Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:6 - ಕನ್ನಡ ಸತ್ಯವೇದವು J.V. (BSI)

6 ಯೆಹೋವನ ಕಡೆಗೆ ತಿರುಗಿಕೊಳ್ಳಿರಿ, ಬದುಕುವಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ನುಗ್ಗಿಯಾನು; ನುಂಗುವ ಆತನ ರೋಷಾಗ್ನಿಯನ್ನು ಆರಿಸುವದಕ್ಕೆ ಬೇತೇಲಿನಲ್ಲಿ ಯಾರೂ ಇರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರಸ್ವಾಮಿಗೆ ಅಭಿಮುಖರಾಗಿರಿ, ನೀವು ಬದುಕುವಿರಿ. ಇಲ್ಲವಾದರೆ ಅವರು ಬೆಂಕಿಯೋಪಾದಿ ಜೋಸೆಫನ ಮನೆತನದ ಮೇಲೆ ಎರಗಿಯಾರು. ಬೇತೇಲಿನ ಜನರನ್ನು ಭಸ್ಮಮಾಡಿಯಾರು. ಆ ಬೆಂಕಿಯನ್ನು ಯಾರೂ ಆರಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನ ಬಳಿಗೆ ಹೋಗು. ಆಗ ಜೀವಿಸುವೆ. ಯೆಹೋವನ ಬಳಿಗೆ ನೀನು ಹೋಗದಿದ್ದಲ್ಲಿ ಯೋಸೇಫನ ಮನೆತನಕ್ಕೆ ಬೆಂಕಿಯು ಹಿಡಿಯುವುದು. ಆ ಬೆಂಕಿಯು ಯೋಸೇಫನ ಮನೆಯನ್ನು ದಹಿಸುವದು. ಬೇತೇಲಿನಲ್ಲಿ ಅದನ್ನು ಯಾರೂ ನಂದಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ಯೆಹೋವ ದೇವರನ್ನು ಹುಡುಕಿರಿ ಮತ್ತು ಬದುಕಿರಿ. ಇಲ್ಲದಿದ್ದರೆ, ಆತನು ಬೆಂಕಿಯಂತೆ ಯೋಸೇಫನ ಗೋತ್ರಗಳಲ್ಲಿ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:6
28 ತಿಳಿವುಗಳ ಹೋಲಿಕೆ  

ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.


ಕೆಟ್ಟದ್ದನ್ನಲ್ಲ, ಒಳ್ಳೆಯದನ್ನು ಅನುಸರಿಸಿರಿ, ಬಾಳುವಿರಿ; ನೀವು ಅಂದುಕೊಂಡಂತೆ ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.


ಯೆಹೋವನು ಇಸ್ರಾಯೇಲ್ ವಂಶಕ್ಕೆ ಹೀಗೆ ನುಡಿಯುತ್ತಾನೆ - ನನ್ನನ್ನೇ ಆಶ್ರಯಿಸಿ ಬದುಕಿಕೊಳ್ಳಿರಿ;


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ. ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿರಿ, ಬಿಟ್ಟುಬಿಡಿರಿ; ನೀವು ಸಾಯಲೇಕೆ? ಇದು ಕರ್ತನಾದ ಯೇಹೋವನ ನುಡಿ.


ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟದ್ದು ಇಲ್ಲದಂತಾಗುವದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸುವೆನು.


ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ, ಉತ್ತಮೋತ್ತಮ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫಿನ ಗಾಯಕ್ಕೆ ಮರುಗರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ಎಫ್ರಾಯೀಮು ಹಿಡಿದಿರುವ ದಂಡವನ್ನು ಅಂದರೆ ಯೋಸೇಫಿನ ಮತ್ತು ಯೋಸೇಫಿಗೆ ಸೇರಿದ ಇಸ್ರಾಯೇಲ್ ಕುಲಗಳ ದಂಡವನ್ನು ನಾನು ತೆಗೆದು ಯೆಹೂದದ ದಂಡಕ್ಕೆ ಉದ್ದವಾಗಿ ಸೇರಿಸಿ ಅವೆರಡನ್ನು ನನ್ನ ಕೈಯಲ್ಲಿ ಒಂದೇ ದಂಡವಾಗಿ ಹಿಡಿಯುವೆನು ಎಂಬದನ್ನು ಹೇಳು.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವದು; ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕಾಡುಮರಗಳ ಮೇಲೆಯೂ ಭೂವಿುಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಆರದೆ ದಹಿಸುವದು.


ಯೆಹೂದದವರೇ, ಯೆರೂಸಲೇವಿುನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ ಯೆಹೋವನಿಗಾಗಿ ಸುನ್ನತಿಯಾಗಿರಿ; ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವದು.


ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ಗುಂಜು, ಅವನ ಕಾರ್ಯವೇ ಕಿಡಿ, ಎರಡು ಸೇರಿ ಯಾರೂ ನಂದಿಸಲಾಗದಂತೆ ಸುಟ್ಟುಹೋಗುವವು.


ಯೌವನಸ್ಥನಾದ ಯಾರೊಬ್ಬಾಮನು ಬಹುಸಾಮರ್ಥ್ಯದಿಂದ ಕೆಲಸಮಾಡುತ್ತಿರುವದನ್ನು ಕಂಡು ಅವನನ್ನು ಯೋಸೇಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇವಿುಸಿದನು.


ಒಡೆಯನೇ, ನಿನ್ನ ಸೇವಕನಾದ ನಾನು ಪಾಪ ಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದದರಿಂದಲೇ ನಾನು ಈಹೊತ್ತು ಅರಸನನ್ನು ಎದುರುಗೊಳ್ಳುವದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಾಗಿ ಬಂದಿದ್ದೇನೆ ಎಂದು ಹೇಳಿದನು.


ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮ ತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದಕುಲದವರಿಗೂ ಉತ್ತರದಲ್ಲಿ ಯೋಸೇಫನ ಕುಲದವರಿಗೂ ಸ್ವಾಸ್ತ್ಯವು ಸಿಕ್ಕಿರುತ್ತದೆ. ಅದು ಅವರಿಗೇ ಇರಲಿ.


ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ [ದ್ರೋಹಿಗಳನ್ನು] ದಹಿಸಿ ಬಿಡುವವನಾಗಿದ್ದಾನೆಂದು ತಿಳಿಯಿರಿ.


ಒಬ್ಬನು ಹೊತ್ತಿಸಿದ ಬೆಂಕಿ ಅಕಸ್ಮಾತ್ತಾಗಿ ಮುಳ್ಳಿನ ಗಿಡಗಳಿಗೆ ಹತ್ತಿದ್ದರಿಂದ ಮತ್ತೊಬ್ಬನ ದವಸದ ರಾಶಿಗಳಾಗಲಿ ಬೆಳೆಯಾಗಲಿ ಹೊಲವಾಗಲಿ ಸುಟ್ಟುಹೋದರೆ, ಬೆಂಕಿಹೊತ್ತಿಸಿದವನು ಈಡುಕೊಡಬೇಕು.


ನನ್ನ ಸಾನ್ನಿಧ್ಯಕ್ಕೆ ಬಾ ಎಂಬ ನಿನ್ನ ಮಾತಿಗೆ ನಾನು - ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬರಲೇ ಬರುವೆನು ಎಂದು ಉತ್ತರ ಕೊಟ್ಟೆನು.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅದಕ್ಕೆ ಮುಯ್ಯಿತೀರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು; ಯಜ್ಞವೇದಿಯ ಕೊಂಬುಗಳು ಕತ್ತರಿಸಲ್ಪಟ್ಟು ನೆಲದ ಪಾಲಾಗುವವು.


ಯೆಹೋವನ ನಿಯಮವನ್ನು ಕೈಕೊಂಡ ಲೋಕದ ದೀನರೇ, ನೀವೆಲ್ಲರೂ ಯೆಹೋವನನ್ನು ಆಶ್ರಯಿಸಿರಿ, ಸದ್ಧರ್ಮವನ್ನು ಅಭ್ಯಾಸಿಸಿರಿ, ದೈನ್ಯವನ್ನು ಹೊಂದಿಕೊಳ್ಳಿರಿ; ಯೆಹೋವನ ಸಿಟ್ಟಿನ ದಿನದಲ್ಲಿ ಒಂದು ವೇಳೆ ಮರೆಯಾಗುವಿರಿ.


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯುತ್ತಿರುವದು, ಆರಿಹೋಗುವದಿಲ್ಲ ಅನ್ನುತ್ತಾನೆ.


ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವದಿಲ್ಲ.


ಯೆರೆಮೀಯನು - ನಿನ್ನನ್ನು ಒಪ್ಪಿಸರು; ಜೀಯಾ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಕೊಳ್ಳು; ಕೈಕೊಂಡರೆ ಪ್ರಾಣವುಳಿಯುವದು, ಸುಖವೂ ಆಗುವದು.


ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಶಿಷ್ಟರನ್ನೂ ದುಷ್ಟರನ್ನೂ ಸಂಹರಿಸಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು