ಇಬ್ರಿಯರಿಗೆ 10:23 - ಕನ್ನಡ ಸತ್ಯವೇದವು J.V. (BSI)23 ನಮ್ಮ ನಿರೀಕ್ಷೆಯನ್ನು ಕುರಿತು ನಾವು ಮಾಡಿದ ಪ್ರತಿಜ್ಞೆಯನ್ನು ನಿಶ್ಚಂಚಲವಾಗಿ ಪರಿಗ್ರಹಿಸೋಣ; ವಾಗ್ದಾನ ಮಾಡಿದಾತನು ನಂಬಿಗಸ್ತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಕೊಟ್ಟ ಮಾತನ್ನು ದೇವರು ಮೀರುವುದಿಲ್ಲ. ಆದ್ದರಿಂದ ನಾವು ನಿವೇದಿಸುವ ನಂಬಿಕೆ ನಿರೀಕ್ಷೆಯಲ್ಲಿ ಚಂಚಲರಾಗದೆ ಸದೃಢರಾಗಿರೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಮ್ಮಲ್ಲಿರುವ ನಿರೀಕ್ಷೆಯನ್ನು ದೃಢವಾಗಿ ಕಾಯ್ದುಕೊಂಡು ಅದರ ಬಗ್ಗೆ ಜನರಿಗೆ ತಿಳಿಸುವುದರಲ್ಲಿ ದೃಢವಾಗಿರೋಣ. ದೇವರು ತನ್ನ ವಾಗ್ದಾನವನ್ನು ಈಡೇರಿಸುತ್ತಾನೆ ಎಂಬ ಭರವಸೆ ನಮ್ಮಲ್ಲಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಾವು ನಮ್ಮ ನಿರೀಕ್ಷೆಯ ಅರಿಕೆಯನ್ನು ಚಂಚಲರಾಗದೆ ಬಿಗಿಯಾಗಿ ಹಿಡಿಯೋಣ. ಏಕೆಂದರೆ ವಾಗ್ದಾನ ಮಾಡಿದವರು ನಂಬಿಗಸ್ತರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಅಮಿ ಪರ್ಗಟ್ ಕರ್‍ತಲೊ ಬರೊಸೊ ಘಟ್ ಸಂಬಾಳುನ್ ಘೆಂವ್ವಾ, ಕಶ್ಯಾಕ್ ಮಟ್ಲ್ಯಾರ್, ಅಮ್ಕಾ ಗೊಸ್ಟ್ ದಿಲ್ಲೊ ದೆವ್ ಕನ್ನಾಬಿ ವಿಸ್ವಾಸಿ ಎಕಾಮಕಾಚಿ ಕಾಳ್ಜಿ ಕರುಂವಾ. ಅಧ್ಯಾಯವನ್ನು ನೋಡಿ |