Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:11 - ಕನ್ನಡ ಸತ್ಯವೇದವು J.V. (BSI)

11 ಆ ದಿನದಲ್ಲಿ ನಾನು ದಾವೀದನ ಬಿದ್ದು ಹೋಗಿರುವ ಗುಡಿಸಲನ್ನು ಎತ್ತಿ ಅದರ ಕಂಡಿಗಳನ್ನು ಮುಚ್ಚುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ದಾವೀದನ ಗುಡಾರವು ಕುಸಿದುಬಿದ್ದಿದೆ. ಆದರೆ ಆ ದಿವಸಗಳಲ್ಲಿ ತಿರುಗಿ ಅದನ್ನು ಮೇಲಕ್ಕೆತ್ತುವೆನು. ಗೋಡೆಯಲ್ಲಿರುವ ರಂಧ್ರಗಳನ್ನು ನಾನು ಸರಿಪಡಿಸುವೆನು. ಬಿದ್ದುಹೋದ ಕಟ್ಟಡಗಳನ್ನು ತಿರುಗಿ ಕಟ್ಟುವೆನು. ಮುಂಚೆ ಹೇಗಿತ್ತೋ ಹಾಗೆಯೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:11
37 ತಿಳಿವುಗಳ ಹೋಲಿಕೆ  

ಇದಲ್ಲದೆ ಸಿಂಹಾಸನವು ಕೃಪಾಧಾರದ ಮೇಲೆ ಸ್ಥಾಪಿತವಾಗಿದೆ; ರಾಜ್ಯಭಾರಪ್ರವೀಣನೂ ಧರ್ಮಾಸಕ್ತನೂ ನ್ಯಾಯನಿಪುಣನೂ ಆದವನು ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ಕುಳಿತಿದ್ದಾನೆ.


ನೀನು ಅದರ ಬೇಲಿಯನ್ನೇಕೆ ಕಿತ್ತು ಹಾಕಿದಿ? ದಾರಿಗರೆಲ್ಲರು ಅದನ್ನು ತರೆದುಬಿಡುತ್ತಾರೆ.


ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗಂದರು - ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ನಿಮ್ಮಲ್ಲಿ ಬಹುಜನರನ್ನೂ ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವದು.


ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ ತಗ್ಗಾದದ್ದನ್ನು ಎತ್ತರಪಡಿಸಿ ಹಸುರಾದದ್ದನ್ನು ಒಣಗಿಸಿ ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲವೃಕ್ಷಗಳು ತಿಳಿಯುವವು; ಇದನ್ನು ಯೆಹೋವನಾದ ನಾನೇ ನುಡಿದು ನಡಿಸಿದ್ದೇನೆ.


ಯೆಹೋವನೇ, ನೀನು ನಮ್ಮ ಮೇಲೆ ಬಲು ಸಿಟ್ಟುಗೊಂಡು ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿಯೋ, ಏನೋ?


ಅವರ ಪ್ರಾಣವನ್ನು ಹುಡುಕುವ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಕೊಟ್ಟುಬಿಡುವೆನು; ಅನಂತರ ಅಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಯೆಹೋವನ ನುಡಿ.


ನನ್ನ ತೋಟವನ್ನು ಏನು ಮಾಡುವೆನೋ ಈಗ ನಿಮಗೆ ತಿಳಿಸುವೆನು, ಕೇಳಿರಿ; ಅದರ ಬೇಲಿಯನ್ನು ಕೀಳುವೆನು, ದನವು ಅದನ್ನು ಮೇಯ್ದುಬಿಡುವದು; ಅದರ ಗೋಡೆಯನ್ನು ಕೆಡವಿಹಾಕುವೆನು, ಅದು ತುಳಿದಾಟಕ್ಕೆ ಈಡಾಗುವದು.


ನೀನು ಅವನಿಗೂ ಅವನ ಮನೆಗೂ ಅವನ ಎಲ್ಲಾ ಸ್ವಾಸ್ತ್ಯಕ್ಕೂ ಸುತ್ತುಮುತ್ತಲು ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.


ಫಲವತ್ತಾದ ಭೂವಿುಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವಾಸ್ತ್ಯವಾದ ಹಿಂಡನ್ನು ನಿನ್ನ ಕೋಲಿನಿಂದ ಮೇಯಿಸು; ಪೂರ್ವಕಾಲದಂತೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.


ಹಳೇ ದಿನಗಳನ್ನು ನೆನಸಿಕೊಳ್ಳುತ್ತೇನೆ; ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ.


ಅವನ ದೇಶದ ಮೇರೆಗಳನ್ನು ಕೆಡವಿ ದುರ್ಗಗಳನ್ನು ಹಾಳುಮಾಡಿದ್ದೀ.


ಅದಲ್ಲದೆ ಎದೋಮ್ಯರ ದೇಶವನ್ನೂ ಸ್ವಾಧೀನ ಪಡಿಸಿಕೊಂಡಿದ್ದಾನೆ; ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.


ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರಿಗಿ ಕಟ್ಟುವರು. ನೀವು ತಲತಲಾಂತರಗಳಿಂದ ಪಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; ಬಿದ್ದ ಗೋಡೆಯನ್ನು ಹಾಕುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ, ಎಂಬೀ ಬಿರುದುಗಳು ನಿಮಗುಂಟಾಗುವವು.


ಯಾಕೋಬಿನಿಂದ ಸಂತಾನವನ್ನು ಹೊರಪಡಿಸುವೆನು, ಯೆಹೂದವಂಶದಿಂದ ನನ್ನ ಪರ್ವತಗಳ ಸ್ವಾಸ್ತ್ಯದ ಬಾಧ್ಯಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವಾಸ್ತ್ಯವನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.


ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ರಾಜ್ಯವನ್ನಾಗಲಿ ನೆಟ್ಟು ಕಟ್ಟಬೇಕೆಂದು ಅಪ್ಪಣೆಕೊಟ್ಟಾಗ


ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು; ಆ ಪರ್ವತವು ಮೀಸಲಾಗಿರುವದು; ಯಾಕೋಬನ ವಂಶದವರು ತಮ್ಮ ಸ್ವಾಸ್ತ್ಯಗಳನ್ನು ಅನುಭವಿಸುವರು.


ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ; ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕೂತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.


ಆಹಾ, ನಿನ್ನ ಪೌಳಿಗೋಡೆಗಳನ್ನು ಕಟ್ಟುವ ದಿನವು ಬರುವದು; ಆ ದಿನದಲ್ಲಿ ನಿನ್ನ ಎಲ್ಲೆಯು ದೂರದ ತನಕ ವಿಸ್ತರಿಸಿಕೊಂಡಿರುವದು.


ಅವನಿಗೆ ಹೀಗೆ ಹೇಳು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ ಯೆಹೋವನ ಆಲಯವನ್ನು ಕಟ್ಟಿಸುವನು;


ದಾವೀದ ವಂಶದವರ ಮಹಿಮೆಯೂ ಯೆರೂಸಲೇವಿುನವರ ಮಹಿಮೆಯೂ ಯೆಹೂದದ ಮಹಿಮೆಯನ್ನು ಮೀರದಂತೆ ಯೆಹೋವನು ಯೆಹೂದದ ಪಾಳೆಯಗಳಿಗೆ ಮೊದಲು ಜಯವನ್ನುಂಟುಮಾಡುವನು;


ಆಗ ದೇಶವು ಗೆಬದಿಂದ ಯೆರೂಸಲೇವಿುಗೆ ತೆಂಕಲಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತ ಇದ್ದ ಕಡೆಯೇ ಎತ್ತರದಲ್ಲಿ ನಿಂತಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು