Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:10 - ಕನ್ನಡ ಸತ್ಯವೇದವು J.V. (BSI)

10 ನಮ್ಮನ್ನು ಆಪತ್ತು ಹಿಂದಟ್ಟಿ ಹಿಡಿಯದು, ಎದುರುಬಿದ್ದು ಮುತ್ತದು ಅಂದುಕೊಂಡ ನನ್ನ ಜನರಲ್ಲಿನ ಸಮಸ್ತ ಪಾಪಿಗಳು ಖಡ್ಗ ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮ್ಮನ್ನು ಆಪತ್ತು ಹಿಂದಟದು; ನಮ್ಮನ್ನು ತಡೆಯುವುದಿಲ್ಲ, ಎನ್ನುವ ನನ್ನ ಜನರಲ್ಲಿರುವ ಸಮಸ್ತ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ‘ನಮಗೆ ಯಾವುದೇ ಆಪತ್ತು ತಟ್ಟದು. ಯಾವುದೇ ವಿಪತ್ತು ಅಡ್ಡಬರದು’ ಎಂದುಕೊಳ್ಳುವ ನನ್ನ ಜನರಲ್ಲಿನ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ನನ್ನ ಜನರಲ್ಲಿ ಪಾಪಿಗಳು ಹೇಳುತ್ತಾರೆ: ‘ನಮಗೆ ಯಾವ ಕೇಡೂ ಸಂಭವಿಸುವುದಿಲ್ಲ.’ ಆದರೆ ಅವರೆಲ್ಲಾ ಕತ್ತಿಯಿಂದ ಸಾಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕೇಡು ನಮ್ಮನ್ನು ಹಿಂದಟ್ಟದು ಮತ್ತು ನಮ್ಮನ್ನು ತಡೆಯುವದೂ ಇಲ್ಲ, ಎನ್ನುವ ನನ್ನ ಜನರಲ್ಲಿರುವ ಪಾಪಿಗಳೆಲ್ಲರೂ ಖಡ್ಗದಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:10
24 ತಿಳಿವುಗಳ ಹೋಲಿಕೆ  

ಆಹಾ, ಆ ಮುಖಂಡರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ, ಅನ್ಯಾಯದ ಪೀಠವನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ;


ಚೀಯೋನಿನ ಪಾಪಿಗಳು ಹೆದರುತ್ತಾರೆ, ಆ ಭ್ರಷ್ಟರು ನಡುಕಕ್ಕೆ ಒಳಗಾಗಿ - ನಮ್ಮಲ್ಲಿ ಯಾರು ನುಂಗುವ ಕಿಚ್ಚಿನ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುತ್ತಾರೆ.


ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ಈಗ ಅಹಂಕಾರಿಗಳನ್ನು ಧನ್ಯರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ ಅಂದುಕೊಂಡಿದ್ದೀರಲ್ಲಾ.


ಅಯ್ಯೋ, ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ! ಪ್ರಮುಖಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲ್ಯರ ನ್ಯಾಯ ವಿಚಾರಕರಾಗಿ ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ ಪಾಡನ್ನು ಎಂಥದೆನ್ನಲಿ!


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷದಿನವಾಗಿರುವದು [ಎಂದು ಹರಟಿಕೊಳ್ಳುವರು].


ನಾವು ಆತನ ಕೆಲಸವನ್ನು ನೋಡಬೇಕು, ಅದನ್ನು ಬೇಗನೆ ನಡಿಸಲಿ, ಇಸ್ರಾಯೇಲ್ಯರ ಸದಮಲಸ್ವಾವಿುಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಸಮೀಪಿಸಿ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!


ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೆ ನಡೆಯದಿರುವ ಕಾರಣ ಅಪರಾಧಮಾಡಬೇಕೆಂಬ ಯೋಚನೆಯು ನರಜನ್ಮದವರ ಹೃದಯದಲ್ಲಿ ತುಂಬಿ ತುಳುಕುವದು.


[ಆ ದುಷ್ಟನು] ತನ್ನೊಳಗೆ ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವದೇ ಇಲ್ಲ ಅಂದುಕೊಳ್ಳುತ್ತಾನೆ.


ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರುಮಾಡಿದರೂ ಅವರು ಇಸ್ರಾಯೇಲ್ ದೇಶಕ್ಕೆ ಸೇರುವದೇ ಇಲ್ಲ ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನನ್ನನ್ನು ಅಸಡ್ಡೆಮಾಡುವವರಿಗೆ - ನಿಮಗೆ ಶುಭವಾಗುವದು ಎಂಬದಾಗಿ ಯೆಹೋವನು ಅಂದಿದ್ದಾನೆ ಎಂದು ಹೇಳುತ್ತಲೇ ಇದ್ದಾರೆ; ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ - ನಿಮಗೆ ಯಾವ ಕೇಡೂ ಸಂಭವಿಸದು ಎಂದು ನುಡಿಯುತ್ತಾರೆ.


ಆಹಾ, ಕರ್ತನಾದ ಯೆಹೋವನೆಂಬ ನಾನು ಪಾಪಮಯರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಅದನ್ನು ಭೂಮಂಡಲದೊಳಗಿಂದ ನಾಶಮಾಡುವೆನು; ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು. ಇದು ಯೆಹೋವನ ನುಡಿ.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ವಿಧಿಗಳೂ ನಿಮ್ಮ ಪಿತೃಗಳನ್ನು ಹಿಂದಟ್ಟಿ ಹಿಡಿದು ನಿತ್ಯವಾಗಿವೆಯಷ್ಟೆ; ಅವರು ತಿರುಗಿಕೊಂಡು - ಸೇನಾಧೀಶ್ವರ ಯೆಹೋವನು ನಮ್ಮ ದುರ್ಮಾರ್ಗ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ ಅಂದುಕೊಂಡರು.


ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನಗೆ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು