Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:1 - ಕನ್ನಡ ಸತ್ಯವೇದವು J.V. (BSI)

1 ಧರ್ಮಶಾಸ್ತ್ರದಲ್ಲಿ ಮುಂದೆ ಬರಬೇಕಾಗಿದ್ದ ಮೇಲುಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲವಾದದರಿಂದ ಆ ಧರ್ಮಶಾಸ್ತ್ರವು ವರುಷ ವರುಷಕ್ಕೆ ಪದೇ ಪದೇ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಧರ್ಮಶಾಸ್ತ್ರವು ಬರಲಿದ್ದ ಸೌಭಾಗ್ಯದ ಛಾಯೆಯೇ ಹೊರತು ಅದರ ನಿಜಸ್ವರೂಪವಲ್ಲ. ವರ್ಷವರ್ಷವೂ ನಿರಂತರವಾಗಿ ಅದೇ ಬಲಿಗಳು ಅರ್ಪಿತವಾಗುತ್ತಿವೆ. ಹೀಗಿರುವಲ್ಲಿ, ದೇವರನ್ನು ಅರಸಿ ಬರುತ್ತಿರುವವರನ್ನು ಇಂಥ ಬಲಿಗಳಿಂದ ಸಿದ್ಧಿಗೆ ತರಲು ಹೇಗೆ ತಾನೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಧರ್ಮಶಾಸ್ತ್ರವು ಮುಂದೆ ಬರುವ ಉತ್ತಮ ಸಂಗತಿಗಳ ಅಸ್ಪಷ್ಟ ಚಿತ್ರಣವಾಗಿದೆ. ಅದು ನಿಜವಾದ ಸಂಗತಿಗಳ ಸ್ಪಷ್ಟ ಚಿತ್ರಣವಲ್ಲ. ಪ್ರತಿ ವರ್ಷವೂ ಒಂದೇ ರೀತಿಯ ಯಜ್ಞಗಳನ್ನು ಅರ್ಪಿಸಬೇಕೆಂದು ಅದು ಜನರಿಗೆ ತಿಳಿಸಿತು. ದೇವರನ್ನು ಆರಾಧಿಸಲು ಬರುವ ಜನರು ಅದೇ ರೀತಿಯ ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆದರೆ ಆ ಜನರನ್ನು ಧರ್ಮಶಾಸ್ತ್ರವು ಎಂದಿಗೂ ನಿಷ್ಕಳಂಕರನ್ನಾಗಿ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೋಶೆಯ ನಿಯಮವು ಬರಬೇಕಾಗಿದ್ದ ವಸ್ತುಗಳ ಛಾಯೆಯಾಗಿದೆ ಹೊರತು ಅವುಗಳ ನಿಜಸ್ವರೂಪವಲ್ಲ. ಈ ಕಾರಣದಿಂದ ಅದು ಪ್ರತಿವರ್ಷ ಯಾವಾಗಲೂ ಯಜ್ಞಗಳನ್ನು ಅರ್ಪಿಸುವುದಕ್ಕೆ ಬರುವವರನ್ನು ಮೋಶೆಯ ನಿಯಮವು ಎಂದಿಗೂ ಪರಿಪೂರ್ಣತೆಗೆ ತರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮೊಯ್ಜೆಚೆ ಖಾಯ್ದೆ ಫಿಡೆ ಯೆತಲ್ಯಾ ಬರ್‍ಯಾಪಾನಾಚಿ ಸಾವ್ಳಿ ಶಿವಾಯ್ ತೆಂಚೊ ಖರೊ ರುಪ್ ನ್ಹಯ್, ಪರ್ತುನ್ ಪರ್ತುನ್ ವರ್ಸಾ ಬಲಿ ದಿಲ್ಯಾರ್ಬಿ ತೆಚ್ಯಾ ವೈನಾ ದೆವಾಚೆ ಆರಾದನ್ ಕರ್‍ತಲ್ಯಾಕ್ನಿ ಸಂಪುರ್ನ್ ಕರುಕ್ ಖಾಯ್ದ್ಯಾಂಚಾನ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:1
13 ತಿಳಿವುಗಳ ಹೋಲಿಕೆ  

ಅವರು ಪರಲೋಕದಲ್ಲಿರುವ ದೇವಾಲಯದ ಪ್ರತಿರೂಪವೂ ಛಾಯೆಯೂ ಆಗಿರುವ ಆಲಯದಲ್ಲಿ ಯಾಜಕತ್ವವನ್ನು ನಡಿಸುವವರು. ಮೋಶೆಯು ದೇವದರ್ಶನಗುಡಾರವನ್ನು ಮಾಡುವದಕ್ಕಿದ್ದಾಗ ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನು ಮಾಡಿಸಬೇಕು ಎಂಬ ದೈವೋಕ್ತಿಯು ಅವನಿಗೆ ಉಂಟಾಯಿತಲ್ಲಾ.


ಆದರೆ ಕ್ರಿಸ್ತನು ಈಗ ದೊರೆತಿರುವ ಮೇಲುಗಳನ್ನು ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಸೃಷ್ಟಿಗೆ ಸಂಬಂಧಪಡದಂಥ ಘನವಾಗಿಯೂ ಉತ್ಕೃಷ್ಟವಾಗಿಯೂ ಇರುವ ಗುಡಾರದಲ್ಲಿ ಸೇವೆಯನ್ನು ಮಾಡುವವನಾಗಿ


ಇವು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ; ಇವುಗಳ ನಿಜಸ್ವರೂಪವು ಕ್ರಿಸ್ತನೇ.


ಪರಲೋಕವಸ್ತುಗಳಿಗೆ ಪ್ರತಿರೂಪವಾಗಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಸಾಕ್ಷಾತ್ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.


ಇದಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯ ರಕ್ತವನ್ನು ತೆಗೆದುಕೊಂಡು ಪವಿತ್ರಾಲಯದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪರಲೋಕದಲ್ಲಿ ಪ್ರವೇಶಿಸಲಿಲ್ಲ;


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿವಿುತ್ತ ನಿರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು. ಏನಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ನರಭಾವದ ರೂಪದಲ್ಲಿ ಕಳುಹಿಸಿಕೊಟ್ಟು ನರಭಾವದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ಇಸ್ರಾಯೇಲ್ಯರಿಗೆ ಉಂಟಾದ ಧರ್ಮಶಾಸ್ತ್ರವು ಲೇವಿಕ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆಯಷ್ಟೆ. ಆ ಯಾಜಕತ್ವದಿಂದ ಸಂಪೂರ್ಣಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿಜೆದೇಕನ ತರಹದ ಬೇರೊಬ್ಬ ಯಾಜಕನು ಬರುವದಕ್ಕೆ ಅವಶ್ಯವೇನಿತ್ತು?


ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.


ಸರ್ವಾಂಗಹೋಮಪಶುವನ್ನೂ ಯಥಾವಿಧಿಯಾಗಿ ಸಮರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು