Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:26 - ಕನ್ನಡ ಸತ್ಯವೇದವು J.V. (BSI)

26 ಯಾಕಂದರೆ ಸತ್ಯದ ಪರಿಜ್ಞಾನವನ್ನು ನಾವು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಇರುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಾವು ಸತ್ಯವನ್ನು ಅರಿತವರಾದ ಮೇಲೂ ಬೇಕುಬೇಕಾಗಿ ಪಾಪಮಾಡುತ್ತಲೇ ಇದ್ದರೆ, ಪಾಪಪರಿಹಾರಕ್ಕೆ ಇನ್ನು ನಮಗೆ ಬೇರೆ ಯಾವ ಬಲಿಯೂ ಇರುವುದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಾವು ಸತ್ಯವನ್ನು ತಿಳಿದುಕೊಂಡ ಮೇಲೆಯೂ ಪಾಪಗಳನ್ನು ಮಾಡುತ್ತಲೇ ಇದ್ದರೆ, ನಮ್ಮ ಪಾಪಗಳನ್ನು ಯಾವ ಯಜ್ಞವೂ ಪರಿಹರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಏಕೆಂದರೆ, ನಾವು ಸತ್ಯದ ಅರಿವನ್ನು ಹೊಂದಿದ ಮೇಲೆ ಬೇಕೆಂದು ಪಾಪ ಮಾಡುತ್ತಾ ಇದ್ದರೆ, ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಕಶ್ಯಾಕ್ ಮಟ್ಲ್ಯಾರ್, ಖರೆ ಕಾಯ್ ಮನುನ್ ಕಳ್ವುನ್ ಘೆಟಲ್ಲೆ ಅಮಿ ಪಾಜೆ ಮನುನ್ ಪಾಪ್ ಕರ್ಲ್ಯಾರ್ ತೊ ಪಾಪ್ ಮಾಪ್ ಕರುಕ್ ಅನಿ ಎಕ್ ದುಸ್ರಿ ಬಲಿ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:26
20 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ - ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ; ನಮಗೆ ಕಣ್ಣು ಕಾಣುತ್ತವೆ ಅನ್ನುತ್ತೀರಾದ್ದರಿಂದ ನಿಮ್ಮ ಪಾಪವು ಉಳಿದದೆ.


ತನ್ನ ಯಜಮಾನನ ಚಿತ್ತವನ್ನು ತಿಳಿದ ಆಳು ಸಿದ್ಧಮಾಡದೆಹೋದರೆ ಅಥವಾ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಅವನು ಬಹಳ ಪೆಟ್ಟು ತಿನ್ನುವನು.


ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನು ಪಾಪಕ್ಕೊಳಗಾಗಿದ್ದಾನೆ.


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ; ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುವದಿಲ್ಲ.


ಅವರು ಸತ್ಯದ ಮೇಲೆ ಪ್ರೀತಿಯನ್ನಿಡದ ಕಾರಣದಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.


ನೀವು ಇದನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾವನು ಅಹಂಕಾರದಿಂದ ನಿರಾಕರಿಸುತ್ತಾನೋ ಅವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲ್ಯರ ಮಧ್ಯದಿಂದ ತೆಗೆದುಹಾಕಬೇಕು.


ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಹೇಳಬೇಕಾದದ್ದೇನಂದರೆ - ಯಾವನೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಿಯಾದರೆ [ಅವನಿಗೆ ದೋಷಪರಿಹಾರ ಮಾಡುವ ಕ್ರಮ ಹೇಗಂದರೆ - ]


ಇಸ್ರಾಯೇಲ್ಯರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ


ಮನುಷ್ಯನು ಮನುಷ್ಯನಿಗೆ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ವಹಿಸುವವರಾರು ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಅವರನ್ನು ಸಾಯಿಸಬೇಕೆಂದಿದ್ದನಷ್ಟೆ.


ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬದು ಆತನ ಚಿತ್ತವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು