Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 1:14 - ಕನ್ನಡ ಸತ್ಯವೇದವು J.V. (BSI)

14 ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆಹೊಲ್ಯಾರ್, ದೆವ್‍ದುತಾ ಕೊನ್ ಹೊವ್ನ್ ಹಾತ್ ತೆನಿ ದೆವಾಚಿ ಸೆವಾ ಕರ್‍ತಲೆ ಅನಿ ಜೆ ಕೊನ್ ಸುಟ್ಕಾ ಸ್ವಿಕಾರ್ ಕರ್‍ತಾ ತೆಂಕಾ ಮಜತ್ ಕರುಕ್ ಮನುನ್ ದೆವಾನ್ ಧಾಡುನ್ ದಿಲ್ಲೊ ಆತ್ಮೊ ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 1:14
65 ತಿಳಿವುಗಳ ಹೋಲಿಕೆ  

ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುತ್ತಾನೆ.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.


ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು, ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ ಎಂದು ಹೇಳಿದನು.


ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು -


ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು -


ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು. ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ - ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.


ಆ ದೂತನು - ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನ ಕೂಡ ಮಾತಾಡಿ ಈ ಶುಭವರ್ತಮಾನವನ್ನು ನಿನಗೆ ತಿಳಿಸುವದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.


ಅವನು ಇದನ್ನು ಆಲೋಚಿಸುತ್ತಿರುವಾಗ ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು - ಎಲೈ ಯೋಸೇಫನೇ, ದಾವೀದನ ವಂಶದವನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳುವದಕ್ಕೆ ಅಂಜಬೇಡ. ಆಕೆಯ ಗರ್ಭವು ಪವಿತ್ರಾತ್ಮದಿಂದಲೇ ಆದದ್ದು.


ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ.


ಹೀಗಿರುವಲ್ಲಿ ಸ್ವಲ್ಪ ಕಾಲದ ಮೇಲೆ ಆ ಭಿಕ್ಷಗಾರನು ಸತ್ತನು; ದೇವದೂತರು ಅವನನ್ನು ತೆಗೆದುಕೊಂಡುಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು; ಅವನಿಗೆ ಉತ್ತರಕ್ರಿಯೆಗಳು ಆದವು.


ಆ ಘನವನ್ನು ಅವನು ದೇವರಿಗೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು.


ಫಕ್ಕನೆ ಆ ದೂತನ ಸಂಗಡ ಪರಲೋಕಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು -


ಗಾಳಿಗಳನ್ನು ನಿನ್ನ ದೂತರನ್ನಾಗಿಯೂ ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.


ಅವರು ಹೋದ ಮೇಲೆ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು - ನೀನು ಎದ್ದು ಈ ಕೂಸನ್ನೂ ಇದರ ತಾಯಿಯನ್ನೂ ಕರಕೊಂಡು ಐಗುಪ್ತದೇಶಕ್ಕೆ ಓಡಿಹೋಗಿ ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು ಅಂದನು.


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿ ಕೊಯ್ಯಲ್ಪಟ್ಟದ್ದಾಗಿ ನಿಂತಿರುವದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಏನಂದರೆ ಭೂವಿುಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳು.


ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ.


ಇಂಥವರ ವಿಷಯದಲ್ಲೇ ಆದಾಮನಿಗೆ ಏಳನೆಯ ತಲೆಯವನಾದ ಹನೋಕನು - ಇಗೋ ಕರ್ತನು ಲಕ್ಷಾಂತರ ಪರಿಶುದ್ಧದೂತರನ್ನು ಕೂಡಿಕೊಂಡು


ನಮ್ಮನ್ನು ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಯನ್ನು ಎದುರುನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿರುವದು.


ಹಾಗೆಯೇ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನದ ಫಲಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.


ಯಾವಾಗ ಕೊಡುವನಂದರೆ ಯೇಸು ಕರ್ತನು ತನ್ನ ಶಕ್ತಿಯನ್ನು ತೋರ್ಪಡಿಸುವ ದೇವದೂತರಿಂದ ಕೂಡಿದವನಾಗಿ ಉರಿಯುವ ಬೆಂಕಿಯಲ್ಲಿ ಆಕಾಶದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ ಜೊತೆಕೆಲಸದವನೂ ಸಹಭಟನೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನೆನಸಿದ್ದೇನೆ.


ಹೇಗಂದರೆ ನೀವು ನಡಿಸುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗುವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.


ಇದನ್ನು ಮಾಡುವದಕ್ಕೆ ಇವರು ಇಷ್ಟಪಟ್ಟದ್ದಲ್ಲದೆ ಇವರು ಅವರ ಹಂಗಿನವರಾಗಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದ ಸಂಪತ್ತಿಗೆ ಪಾಲುಗಾರರಾದ ಮೇಲೆ ಲೋಕಸಂಬಂಧವಾದ ಕಾರ್ಯಗಳಲ್ಲಿ ಅವರಿಗೆ ಸೇವೆಮಾಡುವ ಹಂಗಿನಲ್ಲಿದ್ದಾರಲ್ಲವೇ.


ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಕಂದಾಯ ಎತ್ತುವವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.


ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿತ್ರಾತ್ಮನು - ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.


ಇವರ ವಿಷಯವಾದ ವರ್ತಮಾನವು ಯೆರೂಸಲೇವಿುನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.


ಅವನ ಯಾಜಕವರ್ಗದ ದಿನಗಳು ತೀರಿದ ನಂತರ ಅವನು ತನ್ನ ಮನೆಗೆ ಹೋದನು.


ಮತ್ತು ಆತನು ತುತೂರಿಯ ಮಹಾ ಶಬ್ದದಿಂದ ತನ್ನ ದೂತರನ್ನು ಕಳುಹಿಸುವನು. ಅವರು ಆತನು ಆದುಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕೂ ದಿಕ್ಕುಗಳಿಂದ ಒಟ್ಟುಗೂಡಿಸುವರು.


ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು; ಅವರು ಆತನ ರಾಜ್ಯದೊಳಗಿಂದ ಎಲ್ಲಾ ಕಂಟಕರನ್ನೂ


ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದುಬಂತು; ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು, ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು; ನ್ಯಾಯಸಭೆಯವರು ಕೂತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.


ಒಂದಾನೊಂದು ದಿನ ದೇವದೂತರು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳುವದಕ್ಕೆ ಬರಲಾಗಿ ಸೈತಾನನು [ಎಂಬ ಆಪಾದಕ ದೂತನು] ಅವರ ಜೊತೆಯಲ್ಲಿ ಬಂದನು.


ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಪುರುಷನಿಗಿಂತ ಬಲಹೀನಳೆಂಬದನ್ನು ಜ್ಞಾಪಕಮಾಡಿಕೊಂಡು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಒಗತನ ಮಾಡಿರಿ. ಅವರು ಜೀವವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.


ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?


ಇದಲ್ಲದೆ ಆ ಯಾಜಕರೆಲ್ಲರು ದಿನಾಲು ಸೇವೆಮಾಡುತ್ತಾ ಎಂದಿಗೂ ಪಾಪನಿವಾರಣೆ ಮಾಡಲಾರದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇಪದೇ ಸಮರ್ಪಿಸುತ್ತಾ ನಿಂತುಕೊಂಡಿರುವರು.


ಆದರೆ ಯೇಸು ಅದಕ್ಕಿಂತ ಶ್ರೇಷ್ಠವಾದ ಯಾಜಕೋದ್ಯೋಗವನ್ನು ಹೊಂದಿದವನಾಗಿದ್ದಾನೆ; ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.


ನೀವು ಮಂದಮತಿಗಳಾಗಿರದೆ ಯಾರು ವಾಗ್ದಾನಗಳನ್ನು ನಂಬಿ ಅವುಗಳ ಫಲಕ್ಕೋಸ್ಕರ ಬಹು ದಿವಸಗಳವರೆಗೂ ಕಾದಿದ್ದು ಆ ಫಲವನ್ನು ಹೊಂದುತ್ತಾರೋ ಅವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.


ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷ, ನಿಮ್ಮೆಲ್ಲರ ಕೂಡ ಸಂತೋಷ.


ಅದು ಯಾವದಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹದೊಳಗಣ ಅಂಗಗಳೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬದೇ.


ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರೂ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.


ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಸೌಭಾಗ್ಯವನ್ನು ಹೊಂದುವರು.


ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ.


ಮಕ್ಕಳಾಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತನೊಂದಿಗೆ ಬಾಧ್ಯರು. ಹೇಗಂದರೆ ಕ್ರಿಸ್ತನಿಗೆ ಸಂಭವಿಸಿದ ಬಾಧೆಗಳಲ್ಲಿ ನಾವು ಪಾಲುಗಾರರಾಗುವದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಅಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.


ಅದಕ್ಕೆ ಮೀಕಾಯೆಹುವು - ಅದಿರಲಿ, ಯೆಹೋವನ ವಾಕ್ಯವನ್ನು ಕೇಳು. ಯೆಹೋವನು ತನ್ನ ಸಿಂಹಾಸನದ ಮೇಲೆ ಕೂತುಕೊಂಡದ್ದನ್ನೂ ಪರಲೋಕ ಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆನು.


ಯಾಕೋಬನು ಒಂಟಿಗನಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.


ಆಗ ಸೈತಾನನು ಆತನನ್ನು ಬಿಟ್ಟುಬಿಟ್ಟನು. ಮತ್ತು ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.


ಆತನು ಹೊರಟು ದಾರಿಹಿಡಿದು ಹೋಗುವಾಗ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ - ಒಳ್ಳೇ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು ಆತನನ್ನು ಕೇಳಲಾಗಿ ಯೇಸು ಅವನಿಗೆ -


ಹೀಗೆ ಒಂದು ವೇಳೆ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಸಹ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.


ಹೇಗಂದರೆ ಲೋಕವು ಜ್ಞಾನವೆನಿಸುವ ಮಾರ್ಗದಿಂದ ದೇವರನ್ನು ತಿಳುಕೊಳ್ಳದೆ ಹೋದದ್ದು ದೇವರ ಜ್ಞಾನದ ಸಂಕಲ್ಪವೆ; ಹೀಗಾದ ಮೇಲೆ ಹುಚ್ಚು ಮಾತು ಎಣಿಸಿಕೊಂಡಿರುವ ನಮ್ಮ ಪ್ರಸಂಗದಿಂದಲೇ ನಂಬುವವರನ್ನು ರಕ್ಷಿಸುವದು ದೇವರಿಗೆ ಒಳ್ಳೇದೆಂದು ತೋಚಿತು.


ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;


ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು