Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:13 - ಕನ್ನಡ ಸತ್ಯವೇದವು J.V. (BSI)

13 ಆದರೆ ಬೇತೇಲಿನಲ್ಲಿ ಇನ್ನು ಪ್ರವಾದನೆಮಾಡಬೇಡ; ಇದು ರಾಜಕೀಯ ಪವಿತ್ರಾಲಯ, ಇದು ಅರಮನೆ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜಕೀಯ ಪವಿತ್ರಾಲಯ, ಇದು ಅರಮನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬೇತೇಲಿನಲ್ಲಿ ಇನ್ನು ನೀನು ಪ್ರವಾದಿಸುವದು ಬೇಡ. ಇದು ಯಾರೊಬ್ಬಾಮನ ಪವಿತ್ರಸ್ಥಳ. ಇದು ಇಸ್ರೇಲಿನ ದೇವಾಲಯ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ. ಏಕೆಂದರೆ ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ, ರಾಜ್ಯದ ಆಲಯವಾಗಿಯೂ ಇದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:13
14 ತಿಳಿವುಗಳ ಹೋಲಿಕೆ  

ನೀವೋ ಆ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಸಿದಿರಿ; ಪ್ರವಾದಿಗಳಿಗೆ ಪ್ರವಾದನೆ ಮಾಡಬೇಡಿರೆಂದು ಕಟ್ಟುಮಾಡಿದಿರಿ.


ಅವನು ಎಂಟನೆಯ ತಿಂಗಳ ಹದಿನೈದನೆಯ ದಿವಸ ಬೇತೇಲಿನಲ್ಲಿ ಯೆಹೂದದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕೆಂದು ಅಪ್ಪಣೆಮಾಡಿ ತಾನೂ ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ವೇದಿಯ ಮೇಲೆ ಯಜ್ಞಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇವಿುಸಿದನು.


ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ ಇನ್ನೊಂದನ್ನು ದಾನಿಗೆ ಕಳುಹಿಸಿದನು.


ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪ ಸುಡುವದಕ್ಕಾಗಿ ವೇದಿಯ ಹತ್ತಿರ ನಿಂತುಕೊಳ್ಳಲು


ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಸಿ ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತಾಡಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟು ಬಿಟ್ಟರು.


ನೀವು ಈ ಹೆಸರನ್ನು ಎತ್ತಿ ಉಪದೇಶ ಮಾಡಲೇಬಾರದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆಕೊಟ್ಟೆವಲ್ಲಾ; ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ಮನುಷ್ಯನನ್ನು ಕೊಲ್ಲಿಸಿದ್ದಕ್ಕೆ ನಮ್ಮನ್ನು ಹೊಣೆಮಾಡಬೇಕೆಂದಿದ್ದೀರಿ ಎಂದು ಹೇಳಿದ್ದಕ್ಕೆ


ಇವರು ದಿವ್ಯದರ್ಶಿಗಳನ್ನು ಕುರಿತು - ನಿಮಗೆ ದರ್ಶನವಾಗದಿರಲಿ ಅನ್ನುತ್ತಾರೆ; ಮತ್ತು ಸಾಕ್ಷಾತ್ಕಾರಿಗಳಿಗೆ - ನಮಗಾಗಿ ನ್ಯಾಯವಾದವುಗಳನ್ನು ಸಾಕ್ಷಾತ್ಕರಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮಾಯವಾದವುಗಳನ್ನೇ ಸಾಕ್ಷಾತ್ಕರಿಸಿರಿ;


ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅದಕ್ಕೆ ಮುಯ್ಯಿತೀರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು; ಯಜ್ಞವೇದಿಯ ಕೊಂಬುಗಳು ಕತ್ತರಿಸಲ್ಪಟ್ಟು ನೆಲದ ಪಾಲಾಗುವವು.


ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲನ್ನು ಸೇರಬಾರದು, ಬೇರ್ಷೆಬಕ್ಕೆ ಯಾತ್ರೆಹೋಗದಿರಿ; ಗಿಲ್ಗಾಲು ಗಡೀಪಾರಾಗುವದು, ಬೇತೇಲು ಬೈಲಾಗುವದು.


ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಬೀಡುಬೀಳುವವು; ನಾನು ಕತ್ತಿಹಿರಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.


ಈಗ ಯೆಹೋವನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ವಿರುದ್ಧವಾಗಿ ಪ್ರವಾದನೆ ಮಾಡಬೇಡ, ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯೆತ್ತಬೇಡ ಎಂದು ನೀನು ಹೇಳಿದ ಕಾರಣ


ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ - ಈ ಆಲಯವು ಶಿಲೋವಿನ ಗತಿಗೆ ಬರುವದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವದು ಎಂದು ಏಕೆ ನುಡಿದೆ ಅಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು