Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:8 - ಕನ್ನಡ ಸತ್ಯವೇದವು J.V. (BSI)

8 ಕೃತ್ತಿಕೆಯನ್ನೂ ಮೃಗಶಿರವನ್ನೂ ಸೃಷ್ಟಿಸಿ ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ ಹಗಲನ್ನು ಇರುಳಿಗೆ ಮಾರ್ಪಡಿಸಿ ಸಾಗರದ ಜಲವನ್ನು ಬರಮಾಡಿಕೊಂಡು ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ; ಯೆಹೋವನೆಂಬದೇ ಆತನ ನಾಮಧೇಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕೃತ್ತಿಕೆ, ಮೃಗಶಿರ, ನಕ್ಷತ್ರಪುಂಜಗಳನು ಸೃಜಿಸಿದಾತನು ಕತ್ತಲನು ಬೆಳಕಾಗಿ, ಹಗಲನು ಇರುಳಾಗಿ ಮಾಡುವವನು, ಕಡಲಿನ ಜಲವನು ಮೇಲೆತ್ತಿ, ಧರೆಗೆ ಮಳೆಗರೆವಾತನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ವೃಷಭ ರಾಶಿಯನ್ನೂ, ಮೃಗಶಿರವನ್ನೂ ಉಂಟು ಮಾಡಿದವನನ್ನೂ ಕಾರ್ಗತ್ತಲನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲೆ ಮಾಡಿ, ಸಮುದ್ರದ ನೀರನ್ನು ಬರಮಾಡಿ, ಅವುಗಳನ್ನು ಭೂಮಿಯ ಮೇಲೆ ಸುರಿಸುವ ಯೆಹೋವ ದೇವರು ಎಂಬ ಹೆಸರುಳ್ಳವರನ್ನೇ ಹುಡುಕಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:8
23 ತಿಳಿವುಗಳ ಹೋಲಿಕೆ  

ಇಗೋ, ಪರ್ವತಗಳನ್ನು ರೂಪಿಸಿ ವಾಯುವನ್ನು ಸೃಷ್ಟಿಸಿ ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂವಿುಯ ಉನ್ನತಪ್ರದೇಶಗಳಲ್ಲಿ ನಡೆಯುವಾತನಿಗೆ ಸೇನಾಧೀಶ್ವರದೇವರಾದ ಯೆಹೋವನೆಂಬದೇ ನಾಮಧೇಯ.


ಸಪ್ತರ್ಷಿಗಳನ್ನೂ ಮೃಗಶಿರವನ್ನೂ ಕೃತ್ತಿಕೆಯನ್ನೂ ತೆಂಕಣ ದಿಕ್ಕಿನ ನಕ್ಷತ್ರಗ್ರಹಗಳನ್ನೂ ನಿರ್ಮಿಸಿದವನು ಆತನೇ.


ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತಾಗಿ ಕಟ್ಟಿಕೊಂಡು ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ; ಸಮುದ್ರದ ನೀರನ್ನು ಕರೆದು ಭೂಮಂಡಲದ ಮೇಲೆ ಹೊಯ್ಯುತ್ತಾನೆ; ಯೆಹೋವನೆಂಬದೇ ಆತನ ನಾಮಧೇಯ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂವಿುಯನ್ನು ಹಗಲಿನಲ್ಲೇ ಮೊಬ್ಬುಮಾಡುವೆನು.


ನೀನು ಕತ್ತಲೆಯನ್ನು ಬರಮಾಡಲು ರಾತ್ರಿಯಾಗುತ್ತದೆ. ಆಗ ಕಾಡಿನ ಮೃಗಗಳೆಲ್ಲಾ ಹೊರಬರುತ್ತವೆ.


ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು. ಅವರು ಆತನ ಆಜ್ಞೆಗಳನ್ನು ತಿರಸ್ಕರಿಸಲಿಲ್ಲ.


ಅಗಾಧವಿಷಯಗಳನ್ನು ಕತ್ತಲೊಳಗಿಂದ ಬೈಲಿಗೆ ತಂದು ಗಾಢಾಂಧಕಾರವನ್ನು ಪ್ರಕಾಶಗೊಳಿಸುವನು.


ಕತ್ತಲಲ್ಲಿಯೂ ಮರಣಾಂಧಕಾರದಲ್ಲಿಯೂ ವಾಸಿಸಿರುವವರಾದ ನಮಗೆ ಪ್ರಕಾಶ ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವದು ಅಂದನು.


ಕತ್ತಲಲ್ಲಿ ವಾಸಿಸಿದ ಈ ಸೀಮೆಗಳ ಜನರಿಗೆ ದೊಡ್ಡ ಬೆಳಕು ಕಾಣಿಸಿತು; ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಸೂರ್ಯೋದಯವಾಯಿತು ಎಂಬದು.


ಕುರುಡರಂತೆ ಗೋಡೆಯನ್ನು ತಡವರಿಸುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ, ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ತವರ ಹಾಗಿದ್ದೇವೆ.


ಮತ್ತು ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಯಿಸುವೆನು; ಅವರೆದುರಿನ ಕತ್ತಲನ್ನು ಬೆಳಕುಮಾಡಿ ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು.


ಮೋಡಗಳನ್ನು ಮುಟ್ಟುವಂತೆ ನೀನು ಧ್ವನಿಯೆತ್ತಿದ ಮಾತ್ರಕ್ಕೆ ಹೇರಳವಾದ ನೀರು ನಿನ್ನನ್ನು ಆವರಿಸುವದೋ?


ಆತನು ದಂಡನೆಗಾಗಲಿ ತನ್ನ ಭೂವಿುಯ ಹಿತಕ್ಕಾಗಲಿ ಕೃಪೆದೋರುವದಕ್ಕಾಗಲಿ ಆ ಮೇಘಗಳನ್ನು ಬರಮಾಡುವನು.


ಈ ನಿವಿುತ್ತವಾಗಿ, ಇಗೋ, ಇದೊಂದೇ ಸಲ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು, ಹೌದು, ಗ್ರಹಿಸಮಾಡುವೆನು; ನನ್ನ ನಾಮಧೇಯವು ಯೆಹೋವನೆಂದೇ ಅವರಿಗೆ ಗೊತ್ತಾಗುವದು.


ಕಾರ್ಯವನ್ನು ಸಾಧಿಸಿಕೊಳ್ಳುವ, ಉದ್ದೇಶಿಸಿ ನೆರವೇರಿಸುವ ಯೆಹೋವನಾಮಾಂಕಿತನು ಇಂತೆನ್ನುತ್ತಾನೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು