Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 1:7 - ಕನ್ನಡ ಸತ್ಯವೇದವು J.V. (BSI)

7 ದೂತರ ವಿಷಯದಲ್ಲಿ ಹೇಳುವದೇನೆಂದರೆ - ದೇವರು ತನ್ನ ದೂತರನ್ನು ಗಾಳಿಗಳನ್ನಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವದೂತರ ವಿಷಯದಲ್ಲಿ, “ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದೇವದೂತರ ವಿಷಯದಲ್ಲಿ - “ದೇವರು ತಮ್ಮ ದೂತರನ್ನು ಬೀಸುಗಾಳಿಯನ್ನಾಗಿಯೂ ತಮ್ಮ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾರೆ,” ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ತನ್ನ ದೂತರನ್ನು ಕುರಿತು ಹೇಳಿದ್ದು ಹೀಗಿದೆ: “ದೇವರು ತನ್ನ ದೂತರನ್ನು ಗಾಳಿಗಳನ್ನಾಗಿ ಮಾಡಿದನು. ಆತನು ತನ್ನ ಸೇವಕರನ್ನು ಬೆಂಕಿಯ ಜ್ವಾಲೆಗಳಂತೆ ಮಾಡಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೂತರ ವಿಷಯದಲ್ಲಿ ದೇವರು ಮಾತನಾಡುವಾಗ, “ಅವರು ತಮ್ಮ ದೂತರನ್ನು ಆತ್ಮಗಳಾಗಿಯೂ ತಮ್ಮ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾರೆ!” ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ದೆವ್‍ದುತಾಂಚ್ಯಾ ವಿಶಯಾತ್ ದೆವ್ ಮನ್ತಾ, “ದೆವ್ ಅಪ್ನಾಚ್ಯಾ ದುತಾಕ್ನಿ ವಾರ್ಯಾ ಸಾರ್ಕೆ ಕರ್‍ತಾ, ಅನಿ ಅಪ್ನಾಚ್ಯಾ ಸೆವಕಾಕ್ನಿ ಪೆಟ್ತಲ್ಯಾ ಅಗಿ ಸಾರ್ಕೆ ಕರ್‍ತಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 1:7
10 ತಿಳಿವುಗಳ ಹೋಲಿಕೆ  

ಗಾಳಿಗಳನ್ನು ನಿನ್ನ ದೂತರನ್ನಾಗಿಯೂ ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.


ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?


ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು.


ಅವರು ಮಾತಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಳಿಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಹೋದನು.


ಇವು ಆಕಾಶದ ನಾಲ್ಕು ಗಾಳಿಗಳು; ಭೂಲೋಕದೊಡೆಯನ ಸನ್ನಿಧಾನದಲ್ಲಿ ನಿಂತಿದ್ದು ಅಲ್ಲಿಂದ ಹೊರಟು ಬರುತ್ತಾ ಇವೆ ಎಂದುತ್ತರ ಕೊಟ್ಟನು.


ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದುಬಂತು; ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು, ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು; ನ್ಯಾಯಸಭೆಯವರು ಕೂತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.


ಆತನ ಸುತ್ತ ಸೆರಾಫಿಯರು ಇದ್ದರು; ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಎರಡನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದನು.


ಅದಲ್ಲದೆ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಆತನು ಏದೆನ್ ವನದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಧಗಧಗನೆ ಪ್ರಜ್ವಲಿಸುತ್ತಾ ಸುತ್ತುವ ಕತ್ತಿಯನ್ನೂ ಇರಿಸಿದನು.


ಅದಕ್ಕೆ ಮೀಕಾಯೆಹುವು - ಅದಿರಲಿ, ಯೆಹೋವನ ವಾಕ್ಯವನ್ನು ಕೇಳು. ಯೆಹೋವನು ತನ್ನ ಸಿಂಹಾಸನದ ಮೇಲೆ ಕೂತುಕೊಂಡದ್ದನ್ನೂ ಪರಲೋಕ ಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು