ಆಮೋಸ 6:10 - ಕನ್ನಡ ಸತ್ಯವೇದವು J.V. (BSI)10 ಸುಡಲು ಬಂದ ದಾಯಾದಿಯು ಒಂದು ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋಗಬೇಕೆಂದು ಅದನ್ನೆತ್ತಿ - ನಿನ್ನ ಹತ್ತಿರ ಇನ್ನು ಯಾರಾದರೂ ಇದ್ದಾರೋ ಎಂದು ಒಳಮನೆಯಲ್ಲಿರುವವನನ್ನು ಕೇಳುವಾಗ ಅವನು ಇಲ್ಲವೆನ್ನಲು ಇವನು ಯೆಹೋವನ ಹೆಸರನ್ನು ಎತ್ತಾನೆಂದು ದಾಯಾದಿಯು ಭಯಪಟ್ಟು ಸುಮ್ಮನಿರು ಎಂದು ಅವನನ್ನು ತಡೆಯುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಶವವನ್ನು ಸುಡಲು ಬಂದ ಸಂಬಂಧಿಕರು, ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮ ಹತ್ತಿರ ಇನ್ನೂ ಯಾರಾದರೂ ಇದ್ದಾರೋ?” ಎಂದು ಮನೆಯಲ್ಲಿರುವವರನ್ನು ಕೇಳುವಾಗ ಅವನು, “ಇಲ್ಲ” ಎನ್ನುವನು. ಆಗ ಸಂಬಂಧಿಕನು, “ಸುಮ್ಮನಿರು, ನಾವು ಯೆಹೋವನ ಹೆಸರನ್ನು ನೆನಪುಮಾಡಿಕೊಳ್ಳಬಾರದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಶವವನ್ನು ಸುಡಲು ಬಂದ ಸಂಬಂಧಿಕರು ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮಲ್ಲಿ ಯಾರಾದರೂ ಉಳಿದಿದ್ದಾರೋ?” ಎಂದು ಒಳಮನೆಯಲ್ಲಿ ಇರುವವನನ್ನು ಕೇಳಿದರೆ, ಅವನು “ಇಲ್ಲ” ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ಸರ್ವೇಶ್ವರಸ್ವಾಮಿಯ ಹೆಸರನ್ನೂ ಎತ್ತಕೂಡದು” ಎಂದು ಎಚ್ಚರಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಒಬ್ಬ ವ್ಯಕ್ತಿಯು ಸತ್ತಾಗ ಅವನ ಸಂಬಂಧಿಕರಲ್ಲಿ ಒಬ್ಬನು ಬಂದು ಶವವನ್ನು ಸುಡಲು ತೆಗೆದುಕೊಂಡು ಹೋಗುವನು. ಸಂಬಂಧಿಕನು ಬಂದು ಎಲುಬುಗಳನ್ನು ಕೊಂಡೊಯ್ಯುವನು. ಮನೆಯೊಳಗೆ ಅವಿತುಕೊಂಡಿರುವವರನ್ನು ಕರೆಯುವನು. “ಇನ್ನೂ ಸತ್ತ ಹೆಣಗಳು ಒಳಗಿವೆಯೋ?” ಎಂದು ವಿಚಾರಿಸುವನು. ಒಳಗಿದ್ದವರು “ಇಲ್ಲ” ಎಂದು ಉತ್ತರಿಸುವರು. ಆಗ ಆ ಸಂಬಂಧಿಕನು ಅವರನ್ನು ತಡೆದು, “ಯೆಹೋವನ ನಾಮವನ್ನು ನಾವು ಉಚ್ಚರಿಸಬಾರದು” ಎಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಮತ್ತು ಸಂಬಂಧಿಯೊಬ್ಬರು ಮೃತ ದೇಹಗಳನ್ನು ಸುಡಲು ಆ ಮನೆಯಿಂದ ಹೊರತೆಗೆಯಲು ಬಂದಾಗ ಮತ್ತು ಅಲ್ಲಿ ಅಡಗಿಕೊಂಡಿದ್ದ ವ್ಯಕ್ತಿಯನ್ನು, “ನಿಮ್ಮೊಂದಿಗೆ ಬೇರೆ ಯಾರಾದರೂ ಇದ್ದಾರೆಯೇ?” ಎಂದು ಕೇಳಲು ಅವನು ಇಲ್ಲ ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ನಾವು ಯೆಹೋವ ದೇವರ ಹೆಸರನ್ನು ತೆಗೆದುಕೊಳ್ಳಬಾರದು.” ಅಧ್ಯಾಯವನ್ನು ನೋಡಿ |