Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:2 - ಕನ್ನಡ ಸತ್ಯವೇದವು J.V. (BSI)

2 ತಂದಿದ್ದ ಪಕ್ಷದಲ್ಲಿ ಆ ಯಜ್ಞ ಸಮರ್ಪಣೆಯು ನಿಂತುಹೋಗುತ್ತಿತ್ತಲ್ಲಾ. ಯಾಕಂದರೆ ದೇವಾರಾಧನೆ ಮಾಡುವವರು ಒಂದೇ ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಪಾಪವುಂಟೆಂದು ಅವರ ಮನಸ್ಸು ಇನ್ನೂ ಸಾಕ್ಷಿಕೊಡುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹಾಗೆ ಸಿದ್ಧಿಗೆ ತರಲು ಸಾಧ್ಯವಿದ್ದಿದ್ದರೆ ಬಲಿಯರ್ಪಣೆಯು ಎಂದೋ ನಿಂತುಹೋಗುತ್ತಿತ್ತು. ಏಕೆಂದರೆ, ಆಗ ಆರಾಧಕರು ಒಮ್ಮೆಗೇ ಶುದ್ಧಿಹೊಂದಿ ತಾವು ಪಾಪಿಗಳೆಂಬ ಮನವರಿಕೆಯೇ ಇಲ್ಲದೆ ಇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅದು ಜನರನ್ನು ನಿಷ್ಕಳಂಕರನ್ನಾಗಿ ಮಾಡಿದ್ದರೆ, ಆ ಯಜ್ಞಗಳು ಈಗಾಗಲೇ ನಿಂತುಹೋಗುತ್ತಿದ್ದವು. ಆ ಜನರು ಆಗಲೇ ತಮ್ಮ ಪಾಪಗಳಿಂದ ಬಿಡುಗಡೆ ಹೊಂದಿ ಪರಿಶುದ್ಧರಾಗುತ್ತಿದ್ದರು. ತಾವು ಪಾಪಿಗಳೆಂಬ ಅರಿವು ಅವರಿಗಿರುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಒಂದು ವೇಳೆ ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಪಾಪದಿಂದ ಶುದ್ಧೀಕರಣ ಹೊಂದಿದ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆಂಚ್ಯಾ ಆರಾಧನ್‍ ಕರ್ತಲ್ಯಾ ದೆವಾನ್ ತೆಂಕಾ ಪಾಪಾತ್ನಾ ಪುರಾ ರಿತಿನ್ ಧುವ್ನ್ ಕಾಡಲ್ಲೆ ರ್‍ಹಾಲ್ಯಾರ್, ತೆನಿ ಬಲಿ ದಿತಲೆ ಮನುನ್ ತೆಂಚೊ ಮನ್ ಕಸೊ ಸಾಂಗುಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:2
8 ತಿಳಿವುಗಳ ಹೋಲಿಕೆ  

ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ, ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ಆತನು ನಮ್ಮ ಕಡೆಗೆ ತಿರುಗಿಕೊಂಡು ನಮ್ಮನ್ನು ಕನಿಕರಿಸುವನು, ನಮ್ಮ ಅಪರಾಧಗಳನ್ನು ಅಣಗಿಸುವನು. [ದೇವರೇ,] ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬಿಸಾಟುಬಿಡುವಿ.


ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.


ನಿನ್ನ ದ್ರೋಹಗಳನ್ನು ಮಂಜಿನಂತೆ ಪರಿಹರಿಸಿದ್ದೇನೆ, ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತರುವದಿಲ್ಲ ಎಂದು ಹೇಳುತ್ತಾನೆ.


[ನನ್ನ ಜನವೇ,] ನೀನು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.


ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು