ಆಮೋಸ 6:6 - ಕನ್ನಡ ಸತ್ಯವೇದವು J.V. (BSI)6 ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ, ಉತ್ತಮೋತ್ತಮ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫಿನ ಗಾಯಕ್ಕೆ ಮರುಗರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬೋಗುಣಿಬಟ್ಟಲುಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುವವರೇ, ಅತ್ಯುತ್ತಮ ಸುಗಂಧತೈಲಗಳನ್ನು ಲೇಪಿಸಿಕೊಳ್ಳುವವರೇ, ನಿಮಗೆ ಧಿಕ್ಕಾರ! ಏಕೆಂದರೆ ನೀವು ಜೋಸೆಫನ ವಂಶದವರ ವಿನಾಶದ ಬಗ್ಗೆ ನಿಶ್ಚಿಂತರಾಗಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಂದವಾದ ಪಾತ್ರೆಗಳಲ್ಲಿ ದ್ರಾಕ್ಷಾರಸ ಕುಡಿಯುವಿರಿ. ಉತ್ತಮವಾದ ಸುಗಂಧತೈಲವನ್ನು ಉಪಯೋಗಿಸುವಿರಿ. ಯೋಸೇಫನ ಕುಟುಂಬದ ನಾಶನದ ಬಗ್ಗೆಯೂ ನೀವು ಬೇಸರಗೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀವು ತುಂಬಿದ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುತ್ತೀರಿ, ಶ್ರೇಷ್ಠವಾದ ಎಣ್ಣೆಗಳಿಂದ ನಿಮ್ಮನ್ನು ಅಭಿಷೇಕಿಸಿಕೊಳ್ಳುತ್ತೀರಿ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನ ಪಡುವುದಿಲ್ಲ. ಅಧ್ಯಾಯವನ್ನು ನೋಡಿ |