Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:2 - ಕನ್ನಡ ಸತ್ಯವೇದವು J.V. (BSI)

2 ಆತನು ನನ್ನನ್ನು - ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವದೇನು ಎಂದು ಕೇಳಲು ಮಾಗಿದ ಹಣ್ಣಿನ ಪುಟ್ಟಿ ಅಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು - ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ; ಇನ್ನು ಅವರನ್ನು ಕಂಡುಕಾಣದ ಹಾಗಿರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, “ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. “ಮಾಗಿದ ಹಣ್ಣಿನ ಒಂದು ಬುಟ್ಟಿ” ಎಂದು ಉತ್ತರಿಸಿದೆ. ಆಗ ಸರ್ವೇಶ್ವರ ನನಗೆ ಹೀಗೆಂದರು: “ಇಸ್ರಯೇಲರಾದ ನನ್ನ ಜನರಿಗೆ ಕಡೆಗಾಲ ಮಾಗುತ್ತಾ ಬಂದಿದೆ. ಇನ್ನು ಅವರನ್ನು ಕಂಡೂ ಕಾಣದಂತೆ ಇರಲಾರೆ. ಅವರನ್ನು ದಂಡಿಸಿಯೇ ತೀರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ನನಗೆ, “ಆಮೋಸನೇ, ನೀನು ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳು” ಎಂದು ಹೇಳಿದೆನು. ಆಗ ಯೆಹೋವನು ನನಗೆ, “ನನ್ನ ಜನರಾದ ಇಸ್ರೇಲರಿಗೆ ಅಂತ್ಯಕಾಲವು ಬಂದಿದೆ. ಇನ್ನು ಮೇಲೆ ನಾನು ಅವರನ್ನು ಸುಮ್ಮನೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ನಾನು, “ಮಾಗಿದ ಹಣ್ಣುಗಳ ಬುಟ್ಟಿ,” ಎಂದೆನು. ಆಗ ಯೆಹೋವ ದೇವರು ನನಗೆ, “ನನ್ನ ಜನರಾದ ಇಸ್ರಾಯೇಲರ ಸಮಯವು ಮಾಗುತ್ತಾ ಬಂತು. ನಾನು ಇನ್ನು ಮೇಲೆ ಅವರನ್ನು ಉಳಿಸುವುದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:2
25 ತಿಳಿವುಗಳ ಹೋಲಿಕೆ  

ಯೆಹೋವನು ನನ್ನನ್ನು - ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವದೇನು ಎಂದು ಕೇಳಲು ನಾನು - ಒಂದು ನೂಲುಗುಂಡು ಎಂದು ಉತ್ತರಕೊಟ್ಟೆನು. ಆಗ ಕರ್ತನು - ಇಗೋ, ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನೂಲುಗುಂಡನ್ನು ಹಿಡಿಯುವೆನು; ಇನ್ನು ಅವರನ್ನು ಕಂಡುಕಾಣದ ಹಾಗಿರೆನು.


ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿ ಮಾಡಿಕೊಂಡಿರುವದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು, ಹೌದು, ನಮಗೆ ಅಂತ್ಯವು ಬಂದೇ ಬಂತು.


ಅಯ್ಯೋ, ನನ್ನ ಗತಿಯನ್ನು ಏನೆಂದು ಹೇಳಲಿ! ಮಾಗಿದ ಹಣ್ಣನ್ನು ಕೊಯ್ದು ದ್ರಾಕ್ಷೆಯ ಹಕ್ಕಲನ್ನು ಆಯ್ದ [ತೋಟದ] ಸ್ಥಿತಿಗೆ ಬಂದಿದ್ದೇನೆ; ತಿನ್ನುವದಕ್ಕೆ ಗೊಂಚಲೇ ಇಲ್ಲ, ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.


ಅವನು ನನ್ನನ್ನು - ನಿನಗೆ ಏನು ಕಾಣಿಸುತ್ತಿದೆ ಎಂದು ಕೇಳಿದ್ದಕ್ಕೆ - ಹಾರುತ್ತಿರುವ ಒಂದು ಸುರಳಿಯು ಕಾಣಿಸುತ್ತದೆ; ಅದರ ಉದ್ದ ಇಪ್ಪತ್ತು ಮೊಳ, ಅಗಲ ಹತ್ತು ಮೊಳ ಎಂದುತ್ತರ ಕೊಟ್ಟೆನು.


ಅವರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಗಾದೆಯನ್ನು ನಿಲ್ಲಿಸಿ ಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ - ಕ್ಲುಪ್ತಕಾಲವು ಹತ್ತಿರಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವದು ಸಮೀಪ.


ಆಗ ಆತನು ನನಗೆ - ನರಪುತ್ರನೇ, ನೋಡಿದಿಯಾ? ಯೆಹೂದವಂಶದವರು ತಾವು ಇಲ್ಲಿ ನಡಿಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿಕಂಡರೇನೋ? ದೇಶವನ್ನು ಹಿಂಸೆಯಿಂದ ತುಂಬಿಸಿಬಿಟ್ಟದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.


ಆಗ ಆತನು ನನಗೆ - ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟು ತಮ್ಮತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡಿಸುವ ಕೆಲಸವನ್ನು ನೋಡಿದೆಯಾ? ಯೆಹೋವನು ನಮ್ಮನ್ನು ನೋಡನು, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ ಎಂದು ಮಾತಾಡಿಕೊಳ್ಳುತ್ತಾರಷ್ಟೆ ಎಂಬದಾಗಿ ಹೇಳಿದನು.


ಆಗ ಆತನು ನನಗೆ - ನರಪುತ್ರನೇ, ಇವರು ಮಾಡುವದನ್ನು ನೋಡಿದಿಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡಿಸುವ ಅಧಿಕದುರಾಚಾರಗಳನ್ನು ಕಂಡಿಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವಿ ಎಂದು ಹೇಳಿದನು.


ಪ್ರಳಯವು ಬಂತು, ಪೂರ್ಣಪ್ರಳಯವು ಬಂತು, ನಿನ್ನನ್ನು ಚಚ್ಚುವದಕ್ಕೆ ಚಚ್ಚರಗೊಂಡಿದೆ, ಇಗೋ ಬಂದೇ ಬಂತು!


ಇದಲ್ಲದೆ ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನಾನು ನಿನಗೆ ನುಡಿಯುವ ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಹೃದಯದಲ್ಲಿಟ್ಟುಕೋ.


ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲೊಲ್ಲರು; ನನಗೂ ಕಿವಿಗೊಡಲೊಲ್ಲರು; ಅವರೆಲ್ಲರೂ ನಾಚಿಕೆಗೆಟ್ಟವರೂ ಹಟಗಾರರೂ ಆಗಿದ್ದಾರಲ್ಲಾ.


ನಾನಂತು ವಿುಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ ಎಂದು ಖಂಡಿತವಾಗಿ ಹೇಳಿದನು.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಫಲವತ್ತಾದ ತಗ್ಗಿಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕಾಲಕ್ಕೆ ಮುಂಚೆ ಮಾಗಿದ ಅಂಜೂರಕ್ಕೆ ಸಮಾನವಾಗುವದು; ಆ ಹಣ್ಣನ್ನು ಕಂಡವನು ಕಿತ್ತ ಕೂಡಲೆ ನುಂಗಿಬಿಡುವನಲ್ಲವೆ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ ಜನರನ್ನೂ ಪಶುಗಳನ್ನೂ ನಿನ್ನೊಳಗಿಂದ ನಿರ್ಮೂಲಮಾಡುವೆನು.


ಆಗ ದೇವರು ನೋಹನಿಗೆ - ಎಲ್ಲಾ ದೇಹಿಗಳಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅವರ ಅನ್ಯಾಯದಿಂದ ತುಂಬಿ ಅದೆ; ನಾನು ಅವರನ್ನೂ ಭೂವಿುಯ ಮೇಲಿರುವದೆಲ್ಲವನ್ನೂ ಅಳಿಸಿಬಿಡುತ್ತೇನೆ.


ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು - ಇಗೋ, ಮಾಗಿದ ಹಣ್ಣಿನ ಪುಟ್ಟಿ.


ದಂಡನೆಯ ದಿನಗಳು ಹತ್ತರಿಸಿವೆ, ಮುಯ್ಯಿತೀರಿಸುವ ದಿವಸಗಳು ಸಮೀಪಿಸಿವೆ; ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; [ಇಸ್ರಾಯೇಲೇ,] ನಿನ್ನ ಅಧರ್ಮವು ಬಹಳವಾಗಿರುವದರಿಂದಲೂ ವಿರೋಧವು ಹೆಚ್ಚಾಗಿರುವದರಿಂದಲೂ ಪ್ರವಾದಿಯು ಮೂರ್ಖನು, ದೇವರಾತ್ಮಾವಿಷ್ಟನು ಹುಚ್ಚನು [ಅಂದುಕೊಳ್ಳುತ್ತಿ].


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು