ಆಮೋಸ 6:8 - ಕನ್ನಡ ಸತ್ಯವೇದವು J.V. (BSI)8 ಸೇನಾಧೀಶ್ವರದೇವರಾದ ಯೆಹೋವನ ನುಡಿಯನ್ನು ಕೇಳಿರಿ - ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗಂದಿದ್ದಾನೆ - ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು ಅದರ ಸೌಧಗಳನ್ನು ಹಗೆಮಾಡುತ್ತೇನೆ; ಆದದರಿಂದ ನಾನು ರಾಜಧಾನಿಯನ್ನೂ ಅದರ ಸಕಲಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಪ್ರಮಾಣಮಾಡಿ ಹೇಳಿದ್ದೇನೆಂದರೆ: “ಯಕೋಬ ವಂಶದವರ ಉದ್ಧಟತನವನ್ನು ದ್ವೇಷಿಸುತ್ತೇನೆ. ಅವರ ಮೋಜಿನ ಮಹಲುಗಳನ್ನು ತೃಣೀಕರಿಸುತ್ತೇನೆ. ಅವರ ರಾಜಧಾನಿಯನ್ನೂ ಅದರಲ್ಲಿರುವುದೆಲ್ಲವನ್ನೂ ಶತ್ರುವಶಕ್ಕೆ ಒಪ್ಪಿಸುತ್ತೇನೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನನ್ನ ಒಡೆಯನಾದ ಯೆಹೋವನು ತನ್ನ ಹೆಸರಿನ ಮೇಲೆ ಆಣೆಯಿಟ್ಟು ಈ ಮಾತುಗಳನ್ನು ನುಡಿದಿದ್ದಾನೆ. ಸರ್ವಶಕ್ತನಾದ ಯೆಹೋವನ ನುಡಿಗಳಿವು: “ಯಾಕೋಬನು ಹೆಚ್ಚಳಪಡುವಂಥವುಗಳನ್ನು ನಾನು ದ್ವೇಷಿಸುತ್ತೇನೆ. ಅವನ ಬಲವಾದ ಬುರುಜುಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಶತ್ರುಗಳು ಬಂದು ಪಟ್ಟಣವನ್ನೂ ಪಟ್ಟಣದಲ್ಲಿರುವದೆಲ್ಲವನ್ನೂ ಸೂರೆಮಾಡುವಂತೆ ಮಾಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಸರ್ವಶಕ್ತ ದೇವರಾದ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟುಕೊಂಡಿದ್ದಾರೆ: ನಾನು ಯಾಕೋಬಿನ ಅಹಂಕಾರವನ್ನು ಅಸಹ್ಯಿಸಿಕೊಂಡು, ಅವನ ಅರಮನೆಗಳನ್ನು ಹಗೆಮಾಡುತ್ತೇನೆ. ಆದಕಾರಣ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ನಾನು ಒಪ್ಪಿಸಿ ಬಿಡುತ್ತೇನೆ. ಅಧ್ಯಾಯವನ್ನು ನೋಡಿ |