Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:6 - ಕನ್ನಡ ಸತ್ಯವೇದವು J.V. (BSI)

6 ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತಾಗಿ ಕಟ್ಟಿಕೊಂಡು ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ; ಸಮುದ್ರದ ನೀರನ್ನು ಕರೆದು ಭೂಮಂಡಲದ ಮೇಲೆ ಹೊಯ್ಯುತ್ತಾನೆ; ಯೆಹೋವನೆಂಬದೇ ಆತನ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತನ್ನಾಗಿ ಕಟ್ಟಿಕೊಂಡು, ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ. ಸಮುದ್ರದ ನೀರನ್ನು ಸೇದಿ, ಭೂಮಂಡಲದ ಮೇಲೆ ಹೊಯ್ಯುತ್ತಾನೆ, ಯೆಹೋವನೆಂಬುವುದೇ ಆತನ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಉನ್ನತದಲ್ಲಿ ಹಲವು ಉಪ್ಪರಿಗೆಗಳನ್ನು ನಿರ್ಮಿಸುವವ ಆತನೆ ಭುವಿಯಲ್ಲಿ ಗುಮ್ಮಟವನ್ನು ಸ್ಥಾಪಿಸಿಕೊಂಡವನು ಆತನೆ ಸಾಗರದ ನೀರನ್ನು ಸೇದಿ ಧರೆಯ ಮೇಲೆ ಸುರಿಯುವವ ಆತನೆ ಆತನ ನಾಮಧೇಯ ಸರ್ವೇಶ್ವರಸ್ವಾಮಿ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ಆಕಾಶದ ಮೇಲೆ ತನಗಾಗಿ ಮೇಲುಪ್ಪರಿಗೆಗಳನ್ನು ಕಟ್ಟಿದನು. ಭೂಮಿಯ ಮೇಲೆ ಆಕಾಶವನ್ನು ಹರಡಿದನು. ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಮಳೆಗೆರೆಯುವಂತೆ ಮಾಡುವನು. ಆತನ ಹೆಸರು ಯೆಹೋವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಕಾಶದಲ್ಲಿ ಉಪ್ಪರಿಗೆಗಳನ್ನು ಕಟ್ಟಿಕೊಂಡು, ಭೂಮಿಯ ಮೇಲೆ ತಮ್ಮ ತಂಡಗಳನ್ನು ಸ್ಥಾಪಿಸಿ, ಸಮುದ್ರದ ನೀರನ್ನು ಕರೆದು, ಅದನ್ನು ಭೂಮಿಯ ಮೇಲೆ ಹೊಯ್ಯುವಂತೆ ಮಾಡುವಾತರು ಅವರೇ. ಅವರ ಹೆಸರು ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:6
9 ತಿಳಿವುಗಳ ಹೋಲಿಕೆ  

ಕೃತ್ತಿಕೆಯನ್ನೂ ಮೃಗಶಿರವನ್ನೂ ಸೃಷ್ಟಿಸಿ ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ ಹಗಲನ್ನು ಇರುಳಿಗೆ ಮಾರ್ಪಡಿಸಿ ಸಾಗರದ ಜಲವನ್ನು ಬರಮಾಡಿಕೊಂಡು ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ; ಯೆಹೋವನೆಂಬದೇ ಆತನ ನಾಮಧೇಯ;


ಇಗೋ, ಪರ್ವತಗಳನ್ನು ರೂಪಿಸಿ ವಾಯುವನ್ನು ಸೃಷ್ಟಿಸಿ ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂವಿುಯ ಉನ್ನತಪ್ರದೇಶಗಳಲ್ಲಿ ನಡೆಯುವಾತನಿಗೆ ಸೇನಾಧೀಶ್ವರದೇವರಾದ ಯೆಹೋವನೆಂಬದೇ ನಾಮಧೇಯ.


ಜಲರಾಶಿಗಳ ಮೇಲೆ ಉಪ್ಪರಿಗೆಗಳನ್ನು ಕಟ್ಟಿಕೊಂಡಿದ್ದೀ; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿದ್ದೀ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.


ನೀನು ನಿನ್ನ ಮೇಲಂತಸ್ತುಗಳಿಂದ ಪರ್ವತಗಳಿಗೆ ನೀರು ಕೊಡುತ್ತೀ; ನಿನ್ನ ಕಾರ್ಯಫಲದಿಂದ ಭೂವಿುಯು ತೃಪ್ತಿಹೊಂದುತ್ತದೆ.


ನೀವು ನನಗೆ ಅಂಜುವದಿಲ್ಲವೋ, ನನ್ನೆದುರಿಗೆ ನಡುಗುವದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇವಿುಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು