿ, ಗಿಲ್ಗಾಲಿನಲ್ಲಿ ನೆರೆದು ದ್ರೋಹವನ್ನು ಇನ್ನೂ ಹೆಚ್ಚಿಸಿರಿ; ಪ್ರತಿದಿನ ಬೆಳಿಗ್ಗೆ ನಿಮ್ಮ ಯಜ್ಞಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ,


ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮಮಾಡಿರಿ, [ಕೊಟ್ಟ] ಕಾಣಿಕೆಗಳನ್ನು ಪ್ರಕಟಿಸಿರಿ, ಸಾರಿಕೊಳ್ಳಿರಿ; ಇಸ್ರಾಯೇಲ್ಯರೇ, ಹೀಗೆ ಮಾಡುವದು ನಿಮಗಿಷ್ಟವಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ಸೇನಾಧೀಶ್ವರದೇವರಾದ ಯೆಹೋವನ ನುಡಿಯನ್ನು ಕೇಳಿರಿ - ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗಂದಿದ್ದಾನೆ - ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು ಅದರ ಸೌಧಗಳನ್ನು ಹಗೆಮಾಡುತ್ತೇನೆ; ಆದದರಿಂದ ನಾನು ರಾಜಧಾನಿಯನ್ನೂ ಅದರ ಸಕಲಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು,


ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು, ನಿಮ್ಮ ಗಾಯನಗಳನ್ನೆಲ್ಲಾ ಶೋಕಗೀತಕ್ಕೆ ತಿರುಗಿಸುವೆನು; ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು ತಲೆಬೋಳಿಸಿಕೊಳ್ಳುವಂತೆ ಮಾಡುವೆನು; ನಿನ್ನ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವದು, ಅದು ಆದ ಮೇಲೂ ವ್ಯಾಕುಲವು ಇದ್ದೇ ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು