Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:1 - ಕನ್ನಡ ಸತ್ಯವೇದವು J.V. (BSI)

1 ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು - ಹಿಂಗಾರು ಮಳೆಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ, ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಆಹಾ, ಯೆಹೋವನು ವಿುಡತೆಗಳನ್ನು ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಹಿಂಗಾರು ಮಳೆಬಿದ್ದು ಪೈರು ಸೊಂಪಾಗುವುದಕ್ಕೆ ಆರಂಭವಾದಾಗ ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಯೆಹೋವನು ಮಿಡತೆಗಳನ್ನು ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಡೆಯರಾದ ಸರ್ವೇಶ್ವರ ನನಗೆ ತೋರಿಸಿದ ದರ್ಶನ ಇದು: ಹಿಂಗಾರು ಮಳೆ ಬಿದ್ದಿತ್ತು. ಪೈರು ಸೊಂಪಾಗಿ ಬೆಳೆಯಲು ಆರಂಭಿಸಿತ್ತು. ಈಗಾಗಲೇ ರಾಜಾದಾಯದ ಹುಲ್ಲಿನ ಕೊಯಿಲು ಮುಗಿದು ಮತ್ತೆ ಹುಲ್ಲು ಬೆಳೆಯುತ್ತಿತ್ತು. ಆಗ ಸರ್ವೇಶ್ವರ ಮಿಡತೆಗಳ ಗುಂಪೊಂದನ್ನು ಹೊರಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ನನಗೆ ಇದನ್ನು ತೋರಿಸಿದನು: ಎರಡನೇ ಬೆಳೆಯು ಬೆಳೆಯಲಾರಂಭಿಸಿದ ಕಾಲದಲ್ಲಿ ಆತನು ಮಿಡತೆಗಳನ್ನು ತಯಾರು ಮಾಡುತ್ತಿದ್ದನು. ಅರಸನು ಮೊದಲನೇ ಬೆಳೆಯನ್ನು ರಾಶಿಮಾಡಿಸಿಕೊಂಡು ಹೋದ ನಂತರದ ಬೆಳೆ ಇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಹಿಂಗಾರು ಮಳೆ ಬಿದ್ದು, ಪೈರು ಸೊಂಪಾಗುವುದಕ್ಕೆ ಆರಂಭವಾದಾಗ, ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ, ಬೆಳೆಯು ವೃದ್ಧಿಯಾಗುತ್ತಿದ್ದಾಗ, ಇಗೋ ಯೆಹೋವ ದೇವರು, ಮಿಡತೆಗಳನ್ನು ಉಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:1
14 ತಿಳಿವುಗಳ ಹೋಲಿಕೆ  

ಚೂರಿವಿುಡತೆ ತಿಂದು ವಿುಕ್ಕದ್ದನ್ನು ಗುಂಪುವಿುಡತೆ ತಿಂದುಬಿಟ್ಟಿತು; ಗುಂಪುವಿುಡತೆ ತಿಂದು ವಿುಕ್ಕದ್ದನ್ನು ಸಣ್ಣವಿುಡತೆ ತಿಂದುಬಿಟ್ಟಿತು; ಸಣ್ಣವಿುಡತೆ ತಿಂದು ವಿುಕ್ಕದ್ದನ್ನು ದೊಡ್ಡವಿುಡತೆ ತಿಂದುಬಿಟ್ಟಿತು.


ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು - ಇಗೋ, ಮಾಗಿದ ಹಣ್ಣಿನ ಪುಟ್ಟಿ.


ನಿಮ್ಮನ್ನು ಬೂದಿಯಿಂದಲೂ ಬಿಸಿಗಾಳಿಯಿಂದಲೂ ಬಾಧಿಸಿದೆನು; ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷೆಯ ತೋಟ, ಅಂಜೂರದ ಗಿಡ, ಎಣ್ಣೆಯ ಮರ, ಇವುಗಳನ್ನು ವಿುಡತೆಯು ತಿಂದುಬಿಟ್ಟಿತು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಗುಂಪುವಿುಡತೆ, ಸಣ್ಣವಿುಡತೆ, ದೊಡ್ಡವಿುಡತೆ, ಚೂರಿವಿುಡತೆ, ಅಂತು ನಾನು ನಿಮ್ಮ ಮೇಲೆ ಕಳುಹಿಸಿದ ನನ್ನ ದೊಡ್ಡ ದಂಡು ತಿಂದುಬಿಟ್ಟ ವರುಷಗಳನ್ನು ನಾನು ನಿಮಗೆ ಕಟ್ಟಿಕೊಡುವೆನು.


ಅನಂತರ ಯೆಹೋವನು ನನಗೆ ನಾಲ್ಕು ಮಂದಿ ಕಮ್ಮಾರರನ್ನು ತೋರಿಸಿದನು.


ಕರ್ತನು ಮತ್ತೊಂದನ್ನು ನನಗೆ ತೋರಿಸಿದನು - ಇಗೋ, ಆತನು ನೂಲುಮಟ್ಟದ ಗೋಡೆಯ ಮೇಲೆ ನಿಂತಿದ್ದನು; ಆತನ ಕೈಯಲ್ಲಿ ನೂಲುಗುಂಡಿತ್ತು.


ಕರ್ತನಾದ ಯೆಹೋವನು ಇನ್ನೊಂದನ್ನು ನನಗೆ ತೋರಿಸಿದನು - ಆಹಾ, ಕರ್ತನಾದ ಯೆಹೋವನು ತನ್ನ ಪಕ್ಷವಾಗಿ ವ್ಯಾಜ್ಯವಾಡುವದಕ್ಕೆ ಅಗ್ನಿಯನ್ನು ಕರೆದನು.


ಯೆಹೋವನು ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆನು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಶಿಲ್ಪಿಗಳನ್ನೂ ಕಮ್ಮಾರರನ್ನೂ ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ಕಾಣಮಾಡಿದನು.


ನೀವು ಕೊಳ್ಳೆಹೊಡೆದದ್ದನ್ನು ಇತರರು ವಿುಡತೆಗಳಂತೆ ಕೊಳ್ಳೆಮಾಡುವರು; ಶಲಭಗಳಂತೆ ಅದರ ಮೇಲೆ ಹಾರಿಬೀಳುವರು;


ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು, ಅದು ನಿಮ್ಮ ಭೂವಿುಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷೆಯ ಹಣ್ಣು ತೋಟದಲ್ಲಿ ಉದುರಿಹೋಗದು; ಇದು ಸೇನಾಧೀಶ್ವರ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು