ಆಮೋಸ 7:15 - ಕನ್ನಡ ಸತ್ಯವೇದವು J.V. (BSI)15 ಯೆಹೋವನು ನನ್ನನ್ನು ಮಂದೆಕಾಯುವದರಿಂದ ತಪ್ಪಿಸಿ - ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದನೆಮಾಡು ಎಂದು ನನಗೆ ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋವನು ನನ್ನನ್ನು ಮಂದೆ ಕಾಯುವವರಿಂದ ತಪ್ಪಿಸಿ, ‘ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದನೆ ಮಾಡು’ ಎಂದು ನನಗೆ ಅಪ್ಪಣೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮಂದೆ ಕಾಯುವುದರಿಂದ ಸರ್ವೇಶ್ವರ ನನ್ನನ್ನು ಬಿಡಿಸಿದರು. ನೀನು ಹೋಗಿ ನನ್ನ ಜನರಾದ ಇಸ್ರಯೇಲರಿಗೆ ಪ್ರವಾದನೆಮಾಡು’ ಎಂದು ಹೇಳಿಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾನು ಕುರಿಕಾಯುತ್ತಿರುವಾಗ ಯೆಹೋವನು ನನ್ನನ್ನು ಕುರಿಗಳ ಹಿಂದೆ ಹೋಗಬೇಡ ಎಂದು ಕರೆದನು. ಆತನು ನನಗೆ, ‘ನನ್ನ ಜನರಾದ ಇಸ್ರೇಲರ ಬಳಿಗೆ ಹೋಗಿ ಪ್ರವಾದಿಸು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆಯಲ್ಲಿ, ಯೆಹೋವ ದೇವರು ನನ್ನನ್ನು ಕರೆದು ಹೇಳಿದ್ದೇನೆಂದರೆ: “ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದಿಸು.” ಅಧ್ಯಾಯವನ್ನು ನೋಡಿ |