Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:4 - ಕನ್ನಡ ಸತ್ಯವೇದವು J.V. (BSI)

4 ಶತ್ರುವಶವಾಗಿ ಸೆರೆಗೆ ಹೋದರೂ ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವದು; ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ತಮ್ಮ ಶತ್ರುಗಳ ವಶವಾಗಿ ಸೆರೆಗೆ ಹೋದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವುದು. ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಶತ್ರುವಶವಾಗಿ ಸೆರೆಗೆ ಹೋಗಿದ್ದರೂ ಅಲ್ಲಿಯೂ ಖಡ್ಗವು ನನ್ನ ಆಜ್ಞಾನುಸಾರ ಅವರನ್ನು ಕೊಲ್ಲುವುದು; ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿಯೇ ಅವರ ಮೇಲೆ ಕಣ್ಣಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಶತ್ರುಗಳು ಅವರನ್ನು ಸೆರೆಹಿಡಿದರೆ ನಾನು ಅವರನ್ನು ಕೊಂದುಹಾಕಲು ಕತ್ತಿಗೆ ಆಜ್ಞಾಪಿಸುವೆನು. ಹೌದು ನಾನು ಅವರನ್ನು ಗಮನಿಸುತ್ತಾ ಕಾಯುವೆನು. ಅವರಿಗೆ ಒಳ್ಳೆಯದು ಮಾಡುವುದಕ್ಕಾಗಿ ಅಲ್ಲ. ಅವರಿಗೆ ಸಂಕಟ ಕೊಡುವುದಕ್ಕಾಗಿ ಅವರನ್ನು ಕಾಯುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋಗಿದ್ದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಕೊಲ್ಲುವುದು. “ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:4
20 ತಿಳಿವುಗಳ ಹೋಲಿಕೆ  

ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವದು, ನಿಮ್ಮ ಪಟ್ಟಣಗಳು ನಾಶವಾಗುವವು.


ಆದಕಾರಣ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.


ಮೇಲಿಗಲ್ಲ ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವದು, ಅವನು ಸುಟ್ಟು ಬಿಡುವನು; ಇದು ಯೆಹೋವನ ನುಡಿ.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಇದಲ್ಲದೆ ಇಸ್ರಾಯೇಲ್ಯರಲ್ಲಿಯಾಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಮುತ್ತಿಗೆಯ ದಿನಗಳು ತೀರಿದಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರು (ಹಾಗೆಯೇ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).


ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವದು.


ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರಿಗಿ ಬರಮಾಡುವೆನು; ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು.


ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಕಂಡುಬಂದಿದ್ದಾರೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.


ಆಹಾ, ಕರ್ತನಾದ ಯೆಹೋವನೆಂಬ ನಾನು ಪಾಪಮಯರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಅದನ್ನು ಭೂಮಂಡಲದೊಳಗಿಂದ ನಾಶಮಾಡುವೆನು; ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು. ಇದು ಯೆಹೋವನ ನುಡಿ.


ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನ್ನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರಿಸುತ್ತಿದ್ದೆನು.


ಅದಕ್ಕೆ ನೀನು ಸೇವಕರಾದ ನಮಗೆ - ನಾನು ಆ ಹುಡುಗನನ್ನು ನೋಡಬೇಕು, ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಅಪ್ಪಣೆಕೊಡಲು


ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿಮೇಘಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದನು.


ಯೆಹೋವನು ನೀತಿವಂತರ ಕೂಗನ್ನು ಕೇಳಿ ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.


ಅವನನ್ನು ಕರೆಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು ಎಂದು ಅಪ್ಪಣೆಕೊಡಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು