Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:10 - ಕನ್ನಡ ಸತ್ಯವೇದವು J.V. (BSI)

10 ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ - ಆಮೋಸನು ಇಸ್ರಾಯೇಲ್ಯರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚುಮಾಡಿದ್ದಾನೆ; ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ, “ಆಮೋಸನು ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚು ಮಾಡಿದ್ದಾನೆ. ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತರುವಾಯ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಯೇಲಿನ ಅರಸ ಯಾರೊಬ್ಬಾಮನಿಗೆ ಹೀಗೆ ಹೇಳಿಕಳುಹಿಸಿದನು: “ಆಮೋಸನು ನಿನಗೆ ವಿರುದ್ಧವಾಗಿ ಇಸ್ರಯೇಲರಲ್ಲಿ ಒಳಸಂಚು ಹೂಡಿದ್ದಾನೆ. ಅವನ ಮಾತುಗಳನ್ನು ನಾಡು ಸಹಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬೇತೇಲಿನ ಯಾಜಕನಾದ ಅಮಚ್ಯನು ಇಸ್ರೇಲಿನ ಅರಸನಾದ ಯಾರೊಬ್ಬಾಮನಿಗೆ ಈ ಪತ್ರವನ್ನು ಕಳುಹಿಸಿದನು. “ನಿನಗೆ ವಿರುದ್ಧವಾಗಿ ಆಮೋಸನು ಯೋಜನೆಗಳನ್ನು ಮಾಡುತ್ತಿದ್ದಾನೆ. ಇಸ್ರೇಲಿನ ಜನರು ನಿನಗೆ ವಿರುದ್ಧವಾಗಿ ಯುದ್ಧಮಾಡುವಂತೆ ಪ್ರಯತ್ನಿಸುತ್ತಾನೆ. ಅವನು ಎಷ್ಟೆಲ್ಲಾ ಮಾತಾಡುತ್ತಾನೆಂದರೆ, ಈ ದೇಶವು ಅವನ ಮಾತುಗಳನ್ನು ತುಂಬಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ ಕಳುಹಿಸಿ ಹೇಳಿದ್ದೇನೆಂದರೆ: “ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:10
23 ತಿಳಿವುಗಳ ಹೋಲಿಕೆ  

ಆಮೇಲೆ ಆ ಪ್ರಧಾನರು ಅರಸನಿಗೆ - ಒಡೆಯಾ, ಇವನಿಗೆ ಮರಣದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ನುಡಿಯುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ ಎಂದು ಹೇಳಿದರು.


ತರುವಾಯ ಆತನು ದೇವಾಲಯಕ್ಕೆ ಬಂದು ಬೋಧಿಸುತ್ತಿರಲಾಗಿ ಮಹಾಯಾಜಕರೂ ಪ್ರಜೆಯ ಹಿರಿಯರೂ ಆತನ ಬಳಿಗೆ ಬಂದು - ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು ಎಂದು ಕೇಳಲು


ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ ತಿರಿಗಿ ತಿರಿಗಿ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ನೇವಿುಸಿದನು; ಮನಸ್ಸಿಗೆ ಬಂದವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.


ಈ ಮನುಷ್ಯನು ಪೀಡೆಯಂತಿದ್ದು ಲೋಕದಲ್ಲಿ ಎಲ್ಲೆಲ್ಲಿಯೂ ಇರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ ನಜರೇತಿನವರ ಪಾಷಂಡಮತದಲ್ಲಿ ಪ್ರಮುಖನೆಂತಲೂ ಕಂಡೆವು.


ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.


ನೀವು ಈ ಹೆಸರನ್ನು ಎತ್ತಿ ಉಪದೇಶ ಮಾಡಲೇಬಾರದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆಕೊಟ್ಟೆವಲ್ಲಾ; ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ಮನುಷ್ಯನನ್ನು ಕೊಲ್ಲಿಸಿದ್ದಕ್ಕೆ ನಮ್ಮನ್ನು ಹೊಣೆಮಾಡಬೇಕೆಂದಿದ್ದೀರಿ ಎಂದು ಹೇಳಿದ್ದಕ್ಕೆ


ಇವನು ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದು ಹೇಳುತ್ತಾ ಕೈಸರನಿಗೆ ತೆರಿಗೆಕೊಡಬಾರದೆಂದು ಬೋಧಿಸುತ್ತಾ ನಮ್ಮ ದೇಶದವರ ಮನಸ್ಸು ಕೆಡಿಸುವದನ್ನು ನಾವು ಕಂಡೆವು ಎಂಬದಾಗಿ ಆತನ ಮೇಲೆ ದೂರು ಹೇಳುವದಕ್ಕೆ ತೊಡಗಿದರು.


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ಅವನನ್ನು ಕಂಡ ಕೂಡಲೆ - ಇಸ್ರಾಯೇಲ್ಯರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ ಅಂದನು.


ಅದಕ್ಕೆ ಅವನ ಅಣ್ಣಂದಿರು - ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನಮಾಡುವಿಯಾ ಎಂದು ಅವನಿಗೆ ಹೇಳಿ ಅವನ ಕನಸುಗಳಿಗಾಗಿಯೂ ಮಾತುಗಳಿಗಾಗಿಯೂ ಮತ್ತಷ್ಟು ಹಗೆಮಾಡಿದರು.


ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಬ್ಬರಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇ ಬೇಕು ಎಂದು ಬಾರೂಕನಿಗೆ ಹೇಳಿದರು.


ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕಂಡುಬಂದ ದೈವೋಕ್ತಿಗಳು.


ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅದಕ್ಕೆ ಮುಯ್ಯಿತೀರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು; ಯಜ್ಞವೇದಿಯ ಕೊಂಬುಗಳು ಕತ್ತರಿಸಲ್ಪಟ್ಟು ನೆಲದ ಪಾಲಾಗುವವು.


ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲನ್ನು ಸೇರಬಾರದು, ಬೇರ್ಷೆಬಕ್ಕೆ ಯಾತ್ರೆಹೋಗದಿರಿ; ಗಿಲ್ಗಾಲು ಗಡೀಪಾರಾಗುವದು, ಬೇತೇಲು ಬೈಲಾಗುವದು.


ಅವನು - ಯಾರೊಬ್ಬಾಮನು ಖಡ್ಗದಿಂದ ಹತನಾಗುವನು, ಇಸ್ರಾಯೇಲು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು ಖಂಡಿತ ಎಂದು ನುಡಿದಿದ್ದಾನೆ ಎಂಬದಾಗಿ ಹೇಳಿಕಳುಹಿಸಿದನು.


ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥವಾದಿಯನ್ನು ದ್ವೇಷಿಸುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು