Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 1:2 - ಕನ್ನಡ ಸತ್ಯವೇದವು J.V. (BSI)

2 ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇವಿುಸಿದನು. ಈತನ ಮೂಲಕವೇ ಜಗತ್ತನ್ನು ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಖರೆ ಹ್ಯಾ ಆಕ್ರಿಚ್ಯಾ ದಿಸಾತ್ನಿ ದೆವಾನ್ ಅಪ್ನಾಚ್ಯಾ ಲೆಕಾಚ್ಯಾ ಮುಖಾಂತರ್ ಬೊಲ್ಲ್ಯಾನ್. ಹ್ಯಾ ಲೆಕಾಚ್ಯಾ ವೈನಾಚ್ ದೆವಾನ್ ಸಗ್ಳೊ ಜಗ್ ರಚ್ಲ್ಯಾನ್. ರಚುನ್ ಹೊಲ್ಲೆ ಸಗ್ಳ್ಯಾಚ್ಯಾ ವೈರ್ ಆಕ್ರಿಕ್ ಎಕ್ಲ್ಯಾಕ್ ಅದಿಕಾರ್ ದಿವ್ಕ್ ಮನುನ್ ದೆವಾನ್ ಎಚುನ್ ಕಾಡಲ್ಲೊ ಹ್ಯೊಚ್ ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 1:2
70 ತಿಳಿವುಗಳ ಹೋಲಿಕೆ  

ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲಕಾರಣನು; ನಾವು ಆತನಿಗಾಗಿ ಉಂಟಾದೆವು. ಮತ್ತು ನಮಗೆ ಒಬ್ಬನೇ ಕರ್ತ; ಆತನು ಯೇಸು ಕ್ರಿಸ್ತನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು, ನಾವೂ ಆತನ ಮುಖಾಂತರ ಉಂಟಾದೆವು.


ಆತನ ಮೂಲಕವಾಗಿ ಸಮಸ್ತವು ಉಂಟಾಯಿತು; ಉಂಟಾಗಿರುವ ವಸ್ತುಗಳಲ್ಲಿ ಆತನಿಲ್ಲದೆ ಒಂದಾದರೂ ಉಂಟಾಗಲಿಲ್ಲ.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಆತನು ಜಗದುತ್ಪತ್ತಿಗೆ ಮೊದಲೇ ಗೊತ್ತು ಮಾಡಲ್ಪಟ್ಟು ಅಂತ್ಯಕಾಲದಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಯೇಸು ತನ್ನ ಕೈಯಲ್ಲಿ ತಂದೆ ಎಲ್ಲವನ್ನು ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟುಬಂದಿದ್ದು ಮತ್ತೆ ದೇವರ ಬಳಿಗೆ ಹೋಗುತ್ತೇನೆಂತಲೂ ತಿಳುಕೊಂಡವನಾಗಿ ಊಟವನ್ನು ಬಿಟ್ಟು ಎದ್ದು


ಹೀಗೆ ಮಾತಾಡುತ್ತಿರುವಾಗಲೇ ಕಾಂತಿಯುಳ್ಳ ಮೋಡವು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನನ್ನು ನಾನು ಮೆಚ್ಚಿದ್ದೇನೆ; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.


ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಂಬಿಕೆಯಿಂದಲೇ ನಾವು ತಿಳಿದುಕೊಂಡು ಕಾಣಿಸುವ ಈ ಜಗತ್ತು ದೃಶ್ಯ ವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.


ಮಕ್ಕಳಾಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತನೊಂದಿಗೆ ಬಾಧ್ಯರು. ಹೇಗಂದರೆ ಕ್ರಿಸ್ತನಿಗೆ ಸಂಭವಿಸಿದ ಬಾಧೆಗಳಲ್ಲಿ ನಾವು ಪಾಲುಗಾರರಾಗುವದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಆಗ ಮಹಾಯಾಜಕನು - ನಿನಗೆ ಜೀವಸ್ವರೂಪನಾದ ದೇವರ ಆಣೆಯನ್ನು ಇಡುತ್ತೇನೆ; ನೀನು ದೇವಕುಮಾರನಾದ ಕ್ರಿಸ್ತನು ಹೌದೋ ಅಲ್ಲವೋ ಎಂಬದನ್ನು ನಮಗೆ ಹೇಳಬೇಕು ಎಂದು ಅನ್ನಲಾಗಿ ಯೇಸು -


ಆದರೆ ಆ ಒಕ್ಕಲಿಗರು ಅವನ ಮಗನನ್ನು ಕಂಡು - ಇವನೇ ಬಾಧ್ಯಸ್ಥನು, ಬನ್ನಿ ಇವನನ್ನು ಕೊಂದುಹಾಕೋಣ, ಇವನ ಸ್ವಾಸ್ತ್ಯವನ್ನು ನಾವೇ ತೆಗೆದುಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು


ಹೀಗೆ ಆತನು ಮಗನಾಗಿದ್ದರೂ ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.


ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಸರ್ವಕಾರ್ಯಕರ್ತನಾದ ಯೆಹೋವನು, ನಾನೊಬ್ಬನೇ ಗಗನಮಂಡಲವನ್ನು ಹರವಿ ಭೂಮಂಡಲವನ್ನು ವಿಸ್ತರಿಸುವವನಾಗಿದ್ದೇನೆ; ನನಗೆ ಸಹಾಯಕನುಂಟೋ?


ಅವನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ಜನ್ಮದ ಆರಂಭವೂ ಆಯುಷ್ಯದ ಅಂತ್ಯವೂ ಇಲ್ಲ. ಅವನು ದೇವರ ಮಗನಿಗೆ ಸಮಾನ ಮಾಡಲ್ಪಟ್ಟಿದ್ದಾನೆ. ಅವನು ನಿರಂತರವಾಗಿ ಯಾಜಕನಾಗಿರುವವನು.


ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;


ನನಗೆ ನೀನು ಮಗನು; ನಾನೇ ಈಹೊತ್ತು ನಿನ್ನನ್ನು ಪಡೆದಿದ್ದೇನೆ. ಎಂತಲೂ ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು ಎಂತಲೂ ದೇವರು ತನ್ನ ದೂತರೊಳಗೆ ಯಾವನಿಗಾದರೂ ಎಂದಾದರೂ ಹೇಳಿದ್ದುಂಟೋ?


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಸಕಲದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು (ನಿಮಗೆ) ಏರ್ಪಡಿಸುವನು; ಅವನಿಗೇ ನೀವು ಕಿವಿಗೊಡಬೇಕು.


ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.


ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಾಧೀನರಾದವರನ್ನು ವಿಮೋಚಿಸಬೇಕೆಂತಲೂ ಪುತ್ರರ ಪದವಿಯನ್ನು ನಮಗೆ ದೊರಕಿಸಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ ಧರ್ಮಶಾಸ್ತ್ರಧೀನನಾಗಿಯೂ ಬಂದನು.


ಎಲ್ಲಾ ಜನಗಳಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿದ ವಾಕ್ಯವು ನಿಮಗೇ ತಿಳಿದಿರುವದು.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳನ್ನುವದಿಲ್ಲ; ಯಜಮಾನನು ಮಾಡುವಂಥದು ಆಳಿಗೆ ತಿಳಿಯುವದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಹೇಳಿದ್ದೇನೆ; ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವವು.


ಯೆಹೋವನು ತನ್ನ ಹೃದಯಾಲೋಚನೆಯನ್ನು ನಡಿಸಿ ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.


ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರಲ್ಲಾ.


ಪವಿತ್ರವಾದ ಆತ್ಮವುಳ್ಳವನಾಗಿದ್ದು ಸತ್ತಮೇಲೆ ಜೀವಿತನಾಗಿ ಎದ್ದು ಬಂದ ಮಹತ್ಕಾರ್ಯದಿಂದ ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.


ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;


ನೀನು ಅವನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೆ ಅವನು ನಿತ್ಯಜೀವವನ್ನು ಕೊಡಬೇಕೆಂದು ಅವನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿಯಲ್ಲಾ.


ತಂದೆಗೆ ಇರುವದೆಲ್ಲಾ ನನ್ನದು; ಆದದರಿಂದಲೇ ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಸುವನೆಂದು ಹೇಳಿದೆನು.


ಅವನಿಗೆ ಇನ್ನೂ ಒಬ್ಬನಿದ್ದನು; ಯಾರಂದರೆ ಅವನ ಮುದ್ದು ಮಗನೇ. ನನ್ನ ಮಗನಿಗಾದರೂ ಮರ್ಯಾದೆ ತೋರಿಸಿಯಾರೆಂದು ಧಣಿಯು ಕಡೆಯಲ್ಲಿ ಅವನನ್ನು ಅವರ ಬಳಿಗೆ ಕಳುಹಿಸಿದನು.


ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾದ ಸುವಾರ್ತೆಯ ಪ್ರಾರಂಭವು.


ಉಳಿದುಕೊಂಡು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು ಎಂದು ಹೇಳಿದನು.


ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ಬಿದ್ದು ಕಾರ್ಮುಗಿಲಿನೋಪಾದಿಯಲ್ಲಿ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶನದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.


ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ; ಆತನೇ ದೇವರು, ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು; ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗನ್ನುತ್ತಾನೆ - ನಾನೇ ಯೆಹೋವನು, ಇನ್ನು ಯಾವನೂ ಅಲ್ಲ.


ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ ಎಂದು ಹೇಳಿದನು.


ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯಮಾಡುತ್ತಾ -


ಮಗನ ವಿಷಯದಲ್ಲಿಯಾದರೋ - ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ;


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ಯಾಕೋಬನು ತನ್ನ ಮಕ್ಕಳನ್ನು ಕರಸಿ - ನೀವೆಲ್ಲರೂ ಕೂ ಡಿಬನ್ನಿರಿ; ಮುಂದಿನ ಕಾಲದಲ್ಲಿ ನಿಮಗೆ ಸಂಭವಿಸುವದನ್ನು ತಿಳಿಸುತ್ತೇನೆ.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಟ್ಟು ಸಾಯಬೇಕಾಗಿತ್ತು. ಆದರೆ ಒಂದೇ ಸಾರಿ ಯುಗಗಳ ಸಮಾಪ್ತಿಯಲ್ಲೇ ಆತನು ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ತನ್ನನ್ನು ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.


ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಿಚಾರ ನಡೆಯಿತು.


ಆದರೆ ರಹಸ್ಯಗಳನ್ನು ವ್ಯಕ್ತಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಪರಲೋಕದಲ್ಲಿದ್ದಾನೆ; ಉತ್ತರಕಾಲದಲ್ಲಿ ನಡೆಯತಕ್ಕದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ -


ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.


ಭೂಲೋಕವನ್ನುಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ; ನನ್ನ ಕೈಗಳೇ ಆಕಾಶ ಮಂಡಲವನ್ನು ಹರಡಿದವು; ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.


ಆಗಲಿ; ನಾನು ನನ್ನ ಸ್ವಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ;


ಆಗ - ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ಅದನ್ನು ಬಿತ್ತುವ ವೈರಿ ಅಂದರೆ ಸೈತಾನನು; ಸುಗ್ಗೀಕಾಲ ಅಂದರೆ ಯುಗದ ಸಮಾಪ್ತಿ; ಕೊಯ್ಯುವವರು ಅಂದರೆ ದೇವದೂತರು.


ಆದರೆ ಆ ಒಕ್ಕಲಿಗರು - ಇವನೇ ಬಾಧ್ಯಸ್ಥನು; ಬನ್ನಿ, ಇವನನ್ನು ಕೊಂದುಹಾಕೋಣ; ಆಗ ಸ್ವಾಸ್ತ್ಯ ನಮ್ಮದಾಗುವದು ಎಂದು ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡು


ಆತನು ಲೋಕದಲ್ಲಿ ಇದ್ದನು; ಮತ್ತು ಲೋಕವು ಆತನ ಮೂಲಕವಾಗಿ ಉಂಟಾಯಿತು; ಆದರೂ ಲೋಕವು ಆತನನ್ನು ಅರಿಯಲಿಲ್ಲ.


ತಂದೆಯು ತಾನು ಹೇಗೆ ಸ್ವತಃಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃಜೀವವುಳ್ಳವನಾಗಿರುವಂತೆ ಮಾಡಿದನು.


ಮತ್ತು ಮಗನು ಮನುಷ್ಯಕುಮಾರನಾಗಿರುವದರಿಂದ ತೀರ್ಪುಮಾಡುವ ಅಧಿಕಾರವನ್ನೂ ಅವನಿಗೆ ಕೊಟ್ಟನು.


ಮೋಶೆಯ ಸಂಗಡ ದೇವರು ಮಾತಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ಅರಿಯೆವು ಅಂದರು.


ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವದಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇವಿುಸಿ ಇದುವರೆಗೆ ಮರೆಮಾಡಿದ ಜ್ಞಾನವೇ.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇ ತನಕ ದೃಢವಾಗಿ ಹಿಡಿದುಕೊಂಡವರಾದರೆ ನಾವೇ ದೇವರ ಮನೆಯವರು.


ಆಕಾಶಮಂಡಲಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಪ್ರತಿಜ್ಞೆಯನ್ನು ಬಿಡದೆ ಹಿಡಿಯೋಣ.


ಧರ್ಮಶಾಸ್ತ್ರವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇವಿುಸುತ್ತದೆ; ಆದರೆ ಧರ್ಮಶಾಸ್ತ್ರದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ನೇವಿುಸುತ್ತದೆ.


ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ತನ್ನಲ್ಲಿ ದೇವರು ಆತನನ್ನೂ ಮಹಿಮೆಪಡಿಸುವನು, ಕೂಡಲೇ ಮಹಿಮೆಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು