Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:4 - ಕನ್ನಡ ಸತ್ಯವೇದವು J.V. (BSI)

4 ದಂತದ ಮಂಚಗಳ ಮೇಲೆ ಮಲಗುತ್ತಾರೆ, ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ; ಹಿಂಡಿನ ಮರಿಗಳನ್ನೂ ಕೊಟ್ಟಿಗೆಯ ಕರುಗಳನ್ನೂ ತಿನ್ನುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದಂತದ ಮಂಚಗಳ ಮೇಲೆ ಮಲಗುವ ಜನರೇ, ನಿಮಗೆ ಧಿಕ್ಕಾರ! ಸುಖಾಸನಗಳಲ್ಲೂ ಸುಪ್ಪತ್ತಿಗೆಯ ಮೇಲೂ ಹಾಯಾಗಿ ಒರಗಿಕೊಂಡಿರುವವರೇ, ನಿಮಗೆ ಧಿಕ್ಕಾರ! ಮಂದೆಯ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ಕೊಂದು ತಿನ್ನುವವರೇ, ನಿಮಗೆ ಧಿಕ್ಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಈಗ ನೀವು ಸುಖದ ಜೀವಿತದಲ್ಲಿ ಆನಂದಿಸುತ್ತಿದ್ದೀರಿ, ದಂತದ ಮಂಚದಲ್ಲಿ ಮಲಗುವಿರಿ; ಸುಖಾಸನಗಳ ಮೇಲೆ ಬಿದ್ದುಕೊಳ್ಳುವಿರಿ. ಹಿಂಡಿನಿಂದ ಎಳೇ ಕುರಿಮರಿಯನ್ನೂ ಹಟ್ಟಿಯಿಂದ ಎಳೇ ಕರುವನ್ನೂ ಭಕ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದಂತದ ಮಂಚಗಳ ಮೇಲೆ ಮಲಗಿಕೊಳ್ಳುತ್ತೀರಿ. ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿಕೊಳ್ಳುತ್ತೀರಿ. ಮಂದೆಯೊಳಗಿಂದ ಕುರಿಮರಿಗಳನ್ನೂ ಹಟ್ಟಿಯ ಮಂದೆಯೊಳಗಿಂದ ಕರುಗಳನ್ನೂ ತಿನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:4
18 ತಿಳಿವುಗಳ ಹೋಲಿಕೆ  

ಭೂಲೋಕದಲ್ಲಿ ನೀವು ಅತಿಭೋಗಿಗಳಾಗಿ ಬದುಕಿ ಮನಸ್ಸು ಬಂದಂತೆ ನಡೆದುಕೊಂಡಿದ್ದೀರಿ. ವಧೆಯ ದಿವಸ ಬಂದರೂ ನಿಮ್ಮನ್ನು ಕೊಬ್ಬಿಸಿಕೊಂಡಿದ್ದೀರಿ.


ಯೆಹೋವನು ಇಂತೆನ್ನುತ್ತಾನೆ - ಸಿಂಹದ ಬಾಯೊಳಗಿಂದ ಎರಡು ಕಾಲುಗಳಾಗಲಿ ಕಿವಿಯ ತುಂಡಾಗಲಿ ಹೇಗೆ ಕುರುಬನಿಂದ ರಕ್ಷಿಸಲ್ಪಡುವದೋ ಹಾಗೆಯೇ ಸಮಾರ್ಯದೊಳಗೆ ಗದ್ದುಗೆಯ ಮೂಲೆಯಲ್ಲಿಯೂ ಮಂಚದ ಪಟ್ಟೇದಿಂಬುಗಳಲ್ಲಿಯೂ ಒರಗಿಕೊಳ್ಳುವ ಇಸ್ರಾಯೇಲ್ಯರ [ಸ್ವಲ್ಪಭಾಗ ಮಾತ್ರ] ರಕ್ಷಿಸಲ್ಪಡುವದು.


ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲಾತಿ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವೂ ವೈಭವದೊಡನೆ ಸುಖಸಂತೋಷಪಡುತ್ತಿದ್ದನು.


ಆದರೆ ಇಗೋ, ಉಲ್ಲಾಸ, ಹರ್ಷ, ದನಕೊಯ್ಯುವದು, ಕುರಿಕಡಿಯುವದು, ಮಾಂಸತಿನ್ನುವದು, ದ್ರಾಕ್ಷಾರಸ ಕುಡಿಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವದು [ಇವೇ ನಿಮ್ಮ ಕಾರ್ಯ].


ಕೊಬ್ಬಿನಿಂದ ಅವರ ಕಣ್ಣುಗಳು ಮೇಲೆ ಅವೆ; ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.


ಅಲ್ಲಿ ಬಿಳೀ ನೂಲಿನ ಬಟ್ಟೆಗಳೂ ನೀಲಿಬಟ್ಟೆಗಳೂ ಧೂಮ್ರವರ್ಣವುಳ್ಳ ನಾರಿನ ದಾರದಿಂದ ಸಂಗಮೀರ ಕಲ್ಲು ಕಂಬಗಳಲ್ಲಿನ ಬೆಳ್ಳಿಯ ಉಂಗುರಗಳಿಗೆ ಕಟ್ಟಲ್ಪಟ್ಟಿದ್ದವು. ಜರತಾರೆಯ ಕಸೂತಿ ಹಾಕಿರುವ ಲೋಡುಗಳು ಕೆಂಪು ಬಿಳಿ ಹಳದಿ ಕಪ್ಪು ಬಣ್ಣಗಳುಳ್ಳ ಸಂಗಮೀರ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲ್ಪಟ್ಟಿದ್ದವು.


ಔತಣದ ಮನೆಯಲ್ಲಿಯೂ ಸೇರಬೇಡ, ಅಲ್ಲಿನವರೊಂದಿಗೆ ಕೂತು ತಿಂದು ಕುಡಿಯಬೇಡ.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವದು, ಹೊಟ್ಟೆತುಂಬಿಸಿಕೊಳ್ಳುವದು, ಸ್ವಸುಖದಲ್ಲಿ ಮುಳುಗಿರುವದು, ಇವು ಆಕೆಯಲ್ಲಿಯೂ ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.


ನಿನ್ನನ್ನು ಆಭರಣಗಳಿಂದ ಸಿಂಗರಿಸಿಕೊಂಡು ವೈಭವದ ಮಂಚದ ಮೇಲೆ ಕೂತಿದ್ದಿ; ಅದರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿದ್ದಿ.


ಆ ದಿನದಲ್ಲಿ ಸೌಧಗಳ ಕೀರ್ತನೆಗಳು ಕಿರಚಾಟವಾಗುವವು; ಇದು ಕರ್ತನಾದ ಯೆಹೋವನ ನುಡಿ; ಆಗ ಹೆಣಗಳು ಹೆಚ್ಚುವವು; ಅವುಗಳನ್ನು ಎಲ್ಲೆಲ್ಲಿಯೂ ಮೌನವಾಗಿ ಬಿಸಾಟುಬಿಡುವರು; ಉಸಿರಾಡದಿರ್ರಿ!


ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು, ಅದರ ನಿವಾಸಿಗಳು ಸುಳ್ಳುಗಾರರು, ಅವರ ಬಾಯನಾಲಿಗೆಯು ಮೋಸಕರ.


ಆಮೇಲೆ ಅವರು ಊಟಕ್ಕೆ ಕೂತುಕೊಂಡರು. ಅಷ್ಟರಲ್ಲಿ ಅವರು ಕಣ್ಣೆತ್ತಿ ನೋಡಿ ಇಷ್ಮಾಯೇಲ್ಯರ ಗುಂಪು ಒಂಟೆಗಳ ಮೇಲೆ ಹಾಲುಮಡ್ಡಿ, ಸುಗಂಧತೈಲ, ರಕ್ತಬೋಳ ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವದನ್ನು ಕಂಡರು.


ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತುಹೋದವರ ಫಲವತ್ತಾದ ತಗ್ಗಿಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವಿನ ಪಾಡೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು