Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:14 - ಕನ್ನಡ ಸತ್ಯವೇದವು J.V. (BSI)

14 ನಾನು ನನ್ನ ಜನರಾದ ಇಸ್ರಾಯೇಲ್ಯರ ದುರವಸ್ಥೆಯನ್ನು ತಪ್ಪಿಸುವೆನು; ಅವರು ಹಾಳುಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು; ದ್ರಾಕ್ಷೆಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು; ಫಲವೃಕ್ಷಗಳನ್ನು ಬೆಳೆಯಿಸಿ ಅವುಗಳ ಹಣ್ಣುಗಳನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು. ಅವರು ಹಾಳು ಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು ಮತ್ತು ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು, ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸನಾತನ ಸೌಭಾಗ್ಯಕ್ಕೆ ಮರಳಿಸುವೆನು ನನ್ನ ಜನರಾದ ಇಸ್ರಯೇಲರನು. ವಾಸಮಾಡುವರವರು ಪಾಳುಬಿದ್ದ ಪಟ್ಟಣಗಳನು ಮತ್ತೆ ಕಟ್ಟಿಕೊಂಡು. ಕುಡಿಯುವರು ಸಮೃದ್ಧಿಯಾಗಿ ದ್ರಾಕ್ಷಾತೋಟಗಳನ್ನು ಮಾಡಿಕೊಂಡು. ತಿನ್ನುವರು ಯಥೇಚ್ಛವಾಗಿ ಫಲವೃಕ್ಷಗಳನು ಬೆಳೆಸಿಕೊಂಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸೆರೆಯಿಂದ ಬಿಡಿಸಿ ನನ್ನ ಜನರಾದ ಇಸ್ರೇಲನ್ನು ಹಿಂದಕ್ಕೆ ಕರೆತರುವೆನು. ಪಾಳುಬಿದ್ದ ಪಟ್ಟಣಗಳನ್ನು ತಿರುಗಿ ಕಟ್ಟಿ ಅದರಲ್ಲಿ ವಾಸಿಸುವರು. ದ್ರಾಕ್ಷಿತೋಟವನ್ನು ಮಾಡಿ ಅದರಿಂದ ಸಿಗುವ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅದರ ಫಲಗಳನ್ನು ಭೋಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು. “ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು. ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:14
31 ತಿಳಿವುಗಳ ಹೋಲಿಕೆ  

ಪುರಾತನ ಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರಿಗಿ ಕಟ್ಟುವರು, ಪೂರ್ವದಲ್ಲಿ ಪಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳುಬೀಳಾದ ಪಟ್ಟಣಗಳನ್ನು ಜೀರ್ಣೋದ್ಧಾರಮಾಡುವರು.


ಇಗೋ ನಾನು ನನ್ನ ಜನರಾದ ಇಸ್ರಾಯೇಲ್ಯರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪಿತೃಗಳಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ.


ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ ಅದರ ನಿವಾಸಗಳನ್ನು ಕರುಣಿಸುವೆನು; ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವದು.


ಅಲ್ಲಿ ನಿರ್ಭಯವಾಗಿರುವರು, ಮನೆಗಳನ್ನು ಕಟ್ಟಿಕೊಂಡು ತೋಟಗಳನ್ನು ಮಾಡಿಕೊಂಡು ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರಿಗೆ ನಾನು ದಂಡನೆಮಾಡಿದ ಮೇಲೆ ನಾನೇ ತಮ್ಮ ದೇವರಾದ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.


ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.


ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ತೋಟಗಳ ಫಲವನ್ನು ತಾವೇ ಅನುಭವಿಸುವರು.


ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ದುರವಸ್ಥೆಯಿಂದ ತಪ್ಪಿಸಿದಾಗ ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲ್ಯರು ಹರ್ಷಿಸುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಾಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆತೋರಿಸುವೆನು;


ಸೊದೋಮ್, ಆಕೆಯ ಕುಮಾರ್ತೆಯರು, ಸಮಾರ್ಯ, ಆಕೆಯ ಕುಮಾರ್ತೆಯರು, ಇವರ ದುರವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರವಸ್ಥೆಯನ್ನೂ ತಪ್ಪಿಸುವೆನು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅವರ ಪಟ್ಟಣಗಳಲ್ಲಿಯೂ - ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಮತ್ತೆ ಮಾತಾಡುವರು.


ಅವರ ಆಸ್ತಿಯು ಸೂರೆಯಾಗುವದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.


ನೀವು ಬಡವರನ್ನು ತುಳಿದು ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ ವಾಸಿಸದೆ ಇರುವಿರಿ, ಮಾಡಿಕೊಂಡ ಒಳ್ಳೊಳ್ಳೆಯ ತೋಟಗಳ ದ್ರಾಕ್ಷಾರಸವನ್ನು ಕುಡಿಯರಿ.


ಹೊಲಗಳನ್ನು ಬಿತ್ತಿ ದ್ರಾಕ್ಷಾಲತೆಗಳನ್ನು ನೆಟ್ಟು ಆದಾಯವನ್ನು ಕೂಡಿಸಿಕೊಂಡರು.


ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರುತ್ತಿದ್ದಾರೆ; ಗಂಡು ಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.


ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರಿಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವಾಸ್ತ್ಯಕ್ಕೂ ಅವನವನ ದೇಶಕ್ಕೂ ಪುನಃ ಬರಮಾಡುವೆನು.


ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು. ಇದು ಯೆಹೋವನ ನುಡಿ.


ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರಿಗಿ ಬರಮಾಡುವೆನು; ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ.


ನೀನು ತಿರಿಗಿ ಸಮಾರ್ಯದ ಗುಡ್ಡಗಳಲ್ಲಿ ತೋಟಗಳನ್ನು ಮಾಡಿಕೊಳ್ಳುವಿ; ನೆಡುವವರು ನೆಟ್ಟು ಫಲವನ್ನನುಭವಿಸುವರು.


ಈ ದೇಶದಲ್ಲಿ ಜನರು ಮನೆಹೊಲತೋಟಗಳನ್ನು ಮತ್ತೆ ಕೊಳ್ಳುವರು, ಕೊಡುವರು. ಇದು ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ ಎಂದು ಖಂಡಿತವಾಗಿ ಹೇಳಿದೆನು.


ಇಗೋ, ನಾನು ಕೋಪರೋಷ ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಊರ್ಜಿತಪಡಿಸುವೆನು.


ಇದನ್ನೂ ಅವರಿಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ಇಸ್ರಾಯೇಲ್ಯರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ ಎಲ್ಲಾ ಕಡೆಯಿಂದಲೂ ಒಟ್ಟುಗೂಡಿಸಿ ಸ್ವದೇಶಕ್ಕೆ ಕರತಂದು


ಇಸ್ರಾಯೇಲ್ಯರನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ನಾನು ಅವರ ಪಿತೃಗಳಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ.


ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತದೇಶಗಳಿಂದಲೂ ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದನೋ ಅಲ್ಲಿಗೆ ತಿರಿಗಿ ಬರಮಾಡುವೆನು. ಇದು ಯೆಹೋವನ ನುಡಿ.


ಉಲ್ಲಾಸ ಕೋಲಾಹಲ, ವಧೂವರರ ಸ್ವರ, ಇವುಗಳು ಕೇಳ ಬರುವವು. ಸೇನಾಧೀಶ್ವರನಾದ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಯೆಹೋವನು, ಒಳ್ಳೆಯವನು, ಆತನ ಕೃಪೆಯು ಶಾಶ್ವತ ಎಂದು ಕೀರ್ತಿಸುತ್ತಾ ಕೃತಜ್ಞತಾಬಲಿಯನ್ನು ಯೆಹೋವನ ಆಲಯಕ್ಕೆ ತರುವವರ ಗಾನವೂ ಕಿವಿಗೆ ಬೀಳುವದು. ನಾನು ದೇಶವನ್ನು ದುರವಸ್ಥೆಯಿಂದ ತಪ್ಪಿಸಿ ಪೂರ್ವಸ್ಥಿತಿಗೆ ತರುವೆನು.


ಆ ಕರಾವಳಿಯು ಯೆಹೂದವಂಶಶೇಷದವರ ಪಾಲಾಗುವದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು