Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:19 - ಕನ್ನಡ ಸತ್ಯವೇದವು J.V. (BSI)

19-20 ಹೀಗಿರುವಲ್ಲಿ ಸಹೋದರರೇ, ಯೇಸು ನಮಗೋಸ್ಕರ ಪ್ರತಿಷ್ಠಿಸಿದ ಜೀವವುಳ್ಳ ಹೊಸ ದಾರಿಯಲ್ಲಿ ಆತನ ರಕ್ತದ ಮೂಲಕ ಆತನ ಶರೀರವೆಂಬ ತೆರೆಯ ಮುಖಾಂತರ ದೇವರ ಸಮಕ್ಷಮದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19-20 ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೀಗಿರುವಲ್ಲಿ, ಪ್ರಿಯ ಸಹೋದರರೇ, ಯೇಸುಸ್ವಾಮಿ ತಮ್ಮ ದೇಹವೆಂಬ ತೆರೆಯ ಮೂಲಕ ನಮಗೆ ಹೊಸದಾದ ಸಜ್ಜೀವಮಾರ್ಗವನ್ನು ತೆರೆದಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19-20 ಸಹೋದರ ಸಹೋದರಿಯರೇ, ನಾವು ಮಹಾ ಪವಿತ್ರಸ್ಥಳವನ್ನು ಪ್ರವೇಶಿಸಲು ಸಂಪೂರ್ಣವಾಗಿ ಸ್ವತಂತ್ರರಾಗಿದ್ದೇವೆ. ಯೇಸು ನಮಗಾಗಿ ತೆರೆದಿರುವ ಹೊಸ ಮಾರ್ಗದ ಮೂಲಕ ನಾವು ಭಯವಿಲ್ಲದೆ ಪ್ರವೇಶಿಸಬಹುದು. ಅದು ಜೀವವುಳ್ಳ ಮಾರ್ಗ. ಕ್ರಿಸ್ತನ ದೇಹವೆಂಬ ತೆರೆಯ ಮೂಲಕ ಈ ಹೊಸ ಮಾರ್ಗವು ನಮ್ಮನ್ನು ಮುಂದಕ್ಕೆ ಕೊಂಡೊಯ್ಯವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ಪ್ರಿಯರೇ, ಯೇಸುವಿನ ರಕ್ತದಿಂದ ಅವರ ದೇಹವೆಂಬ ಪರದೆಯ ಮೂಲಕ ನಮಗೆ ತೆರೆಯಲಾದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಾಜ್ಯಾ ಭಾವಾನು ಅನಿ ಭೆನಿಯಾನು ಜೆಜುಚ್ಯಾ ಮರ್‍ನಾ ವೈನಾ ಅಮ್ಕಾ ಅಗ್ದಿ ಪವಿತ್ರ್ ಜಾಗ್ಯಾರ್ ಜಾತಲೊ ಸಗ್ಳೊ ಸ್ವತಂತ್ರ್ ಗಾವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:19
20 ತಿಳಿವುಗಳ ಹೋಲಿಕೆ  

ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.


ಹೋತಗಳ ಮತ್ತು ಹೋರಿಕರಗಳ ರಕ್ತವನ್ನು ತೆಗೆದುಕೊಳ್ಳದೆ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ದೇವರ ಸನ್ನಿಧಾನಕ್ಕೆ ಪ್ರವೇಶಿಸಿದನು.


ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ದಯೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾಸನದ ಮುಂದೆ ಬರೋಣ.


ದೇವರ ಸಾನ್ನಿಧ್ಯ ಸೇರುವದಕ್ಕೆ ನಮಗಿರುವ ಭರವಸವುಳ್ಳ ಧೈರ್ಯವು ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗೆ ಉಂಟಾಯಿತು.


ನಾವು ಈಗ ನೆಲೆಗೊಂಡಿರುವ ದೇವರ ಕೃಪಾಶ್ರಯದಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾಯಿತು. ಮತ್ತು ದೇವರ ಮಹಿಮೆಯನ್ನು ಹೊಂದುವೆವೆಂಬ ಭರವಸದಿಂದ ಉಲ್ಲಾಸವಾಗಿದ್ದೇವೆ.


ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಹೊಂದುವವರಾದ ನಾವು ಕೃತಜ್ಞತೆಯುಳ್ಳವರಾಗಿದ್ದು ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಭಯದಿಂದಲೂ ಮಾಡೋಣ;


ನ್ಯಾಯತೀರ್ಪಿನ ದಿನದಲ್ಲಿ ನಮಗಿರುವ ಧೈರ್ಯದಲ್ಲಿಯೇ ಆತನ ಪ್ರೀತಿಯು ನಮ್ಮೊಳಗೆ ಸಿದ್ಧಿಗೆ ಬಂತು. ಯಾಕಂದರೆ ಕ್ರಿಸ್ತನು ಎಂಥವನಾಗಿದ್ದಾನೋ ನಾವು ಅಂಥವರಾಗಿಯೇ ಈ ಲೋಕದಲ್ಲಿದ್ದೇವೆ.


ನೀವು ತಿರಿಗಿ ಭಯದಲ್ಲಿ ಬೀಳುವ ಹಾಗೆ ದಾಸನ ಭಾವವನ್ನು ಹೊಂದಿದವರಲ್ಲ, ಮಗನ ಭಾವವನ್ನು ಹೊಂದಿದವರಾಗಿದ್ದೀರಿ. ಈ ಭಾವದಿಂದ ನಾವು ದೇವರನ್ನು ಅಪ್ಪಾ, ತಂದೆಯೇ, ಎಂದು ಕೂಗುತ್ತೇವೆ.


ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಶಿಕ್ಷಣಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.


ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಾನವೆನಿಸಿಕೊಳ್ಳುವ ಇನ್ನೊಂದು ಭಾಗವಿತ್ತು;


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇ ತನಕ ದೃಢವಾಗಿ ಹಿಡಿದುಕೊಂಡವರಾದರೆ ನಾವೇ ದೇವರ ಮನೆಯವರು.


ಪಾಪಗಳು ಪರಿಹಾರವಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಸಮರ್ಪಣೆಮಾಡುವದು ಅವಶ್ಯವಿಲ್ಲ.


ಹಾಗಾದರೆ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ಮಹಾ ಪ್ರತಿಫಲ ಉಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು