Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:15 - ಕನ್ನಡ ಸತ್ಯವೇದವು J.V. (BSI)

15 ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು; ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನೂ ಕಿತ್ತುಹಾಕರು; ಇದು ನಿನ್ನ ದೇವರಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು, ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕುವುದಿಲ್ಲ” ಇದು ನಿನ್ನ ದೇವರಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬೇರೂರಿಸುವೆನು ಅವರನು ಸ್ವಂತ ನಾಡಲಿ ಕೀಳರಾರೂ ಅವರನು ಅಲ್ಲಿಂದ ಮರಳಿ.” ಇದು ನಿನ್ನ ದೇವರಾದ ಸರ್ವೇಶ್ವರನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ನನ್ನ ಜನರನ್ನು ಅವರ ದೇಶದಲ್ಲಿ ಸ್ಥಾಪಿಸುವೆನು. ನಾನು ಕೊಟ್ಟಿರುವ ದೇಶದಿಂದ ಅವರು ಕೀಳಲ್ಪಡುವುದಿಲ್ಲ.” ನಿಮ್ಮ ದೇವರಾದ ಯೆಹೋವನು ಈ ಸಂಗತಿಗಳನ್ನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನು ಇಸ್ರಾಯೇಲರನ್ನು ಅವರ ದೇಶದಲ್ಲಿ ನೆಡುವೆನು. ನಾನು ಅವರಿಗೆ ಕೊಟ್ಟಿರುವ ದೇಶದಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕರು,” ಎಂದು ನಿಮ್ಮ ದೇವರಾದ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:15
16 ತಿಳಿವುಗಳ ಹೋಲಿಕೆ  

ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರಿಗಿ ಬರಮಾಡುವೆನು; ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ.


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪಿತೃಗಳು ವಾಸಿಸಿದ ದೇಶದಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡರು, ಕಾಡುಮೃಗಗಳು ನುಂಗವು; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಆದರೆ ಯೆಹೂದವು ಸದಾ ಜನಭರಿತವಾಗಿರುವದು; ಯೆರೂಸಲೇಮು ತಲತಲಾಂತರಕ್ಕೂ ನಿವಾಸಸ್ಥಾನವಾಗಿರುವದು.


ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸ್ಥಾಪಿಸುವೆನು.


ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷಾಲತೆ, ಅಂಜೂರಗಿಡ, ಇವುಗಳ ನೆರಳಿನಲ್ಲಿ ಕೂತುಕೊಳ್ಳುವನು; ಅವರನ್ನು ಯಾರೂ ಹೆದರಿಸರು; ಸೇನಾಧೀಶ್ವರನಾದ ಯೆಹೋವನ ಬಾಯೇ ಇದನ್ನು ನುಡಿದಿದೆ.


ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ ನಮ್ಮ ಪಿತೃಗಳನ್ನೇ ನೆಲೆಗೊಳ್ಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.


ನೀನು ಐಗುಪ್ತದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು ಜನಾಂಗಗಳನ್ನು ಹೊರಗೆ ಹಾಕಿ ಅದನ್ನು ನೆಟ್ಟಿ.


ಆ ಕಾಲದಲ್ಲಿ ಯೆಹೂದವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವದು, ಎರಡೂ ಕಲೆತು ನಾನು ನಿಮ್ಮ ಪಿತೃಗಳಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಬಡಗಣ ಸೀಮೆಯೊಳಗಿಂದ ಬರುವವು.


ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು. ಇದು ಯೆಹೋವನ ನುಡಿ.


ಈ ದೇಶದಲ್ಲಿ ಜನರು ಮನೆಹೊಲತೋಟಗಳನ್ನು ಮತ್ತೆ ಕೊಳ್ಳುವರು, ಕೊಡುವರು. ಇದು ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ ಎಂದು ಖಂಡಿತವಾಗಿ ಹೇಳಿದೆನು.


ಇಗೋ, ನಾನು ಕೋಪರೋಷ ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಊರ್ಜಿತಪಡಿಸುವೆನು.


ಇದನ್ನೂ ಅವರಿಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ಇಸ್ರಾಯೇಲ್ಯರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ ಎಲ್ಲಾ ಕಡೆಯಿಂದಲೂ ಒಟ್ಟುಗೂಡಿಸಿ ಸ್ವದೇಶಕ್ಕೆ ಕರತಂದು


ಇಸ್ರಾಯೇಲ್ಯರನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ನಾನು ಅವರ ಪಿತೃಗಳಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು