Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:7 - ಕನ್ನಡ ಸತ್ಯವೇದವು J.V. (BSI)

7 ನ್ಯಾಯವನ್ನು ಕಹಿಮಾಡುವವರೇ, ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನ್ಯಾಯವನ್ನು ಕಹಿಯಾಗಿಸುವವರೇ, ಧರ್ಮವನ್ನು ಕಸವಾಗಿಸುವವರೇ, ನಿಮಗೆ ಧಿಕ್ಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7-9 ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನ್ಯಾಯವನ್ನು ಕಹಿಯಾಗಿ ತಿರುಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:7
23 ತಿಳಿವುಗಳ ಹೋಲಿಕೆ  

ಕುದುರೆಗಳು ಕೋಡುಗಲ್ಲಿನ ಮೇಲೆ ಓಡಾಡುವವೋ; ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷಮಾಡಿ ಧರ್ಮದ ಸುಫಲವನ್ನು ಕಹಿಗೆ ತಂದಿರಲ್ಲಾ.


ಯೆಹೋವನನ್ನು ಆಶ್ರಯಿಸದೆ ಯೆಹೋವನ ದರ್ಶನವನ್ನು ಬಯಸದೆ ಯೆಹೋವನ ಮಾರ್ಗಬಿಟ್ಟವರನ್ನೂ ಧ್ವಂಸಪಡಿಸುವೆನು.


ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನಮಾಡಿಕೊಳ್ಳುತ್ತಾರೆ; ಅಲ್ಲಿನ ನ್ಯಾಯವು ನೇಗಿಲಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ.


ಇದಲ್ಲದೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ನಾನು ಅವನ ಮುಂದೆ ಒಡ್ಡಿದ ಆಟಂಕವನ್ನು ಎಡವಿದರೆ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆ ಬಾರವು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.


ಎಚ್ಚರಿಕೆಯಾಗಿರ್ರಿ; ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ ಕುಟುಂಬವಾಗಲಿ ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ದುಷ್ಟನು ನಡಿಸುವ ದುರಾಚಾರಗಳನ್ನೆಲ್ಲಾ ನಡಿಸಿದರೆ ಅವನು ಬಾಳುವನೋ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಅಯ್ಯೋ, ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ ನನ್ನ ಜನರಲ್ಲಿನ ದರಿದ್ರರಿಗೆ ನ್ಯಾಯವನ್ನು ತಪ್ಪಿಸಬೇಕೆಂತಲೂ ವಿಧವೆಯರನ್ನು ಸೂರೆಮಾಡಿ ಅನಾಥರನ್ನು ಕೊಳ್ಳೆಹೊಡೆಯಬೇಕೆಂತಲೂ


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ.


ನಿನ್ನ ಅಧಿಕಾರಿಗಳು ದ್ರೋಹಿಗಳೂ ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಆಶಿಸಿ ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸರು; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ಯೆಹೋವನು ಡೊಂಕುದಾರಿಹಿಡಿದವರನ್ನು ಪಾತಕಿಗಳ ಗತಿಗೆ ಹೋಗಮಾಡಲಿ. ಇಸ್ರಾಯೇಲ್ಯರಿಗೆ ಶುಭವುಂಟಾಗಲಿ.


ಅವನ ಬಾಯಿಂದ ಕೆಡುಕೂ ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ ಪರಹಿತವನ್ನೂ ಬಿಟ್ಟೇ ಬಿಟ್ಟಿದ್ದಾನೆ.


ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವದು.


ಅಯ್ಯೋ, ಕೆಟ್ಟದ್ದನ್ನು ಒಳ್ಳೇದೆಂದೂ ಒಳ್ಳೇದನ್ನು ಕೆಟ್ಟದ್ದೆಂದೂ ಬೋಧಿಸಿ ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸಿ ಕಹಿಯು ಸಿಹಿ, ಸಿಹಿಯು ಕಹಿ ಎಂದು ಸ್ಥಾಪಿಸುವವರ ಗತಿಯನ್ನು ಏನೆಂದು ಹೇಳಲಿ!


ನಾನು ಅದರೊಳಗಿಂದ ಅಧಿಪತಿಯನ್ನು ಕಡಿದುಹಾಕಿ ಸಕಲರಾಜ್ಯಾಧಿಕಾರಿಗಳನ್ನೂ ಸಂಹರಿಸುವೆನು; ಇದು ಯೆಹೋವನ ನುಡಿ.


ತಮ್ಮ ಉಪ್ಪರಿಗೆಗಳಲ್ಲಿ ಬಾಧೆಕೊಳ್ಳೆಗಳಿಂದ ಸಂಪಾದಿಸಿದ್ದನ್ನು ಕೂಡಿಸಿಟ್ಟುಕೊಂಡಿರುವವರು ನ್ಯಾಯವಾಗಿ ನಡೆಯಲು ಅರಿಯರು; ಇದು ಯೆಹೋವನ ನುಡಿ.


ಧರ್ಮಕ್ಕೆ ದೂರರಾದ ಹಟಗಾರರೇ, ನನ್ನ ಮಾತಿಗೆ ಕಿವಿಗೊಡಿರಿ;


ನ್ಯಾಯಕ್ಕೆ ಅಸಹ್ಯಪಟ್ಟು ನೆಟ್ಟಗಿರುವದನ್ನು ಸೊಟ್ಟಗೆ ಮಾಡುವ ಯಾಕೋಬ್ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧ್ಯಕ್ಷರೇ,


ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಗದು; ದುಷ್ಟನು ಶಿಷ್ಟನನ್ನು ಸುತ್ತಿಕೊಂಡಿದ್ದಾನೆ, ಆದದರಿಂದ ಸಾಗುವ ನ್ಯಾಯವು ವಕ್ರವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು