Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:14 - ಕನ್ನಡ ಸತ್ಯವೇದವು J.V. (BSI)

14 ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ - ನಾನು ಪ್ರವಾದಿಯಲ್ಲ, ಪ್ರವಾದಿ ಮಂಡಲಿಗೆ ಸೇರಿದವನೂ ಅಲ್ಲ, ನಾನು ಗೊಲ್ಲನು, ಅತ್ತಿಹಣ್ಣು ಕೀಳುವವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನು, ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದಕ್ಕೆ ಅಮೋಸನು ಅಮಚ್ಯನಿಗೆ, “ಪ್ರವಾದಿಸುವದು ನನ್ನ ಕೆಲಸವಲ್ಲ. ಅಲ್ಲದೆ ನಾನು ಪ್ರವಾದಿಗಳ ಕುಟುಂಬಕ್ಕೂ ಸೇರಿದವನಲ್ಲ. ನಾನು ದನ ಮೇಯಿಸುವವನೂ, ಅತ್ತಿ ಮರಗಳನ್ನು ಹತ್ತಿ ಹಣ್ಣು ಕೀಳುವವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಆಮೋಸನು ಅಮಚ್ಯನಿಗೆ ಉತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನೂ ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:14
17 ತಿಳಿವುಗಳ ಹೋಲಿಕೆ  

ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕಂಡುಬಂದ ದೈವೋಕ್ತಿಗಳು.


ಒಬ್ಬನು - ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕತನದಿಂದಲೂ ಗುಲಾಮನಾಗಿದ್ದೇನೆ ಎಂದು ಹೇಳಲು


ಎಲೀಷನು ತಿರಿಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿ ಮಂಡಲಿಯವರು ತನ್ನ ಮುಂದೆ ಕೂಡಿ ಬರಲು ಅವನು ತನ್ನ ಸೇವಕನಿಗೆ - ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆಮಾಡು ಎಂದು ಆಜ್ಞಾಪಿಸಿದನು.


ಅಲ್ಲಿನ ಪ್ರವಾದಿಮಂಡಲಿಯವರು ಅವನನ್ನು ಎದುರುಗೊಂಡು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ಕರೆದುಕೊಳ್ಳುವನೆಂದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು - ಗೊತ್ತುಂಟು, ಸುಮ್ಮನಿರ್ರಿ ಎಂದು ಉತ್ತರಕೊಟ್ಟನು.


ಅವನು ಯೆರೂಸಲೇವಿುಗೆ ಬರಲು ಹನಾನೀಯನ ಮಗನಾದ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು ಅವನಿಗೆ - ನೀನು ಕೆಟ್ಟವನಿಗೆ ಸಹಾಯಮಾಡತಕ್ಕದ್ದೋ? ಯೆಹೋವನ ಹಗೆಗಾರರನ್ನು ಪ್ರೀತಿಸುವದೋ! ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು. ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಎದುರುಗೊಂಡು ಅವನನ್ನು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು -


ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಠರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;


ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆದಿರುತ್ತದೆ.


ಆ ಕಾಲದಲ್ಲಿ ದರ್ಶಿಯಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ - ನೀನು ನಿನ್ನ ದೇವರಾದ ಯೆಹೋವನ ಮೇಲೆ ಆತುಕೊಳ್ಳದೆ ಅರಾಮ್ಯರ ಅರಸನ ಮೇಲೆ ಆತುಕೊಂಡದರಿಂದ ಅರಾಮ್‍ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.


ಒಂದು ಸಾರಿ ಪ್ರವಾದಿಮಂಡಲಿಯವರು ಎಲೀಷನಿಗೆ - ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರವ ಈ ಸ್ಥಳವು ಬಲು ಇಕ್ಕಟ್ಟಾಗಿದೆ.


ಪ್ರವಾದಿ ಮಂಡಲಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.


ಪ್ರವಾದಿಮಂಡಲಿಯವರಲ್ಲಿ ಒಬ್ಬನು ಯೆಹೋವ ಪ್ರೇರಿತನಾಗಿ ತನ್ನ ಜೊತೆಗಾರನಿಗೆ - ನನ್ನನ್ನು ಹೊಡಿ ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಅವನು ಪರವಶನಾಗಿ ಮಾತಾಡುವದನ್ನು ಗುರುತಿನವರು ಕಂಡು ತಮ್ಮ ತಮ್ಮೊಳಗೆ - ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿದ್ದಾನೋ ಎಂದು ಮಾತಾಡಿಕೊಳ್ಳುತ್ತಿರುವಾಗ


ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.


ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಲಿಯವರು ಇದನ್ನು ಕಂಡು ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿತೆಂದು ತಿಳಿದುಕೊಂಡು ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿದರು.


ಪೊದೆಗಳಲ್ಲಿ ಚಕ್ಕೋತ ಸೊಪ್ಪನ್ನು ಕಿತ್ತು [ತಿಂದು] ಜಾಲಿಯ ಬೇರುಗಳನ್ನೂ ಆಹಾರಮಾಡಿಕೊಳ್ಳುವರು,


ಸಿಂಹವು ಗರ್ಜಿಸಿದೆ, ಭಯಪಡದವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಸಾರದಿರುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು